ರಸ್ತೆ ಅಗಲೀಕರಣ: ಕಟ್ಟಡಗಳ ತೆರವು

Team Udayavani, Feb 12, 2021, 3:51 PM IST

Road widening: Clearance of buildings

ಬಾಳೆಹೊನ್ನೂರು: ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಸ್ತೆ ಅಪಘಾತ ವಲಯದ ರಸ್ತೆ ಅಗಲೀಕರಣ ಅಭಿವೃದ್ಧಿಗಾಗಿ 2018-19ರಲ್ಲಿ 9 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಶೇ.60ರಷ್ಟು ಕಾಮಗಾರಿ ಮುಗಿದಿದೆ. ಕೆಲವು ಅಂಗಡಿ ಮಾಲೀಕರು ರಸ್ತೆ ಅಗಲೀಕರಣ ಕಾಮಗಾರಿಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿತ್ತು. ಲೋಕೋಪಯೋಗಿ ಇಲಾಖೆಯವರು ಬಿ.ಕಣಬೂರು ಗ್ರಾಪಂಗೆ ಪತ್ರ ಬರೆದು ಅಂಗಡಿಗಳನ್ನು ತೆರವುಗೊಳಿಸಿಕೊಡುವಂತೆ ಮನವಿಮಾಡಿದ್ದರು. ಹಲವಾರು ಬಾರಿ ಶಾಸಕರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅ ಧಿಕಾರಿಗಳು ಮನವಿ ಮಾಡಿದ್ದರೂ ಕಟ್ಟಡವನ್ನು ತೆರವುಗೊಳಿಸಿರಲಿಲ್ಲ.

ಗುರುವಾರ ಬೆಳಗ್ಗೆ ಜೆಸಿಬಿಯೊಂದಿಗೆ ಬಂದ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಪಂ ಅಭಿವೃದ್ಧಿ ಅಧಿ  ಕಾರಿಗಳು, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಹಾಗೂ ಪೊಲೀಸ್‌ ಭದ್ರತೆಯೊಂದಿಗೆ ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಕೆಲವುಅಂಗಡಿ ಮಾಲೀಕರು ಅ ಧಿಕಾರಿಗಳೊಂದಿಗೆ ಮಾತಿನ ಚಕಮಕಿ  ನಡೆಸಿ ಕಟ್ಟಡ ತೆರವುಗೊಳಿಸಲು ಅವಕಾಶ ಕೊಡಬೇಕೆಂದು ಪಟ್ಟು ಹಿಡಿದು ಜೆಸಿಬಿಗೆ ಅಡ್ಡ ನಿಂತು ಕಾಮಗಾರಿಗೆ ತಡೆಯೊಡ್ಡಿದರು.

ಇದನ್ನೂ ಓದಿ:ಎಂಡೋಸ್ಕೋಪಿ ಸ್ಕಲ್‌ ಬೇಸ್‌ ಸರ್ಜರಿ ಯಶಸ್ವಿ

ಈ ಹಿನ್ನೆಲೆಯಲ್ಲಿ ಅ ಧಿಕಾರಿಗಳು ಹಾಗೂ ಗ್ರಾಪಂ ಸದಸ್ಯರು ಊರಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಪಟ್ಟು ಹಿಡಿದು ಕಾರ್ಯಾಚರಣೆ ಪ್ರಾರಂಭಿಸಿದರು. ಈ ಹಿಂದೆ ಬಾಳೆಹೊನ್ನೂರು ಮುಖ್ಯರಸ್ತೆಯ ಪಕ್ಕದಲ್ಲಿದ್ದ ಮುಸ್ಲಿಮರ ಶ್ರದ್ಧಾಕೇಂದ್ರವಾದ ಮಸೀದಿ ಮುಂಭಾಗವನ್ನೇ ಮುಸ್ಲಿಮರು ತೆರವು ಮಾಡಿಸಿ ಅಭಿವೃದ್ಧಿಗೆ ಸಹಕರಿಸಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿತ್ತು.

ಪೆ.8 ಮತ್ತು 9ರಂದು ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು,  ಸದಸ್ಯರು, ಅಭಿವೃದ್ಧಿ ಅ ಧಿಕಾರಿಗಳು ಅಂಗಡಿ ಮಾಲೀಕರಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಮೇಲ್ಚಾವಣಿಗೆ ಅಳವಡಿಸಿದ್ದ ಮರಮುಟ್ಟುಗಳು, ಸಿಮೆಂಟ್‌ ಶೀಟ್‌, ಹಾಗೂ ಹೆಂಚುಗಳು ಜೇಸಿಬಿ ಆರ್ಭಟಕ್ಕೆ ನಾಶವಾದವು. ಕಟ್ಟಡತೆರವುಗೊಳಿದ ಅಧಿ ಕಾರಿಗಳಿಗೆ ಪûಾತೀತವಾಗಿ ಸದಸ್ಯರು ಅಭಿನಂದನೆ ಸಲ್ಲಸಿದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.