ಮದ್ಯದಂಗಡಿಗೆ ಹೊಸ ಲೈಸೆನ್ಸ್ ನೀಡುವ ಪ್ರಸ್ತಾವವಿಲ್ಲ: ಅಬಕಾರಿ ಸಚಿವ ಕೆ. ಗೋಪಾಲಯ್ಯ   


Team Udayavani, Feb 12, 2021, 8:09 PM IST

The liquor store does not have a new license

ಬೆಂಗಳೂರು: ಕಳೆದ ತಿಂಗಳಷ್ಟೇ  ಅಬಕಾರಿ ಇಲಾಖೆ ವಹಿಸಿಕೊಂಡಿದ್ದು,  ನಾನು ಬಂದ ನಂತರ ಯಾವುದೇ ಹೊಸ ಲೈಸೆನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ ಹಾಗೂ ನಕಲಿ ಮದ್ಯ ದೊರಕಿಲ್ಲ ಎಂದು ನೂತನ ಅಬಕಾರಿ ಸಚಿವ ಕೆ. ಗೋಪಾಲಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಾನು ಅಬಕಾರಿ ಇಲಾಖೆ ವಹಿಸಿಕೊಂಡು 22 ದಿನ ಕಳೆದಿದೆ. ಸರ್ಕಾರಕ್ಕೆ ಜಿ ಎಸ್ ಟಿ ನಂತರ  ಹೆಚ್ಚು ರಾಜಸ್ವ ತರುವ ಇಲಾಖೆಯೆಂದರೆ ಅದು ನಮ್ಮ ಅಬಕಾರಿ ಇಲಾಖೆಯಾಗಿದ್ದು, ಇಲಾಖೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಾಗೂ ಅಂಕಿ, ಅಂಶಗಳನ್ನು ಆಧರಿಸಿ  ಮುಂಬರುವ  ಎರಡು  ಮೂರು ತಿಂಗಳಲ್ಲಿ ಇಲಾಖೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಅಬಕಾರಿ ಇಲಾಖೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಇನ್ನೂ ರಾಜ್ಯದಲ್ಲಿ ಯಾವುದೇ ಹೊಸ  ಲೈಸೆನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ, ಈಗಾಗಲೇ ಹಳೆ ನಿಯಮದಂತೆ CL-07 ಲೈಸೆನ್ಸ್ ನೀಡುತಿದ್ದು, ಕಾನೂನು ಮೀರಿ ಹಾಗೇನಾದರೂ ಲೈಸೆನ್ಸ್ ನೀಡಿದ್ದರೆ ಅಂತ ಲೈಸೆನ್ಸ್ ಕ್ಯಾನ್ಸಲ್ ಮಾಡಿ, ಹಾಗೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು ಎಂದ ಸಚಿವರು  ಜೊತೆಗೆ ಸುದ್ದಿಗಾರರು  ಒಂದು ಲೈಸೆನ್ಸ್ ಪಡೆದು ಮೂರ್ನಾಲ್ಕು ಬಾರ್ ಗಳನ್ನು ನಡೆಸುತ್ತಿರುವ ವಿಚಾರವನ್ನು  ಗಮನಕ್ಕೆ ತಂದಾಗ ಆ ರೀತಿ ಯಾವುದೇ ಕಂಪ್ಲೈಂಟ್ ನನ್ನ ಗಮನಕ್ಕೆ  ಬಂದಿಲ್ಲ ಎಂದು ಸಚಿವರು ಉತ್ತರಿಸಿದರು.

ತಮ್ಮಲ್ಲಿ ಯಾವುದೇ ಮಾಹಿತಿ ಇದ್ದಲ್ಲಿ ನೀಡಿದರೆ ತಕ್ಷಣೆವೇ ಯಾವುದೇ ಜಿಲ್ಲೆ ಇರಲಿ ಅಲ್ಲಿರುವ ಸಂಬಂಧಪಟ್ಟ ಆಯುಕ್ತರು ಹಾಗೂ ಪ್ರಧಾನ ಕಾರ್ಯದರ್ಶಿ ಗಳ ಗಮನಕ್ಕೆ ತಂದು ಅಮಾನತ್ ಮಾಡಲಾಗುವುದು, ಎಂತಹ ಪ್ರಭಾವಿಗಳು ಇದ್ದರೂ  ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ. ನನಗೆ ಸಮಯಾವಕಾಶ ಕೊಟ್ಟು ನೋಡಿ ಇಲಾಖೆಯನ್ನು ಹೇಗೆ ನಿರ್ವಸುತ್ತೇನೆ ಎಂದು ನೀವೇ ನೋಡಿ ಎಂದು ಪುನರುಚ್ಚರಿಸಿದರು.

