OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ


Team Udayavani, Mar 16, 2024, 6:38 AM IST

mob

ಅಶ್ಲೀಲ, ಅಸಭ್ಯ, ಅನುಚಿತ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ಪ್ರದರ್ಶಿಸುತ್ತಿದ್ದ 18 ಒಟಿಟಿ ಪ್ಲಾಟ್‌ಫಾರಂಗಳನ್ನು ಕೇಂದ್ರ ಸರಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಇದರ ಜತೆಯಲ್ಲಿ ಈ ನಿಷೇಧಿತ ಒಟಿಟಿ ಪ್ಲಾಟ್‌ಫಾರಂ ಗಳಿಗೆ ಸಂಬಂಧಿಸಿದಂತೆ 10 ಪ್ಲಿಕೇಶನ್‌ಗಳು, 19 ವೆಬ್‌ಸೈಟ್‌ಗಳು ಹಾಗೂ 57 ಸಾಮಾಜಿಕ ಜಾಲ ತಾಣ ಖಾತೆಗಳಿಗೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಕೇಂದ್ರ ಸರಕಾರ ದೇಶದ ಕಾನೂನು ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ದೇಶದಲ್ಲಿ ಕಾರ್ಯ ನಿರ್ವಹಿಸಲು ಮುಂದಾಗುವ ಸಾಮಾಜಿಕ ಮಾಧ್ಯಮಗಳಿಗೆ ದೇಶದಲ್ಲಿ ಅವಕಾಶ ನೀಡಲಾಗದು ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಸದ್ಯ ಸರಕಾರದಿಂದ ನಿಷೇಧಿತವಾಗಿರುವ ಈ ಎಲ್ಲ ಒಟಿಟಿ ಪ್ಲಾಟ್‌ಫಾರಂಗಳು ಮತ್ತು ಇವುಗಳೊಂದಿಗೆ ನಂಟು ಹೊಂದಿರುವ ಸಾಮಾಜಿಕ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸೃಜನಶೀಲತೆಯ ಹೆಸರಿನಲ್ಲಿ ಅಸಭ್ಯ ಮತ್ತು ಅಶ್ಲೀಲ ವಿಷಯಗಳನ್ನು ಪ್ರದರ್ಶಿಸುತ್ತಲೇ ಬಂದಿದ್ದವು. ಈ ಬಗ್ಗೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತತ್‌ಕ್ಷಣವೇ ಇಂತಹ ಅಕ್ರಮ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಸಂಬಂಧಿತ ಕಂಪೆನಿಗಳಿಗೆ ಸೂಚನೆ ನೀಡಿತ್ತು. ಇದರ ಹೊರತಾಗಿಯೂ ಈ ಒಟಿಟಿ ಪ್ಲಾಟ್‌ಫಾರಂಗಳು ಮತ್ತು ವೆಬ್‌ಸೈಟ್‌ಗಳು ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ತೆಗೆಯದೆ ತಮ್ಮ ಚಾಳಿಯನ್ನು ಮುಂದುವರಿಸಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಹಕ್ಕುಗಳು, ಸಾಮಾಜಿಕ ಮಾಧ್ಯಮಗಳು ಮತ್ತು ಮನೋರಂಜನ ಕ್ಷೇತ್ರದ ತಜ್ಞರು ಹಾಗೂ ಕೇಂದ್ರದ ಸರಕಾರದ ಇನ್ನಿತರ ಸಂಬಂಧಿತ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿ, ಈ ಎಲ್ಲ ಒಟಿಟಿ ಪ್ಲಾಟ್‌ಫಾರಂಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಮಾಹಿತಿ ತಂತ್ರಜ್ಞಾನ ಕಾಯಿದೆ, 2000ದ ನಿಯಮಾವಳಿಗಳಡಿಯಲ್ಲಿ ನಿಷೇಧಿಸಿ ಆದೇಶ ಹೊರಡಿಸಿದೆ.

