ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಚೇತರಿಕೆ; ಲಾಭಗಳಿಸಿದ ONGC, ಇನ್ಫೋಸಿಸ್ ಷೇರು
ಐಸಿಐಸಿಐ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿವೆ.
Team Udayavani, Feb 18, 2021, 10:55 AM IST
ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯ ಅನಿಶ್ಚಿತ ವಹಿವಾಟಿನ ನಡುವೆಯೇ ಮುಂಬಯಿ ಷೇರು ಮಾರುಕಟ್ಟೆಯ ಗುರುವಾರ(ಫೆ.18, 2021)ದ ವಹಿವಾಟು ಚೇತರಿಕೆಯ ಹಾದಿ ಹಿಡಿದಿದ್ದು, ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಸ್ ಬಿಐ ಷೇರುಗಳು ಲಾಭ ಗಳಿಸಿದೆ.
ಮುಂಬಯಿ ಷೇರುಪೇಟೆಯ ಬಿಎಸ್ಇ ಸಂವೇದಿ ಸೂಚ್ಯಂಕ 61.08 ಅಂಕಗಳ ಅಲ್ಪ ಏರಿಕೆಯೊಂದಿಗೆ 51,764.91 ಅಂಕಗಳ ವಹಿವಾಟು ಆರಂಭಿಸಿದೆ. ಎನ್ ಎಸ್ ಇ ನಿಫ್ಟಿ 18.20 ಅಂಕಗಳ ಏರಿಕೆಯೊಂದಿಗೆ 15,227.10 ಅಂಕಗಳ ಗಡಿ ತಲುಪಿದೆ.
ಮುಂಬಯಿ ಷೇರುಪೇಟೆ ಅಲ್ಪ ಚೇತರಿಕೆಯಿಂದ ಒಎನ್ ಜಿಸಿ, ಟೆಕ್ ಮಹೀಂದ್ರಾ, ಎಸ್ ಬಿಐ, ಇನ್ಫೋಸಿಸ್, ಎಚ್ ಸಿಎಲ್ ಟೆಕ್ ಮತ್ತು ಏಷ್ಯನ್ ಪೈಂಟ್ಸ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಐಸಿಐಸಿಐ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿವೆ.
ಬುಧವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 400.34 ಅಂಕಗಳಷ್ಟು ಕುಸಿತ ಕಂಡಿದ್ದು, 51,703.83 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 104.55 ಅಂಕಗಳಷ್ಟು ಕುಸಿತ ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