ಇಲಾಖೆಯಲ್ಲಿ ನಾನು ಬಂದ ಮೇಲೆ ಯಾವುದೇ ವರ್ಗಾವಣೆ ನಡೆದಿಲ್ಲ ಎಂದ ಸಚಿವರು ರಾಜ್ಯದಲ್ಲಿ ಹಾಗೂ ನನ್ನ ಕ್ಷೇತ್ರದಲ್ಲಿ 18 ರಿಂದ 25 ವರ್ಷ ವಯಸ್ಸಿನ  ಹೈಸ್ಕೂಲ್ ವಿದ್ಯಾಬ್ಯಾಸ ಮಾಡುತ್ತಿರುವ  ಹದಿ ಹರೆಯದ ಯುವಕ ಯುವತಿಯರು ಮಾದಕ ವಸ್ತುಗಳಾದ ಗಾಂಜಾ ಚಟಕ್ಕೆ ಬಿದ್ದು ವ್ಯಷನರಾಗುತಿದ್ದು,  ಇದರ ಬಗ್ಗೆ ಹೆಚ್ಚಿನ ಗಮನ ವಹಿಸಿ ಹತೋಟಿಗೆ ತರಲು ಸ್ವಲ್ಪ ಕಾಲಾವಕಾಶ ನೀಡಿ ನಂತರ  ಎಲ್ಲವನ್ನೂ ಸರಿ ಮಾಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಾನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಫೆಬ್ರವರಿ 10 ನೇ ತಾರೀಖು ಕೊವಿಡ್ ಸಂದರ್ಭದಲ್ಲಿ ಸಹ ಆಹಾರ ಇಲಾಖೆಯಿಂದ ಯಾವುದೇ ಫುಡ್ ಕಿಟ್ ವಿತರಣೆ ಮಾಡಿಲ್ಲ ಎಂದು ನೂತನ ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದ ಸಚಿವ ಸುರೇಶ್ ಕುಮಾರ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೊಡುತ್ತಿರುವ ಪಡಿತರ ವ್ಯವಸ್ಥೆಯಲ್ಲಿ ಏಪ್ರಿಲ್ 1  ತಾರಿಖಿನಿಂದ ನವೆಂಬರ್ 30 ತಾರೀಖಿನವರೆಗೂ ಈ ರಾಜ್ಯದಲ್ಲಿರುವ 19 ಸಾವಿರಕ್ಕಿಂತಲೂ ಹೆಚ್ಚಿನ ನ್ಯಾಯಬೆಲೆ ಅಂಗಡಿಗಳ ಮುಖೇನ ಕೇಂದ್ರ ಸರ್ಕಾರದ ಆಹಾರ ಇಲಾಖೆಯಿಂದ  05 kg ಅಕ್ಕಿ ಹಾಗೂ ರಾಜ್ಯ ಸರ್ಕಾರದಿಂದ  ನೀಡುವ  05 kg ಅಕ್ಕಿ, ಒಟ್ಟಿಗೆ10 kg ಅಕ್ಕಿ,  1kg ಬೇಳೆ, ಮೂರು ತಿಂಗಳು, ನಂತರ ಐದು ತಿಂಗಳು 10ಕೆಜಿ ಅಕ್ಕಿ, 01 kg ಕಡಲೇ ಕಾಳು, ಮತ್ತು ಒಂದು ಕುಟುಂಬಕ್ಕೆ 2ಕೆಜಿ ಗೋಧಿಯನ್ನು ವಿತರಣೆ ಮಾಡಲಾಗಿದೆ.

ಕೋವಿಡ್ ಸಂದರ್ಭದಲ್ಲಿ ನಾನು ಆಹಾರ ಸಚಿವ ನಾಗಿದ್ದ ಸಮಯದಲ್ಲಿ ನಮ್ಮ ನಾಯಕರು ಹಾಗೂ ಈ ರಾಜ್ಯದ ಜನಪ್ರಿಯ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರ ಆದೇಶದಂತೆ  ರಾಜ್ಯದ ಬೀದರ್ ಜಿಲ್ಲೆಯಿಂದ  ಹಿಡಿದು ಚಾಮರಾಜನಗರ ಜಿಲ್ಲೆಯವರೆಗೆ ಯಾರೇ ಆಹಾರದ ಸಮಸ್ಯೆ ಹೇಳಿಕೊಂಡು  ನನಗೆ ಹಾಗೂ ಕಚೇರಿಗೆ  ಫೋನ್  ಕರೆ ಮಾಡಿದಾಗ ನನ್ನನ್ನೂ ಒಳಗೊಂಡಂತೆ  ನಮ್ಮ ಇಲಾಖೆ ಅಧಿಕಾರಿಗಳು  ತಕ್ಷಣವೇ ಸ್ಪಂದಿಸಿ  ಅವರಿಗೆ ಬೇಕಾದ ಆಹಾರದ ಫುಡ್ ಕಿಟ್ ಗಳನ್ನು ನೀಡುವುದಕ್ಕೆ ವ್ಯವಸ್ಥೆ ಮಾಡಿ ಇಲಾಖೆಯ ಜವಾಬ್ದಾರಿಯನ್ನೂ ನಿರ್ವಹಿಸಿದ ತೃಪ್ತಿ ನಮಗಿದೆ ಎಂದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.