Cauvery ಅನ್ಯಾಯ: ಪರಿಹಾರ ಸೂತ್ರ ಬೇಕೇ ಬೇಕು

Team Udayavani, Sep 22, 2023, 6:00 AM IST

krs

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ನೆರೆ ರಾಜ್ಯಕ್ಕೆ 15 ದಿನಗಳ ಕಾಲ ಅನಿವಾರ್ಯವಾಗಿ 5 ಸಾವಿರ ಕ್ಯುಸೆಕ್ಸ್‌ ನೀರು ಬಿಡಬೇಕಾಗಿದೆ. ತಮಿಳುನಾಡು ಸರಕಾರ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ಮಾಡಿರುವ ಸುಪ್ರೀಂ ಕೋರ್ಟ್‌, ಕಾವೇರಿ ನದಿ ನಿರ್ವಹಣ ಪ್ರಾಧಿಕಾರದ ಆದೇಶದಂತೆ ಮುಂ ದಿನ 15 ದಿನ ನೀರು ಬಿಡಿ ಎಂದು ಕರ್ನಾಟಕಕ್ಕೆ ಆದೇಶಿಸಿದೆ. ಈಗಾಗಲೇ ಮಳೆ ಇಲ್ಲದೇ ಕಂಗೆಟ್ಟಿರುವ ರಾಜ್ಯವನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ.

ಕಾವೇರಿ ನ್ಯಾಯಮಂಡಳಿಯ ತೀರ್ಪು ಬರುವಾಗಲೇ ಸಂಕಷ್ಟ ಸೂತ್ರದ ಬಗ್ಗೆ ನಿರ್ಧಾರವಾಗಬೇಕಾಗಿತ್ತು. ಬರಗಾಲದ ವೇಳೆಯಲ್ಲಿ ಯಾವ ಸೂತ್ರ ಪಾಲನೆ ಮಾಡಬೇಕು ಎಂಬ ಬಗ್ಗೆಯೂ ಆಗಲೇ ಇತ್ಯರ್ಥವಾಗಬೇಕಾಗಿತ್ತು. ಇದುವರೆಗೆ ಸಂಕಷ್ಟ ಸೂತ್ರದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದು ರಾಜ್ಯಕ್ಕೆ ಮಾರಕವಾಗಿ ಪರಿಣಮಿಸಿದೆ. ಹೀಗಾಗಿಯೇ ಸುಪ್ರೀಂ ಕೋರ್ಟ್‌ ಮುಂದೆಯೂ ನಮಗೆ ಸಂಕಷ್ಟವಿದೆ, ನೀರು ಬಿಡಲು ಆಗುವುದಿಲ್ಲ ಎಂದು ಹೇಳದಂಥ ಪರಿಸ್ಥಿತಿ ತಂದುಕೊಂಡಿದ್ದೇವೆ.

