ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಶತಮಾನದ ವಿವಾದ ಅಂತ್ಯ

Team Udayavani, Feb 17, 2018, 7:30 AM IST

s-5.jpg

ನದಿ ನೀರು ರಾಷ್ಟ್ರೀಯ ಸಂಪತ್ತು. ಯಾವುದೇ ರಾಜ್ಯಗಳು ಇದರ ಮೇಲೆ ಹಕ್ಕು ಸಾಧಿಸುವಂತಿಲ್ಲ. ಹರಿವ ನೀರನ್ನು ಹಂಚಿಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನೊಂದಿಗೆ ಶತಮಾನದ ಇತಿಹಾಸವಿರುವ ಕಾವೇರಿ ವಿವಾದ ಅಂತ್ಯವಾಗಿದೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳೆರಡಕ್ಕೂ ಕೊಟ್ಟು ಪಡೆದುಕೊಳ್ಳುವ ಸೂತ್ರ ಬೋಧಿಸಲಾಗಿದ್ದು, ಈ ತೀರ್ಪನ್ನು ಒಪ್ಪಿಕೊಳ್ಳಲೇಬೇಕಿದೆ. ಕಾವೇರಿ ನ್ಯಾಯಾಧಿಕರಣದ ತೀರ್ಪು ಸರಿಯಲ್ಲ, ಕಾವೇರಿ ನೀರಿನ ಹಕ್ಕು ತನ್ನದೆಂಬ ಕರ್ನಾಟಕದ ವಾದಕ್ಕೆ ಪುರಸ್ಕಾರ ದೊರೆಯಲಿಲ್ಲ. ಅಂತೆಯೇ ಹೆಚ್ಚಿನ ನೀರಿನ ಹಂಚಿಕೆಗಾಗಿ ಬೇಡಿಕೆ ಸಲ್ಲಿಸಿದ್ದ ತಮಿಳುನಾಡು ವಾದಕ್ಕೂ ಮನ್ನಣೆ ಸಿಗಲಿಲ್ಲ. ಜತೆಗೆ ಅಲ್ಲಿನ 10 ಟಿಎಂಸಿ ಅಂತರ್ಜಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗಿದೆ. ಕುಡಿವ ನೀರಿಗೆ ಮೊದಲ ಆದ್ಯತೆ ಎಂದು ಹೇಳಿದ ಕೋರ್ಟ್‌ ಬೆಂಗಳೂರಿನ ಕುಡಿಯುವ ನೀರಿಗಾಗಿ 4.75 ಟಿಎಂಸಿ ನೀರನ್ನು ಮೀಸಲಿಟ್ಟಿದೆ. ಹೀಗೆ ಒಟ್ಟು ತಮಿಳುನಾಡಿಗೆ ಬಿಡಬೇಕಿದ್ದ ನೀರಲ್ಲಿ 14.75 ಟಿಎಂಸಿ ಕಡಿತಗೊಂಡಿದೆ. ಇದು ಕರ್ನಾಟಕಕ್ಕೂ ನೆಮ್ಮದಿ. ತೀರ್ಪಿನಿಂದಾಗಿ ಕರ್ನಾಟಕಕ್ಕೆ 284.75 ಟಿಎಂಸಿ, ತಮಿಳುನಾಡಿಗೆ 177.25 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆಗೊಂಡಿದೆ. 15 ವರ್ಷ ಈ ತೀರ್ಪು ಊರ್ಜಿತದಲ್ಲಿರಲಿದೆ. ಈ ಅವಧಿಯಲ್ಲಿ ನೀರು ಹಂಚಿಕೆ ಹೊಣೆಯನ್ನು ಕೋರ್ಟ್‌ ಕೇಂದ್ರಕ್ಕೆ ವಹಿಸಿದೆ. ಅದರ ನೇತೃತ್ವದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆಗೊಳ್ಳಲಿದೆ. ಇಲ್ಲಿರುವ ಸೂಕ್ಷ್ಮ ಸಂಗತಿ ಎಂದರೆ, ಬರಗಾಲದ ವರ್ಷಗಳಲ್ಲಿ ನೀರು ಹಂಚಿಕೆ ಹೇಗೆ ನಡೆಯಲಿದೆ ಎಂಬುದೇ ಆಗಿದೆ. ಈ ನೂತನ ಮಂಡಳಿಯೇ ಅದನ್ನು ನಿರ್ವಹಿಸಬೇಕಾಗುತ್ತದೆ. ರಾಜಕೀಯ ರಹಿತ, ಎರಡೂ ರಾಜ್ಯಗಳ ಜನಹಿತದ ತೀರ್ಮಾನವನ್ನು ಈ ಮಂಡಳಿ ಮಾಡಬೇಕಿರುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.