ಇನ್ನು ಕೆಆರ್‌ಎಸ್‌ ಜಲಾಶಯದ ಸ್ಥಿತಿಯನ್ನೇ ಗಮನಿಸುವುದಾದರೆ, ಪ್ರಸ್ತುತ 19 ಟಿಎಂಸಿ ನೀರಿದ್ದು, 5 ಟಿಎಂಸಿಯಷ್ಟು ನೀರು ಜಲಾಶಯದ ಆಳದಲ್ಲಿನ ಬದಿಯಿಂದ ಕೂಡಿದೆ. ಈ ನೀರು ಕುಡಿಯಲು ಯೋಗ್ಯವಲ್ಲ. ಉಳಿದ 10 ಟಿಎಂಸಿ ನೀರನ್ನು ಡಿಸೆಂಬರ್‌ವರೆಗೂ ಕುಡಿಯಲು ಮಾತ್ರ ಬಳಸಬಹುದಾಗಿದೆ. ಇನ್ನು ಜಿಲ್ಲೆಯಲ್ಲಿನ ಜಮೀನುಗಳಲ್ಲಿ ಕಟಾವಿಗೆ ಬಂದಿರುವ ಬೆಳೆಗಳಿಗೆ ನೀರುಣಿಸಬೇಕು. ಜತೆಗೆ ಜಲಾಶಯದ ನೀರಾವರಿ ಪ್ರದೇಶದ ಜಮೀನುಗಳಲ್ಲಿ ಮುಂಗಾರು ಹಂಗಾಮಿನ ಬೆಳೆ ಭತ್ತದ ನಾಟಿ ಮಾಡಿದ್ದು, ಆ ಬೆಳೆಯ ನಾಟಿ ಮಾಡಿ, ಕಳೆ ಕಿತ್ತು ಗೊಬ್ಬರ ಹಾಕಿದ್ದ ರೈತರು ಇನ್ನು ಮುಂದೆ ಕಟ್ಟು ನೀರು ಸಿಗದಂತಾಗಿರುವ ಪರಿಸ್ಥಿತಿಯಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಅತ್ತ ಕಬಿನಿ ಜಲಾಶಯದಲ್ಲೂ ಇದೇ ಪರಿಸ್ಥಿತಿ ಇದೆ. ಸದ್ಯ ಇಲ್ಲಿ 14.65 ಟಿಎಂಸಿ ನೀರಿನ ಸಂಗ್ರಹಮಟ್ಟ ಹೊಂದಿದೆ. ಇದರ ಸಂಗ್ರಹ ಸಾಮರ್ಥ್ಯ 19.52 ಟಿಎಂಸಿಯಲ್ಲಿ ಬಳಕೆಗೆ ಸಿಗುವುದು 11.99 ಟಿಎಂಸಿ. ಉಳಿದ 7.52 ಟಿಎಂಸಿಯಲ್ಲಿ 6 ಟಿಎಂಸಿ ಡೆಡ್‌ ಸ್ಟೋರೇಜ್‌, ಇನ್ನುಳಿದ 1.52 ಟಿಎಂಸಿ ನೀರನ್ನು ಹಿನ್ನೀರಿನಲ್ಲಿರುವ ಅಪಾರ ಪ್ರಮಾಣದ ವನ್ಯಜೀವಿ ಹಾಗೂ ಜಲಚರಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗುವುದರಿಂದ ಬಳಸುವಂತಿಲ್ಲ. ಈಗ ಮತ್ತೆ ಸುಪ್ರೀಂ ಆದೇಶ ಪಾಲನೆಗಾಗಿ ನೀರು ಹರಿಸಿದರೆ ಬೆಂಗಳೂರು ಮಹಾನಗರ ಸೇರಿ ಜಲಾಶಯ ಅವಲಂಬಿತ ನಗರ, ಪಟ್ಟಣ, ನೂರಾರು ಗ್ರಾಮಗಳ ಜನರಿಗೆ ನೀರಿನ ತತ್ವಾರ ಎದುರಾಗಲಿದೆ. ಈಗ ಸುಪ್ರೀಂ ಕೋರ್ಟ್‌ ಆದೇಶದಂತೆ ನೀರು ಬಿಡುತ್ತಾ ಹೋದರೆ, ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವುದು ಖಂಡಿತ. ಈಗ ಇನ್ನೂ ಸೆಪ್ಟಂಬರ್‌ ತಿಂಗಳಾಗಿದ್ದು, ಮುಂದಿನ ಮೇ ವರೆಗೂ ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ನಗರಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು. ವಿಚಿತ್ರವೆಂದರೆ ಮಳೆ ಕೊರತೆಯಿಂದಾಗಿ ಬೆಳೆಯೂ ಕೈಕೊಟ್ಟಿದೆ.

ಈ ಎಲ್ಲ ವಿಷಯಗಳನ್ನು ಗಮನದಲ್ಲಿ ಇರಿಸಿಕೊಂಡು ಇಡೀ ವಿವಾದಕ್ಕೆ ತಾರ್ಕಿಕ ಅಂತ್ಯ ನೀಡಬೇಕು. ಮಳೆ ಬರದೇ ಇದ್ದಾಗ ಏನು ಮಾಡಬೇಕು ಎಂಬ ಬಗ್ಗೆ ದಾಖಲೆಗಳ ರೂಪದಲ್ಲಿ ಬರೆದಿಡಬೇಕು. ಸಾಧ್ಯವಾದರೆ ಎರಡೂ ರಾಜ್ಯಗಳು ಕುಳಿತು ವಿಷಯವನ್ನು ಬಗೆಹರಿಸಿಕೊಳ್ಳಬೇಕು. ಕೇಂದ್ರ ಸರಕಾರವೂ ಮಧ್ಯ ಪ್ರವೇಶ ಮಾಡಿ ಕರ್ನಾಟಕಕ್ಕೆ ನ್ಯಾಯ ಸಿಗುವಂತೆ ಮಾಡಬೇಕು. ಆಗಷ್ಟೇ ಕರ್ನಾಟಕಕ್ಕೆ ಪರಿಹಾರ ಸಿಗಲು ಸಾಧ್ಯ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.