ಸೃಜನಶೀಲತೆಯನ್ನು ಮುಂದಿಟ್ಟು ಕೌಟುಂಬಿಕ ಸಂಬಂಧ, ಗುರು-ಶಿಷ್ಯ ಬಾಂಧವ್ಯವನ್ನೂ ಅತ್ಯಂತ ಕೀಳಾಗಿ ಬಿಂಬಿಸುವ ಅಶ್ಲೀಲ ಮತ್ತು ಅನುಚಿತ ವಿಷಯಗಳನ್ನು ಈ ಒಟಿಟಿಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು. ಅಷ್ಟು ಮಾತ್ರವಲ್ಲದೆ ಕೆಲವೊಂದು ದ್ವೇಷಮಯ ಮತ್ತು ಆಕ್ಷೇಪಾರ್ಹ ವಿಷಯಗಳನ್ನೂ ಈ ಸಾಮಾಜಿಕ ಜಾಲ ತಾಣ ಖಾತೆಗಳ ಮೂಲಕ ಹರಡಲಾಗುತ್ತಿತ್ತು. ಮಹಿಳೆಯರ ಘನತೆ, ಗೌರವಕ್ಕೆ ಕುಂದುಂಟು ಮಾಡುವ ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಯಂತಹ ಸಂಗತಿಗಳೂ ಇದರಲ್ಲಿ ಸೇರಿದ್ದವು. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿ ಸರಕಾರ ಈ ನಿರ್ಧಾರ ಕೈಗೊಂಡಿದೆ.

ಸರಕಾರದ ಈ ನಿರ್ಧಾರ ಸ್ವಾಗತಾರ್ಹ ಮತ್ತು ನ್ಯಾಯೋಚಿತ ಕೂಡ. ಆದರೆ ಈಗ ನಿಷೇಧಿಸಲ್ಪಟ್ಟಿರುವ ಈ ಒಟಿಟಿ ಪ್ಲಾಟ್‌ಫಾರಂಗಳು, ವೆಬ್‌ಸೈಟ್‌ಗಳು, ಆ್ಯಪ್‌ಗ್ಳು ಮತ್ತು ಸಾಮಾಜಿಕ ಜಾಲ ತಾಣ ಖಾತೆಗಳು ವಿದೇಶಗಳ ನೆಟ್‌ವರ್ಕ್‌ ಮತ್ತು ಮೂರನೇ ಮಧ್ಯವರ್ತಿ ಕಂಪೆನಿಗಳ ಸಹಿತ ಇತರ ಯಾವುದೇ ಮಾರ್ಗದಲ್ಲಿ ದೇಶದಲ್ಲಿ ಲಭ್ಯವಾಗದಂತೆ ಖಾತರಿಪಡಿಸುವ ಮಹತ್ತರ ಹೊಣೆಗಾರಿಕೆ ಸರಕಾರದ ಮೇಲಿದೆ. ಹಾಗಾದಲ್ಲಿ ಮಾತ್ರವೇ ಇವುಗಳ ನಿಷೇಧ ಸಂಪೂರ್ಣ ಯಶಸ್ವಿಯಾಗಲು ಸಾಧ್ಯ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ದಿನೇದಿನೆ ಪ್ರಗತಿಪಥದಲ್ಲಿ ದಾಪುಗಾಲಿಡುತ್ತಿರು ವಾಗ ಸರಕಾರ ಇನ್ನೂ ಇಂತಹ ನಿಷೇಧ, ನಿರ್ಬಂಧಗಳಿಗೆ ಸೀಮಿತವಾಗದೆ ತಂತ್ರಜ್ಞಾನ ಮಾರ್ಗದ ಮೂಲಕವೇ ಇವುಗಳಿಗೆ ಶಾಶ್ವತ ಕಡಿವಾಣ ಹಾಕಲು ಸೂಕ್ತ ಕಾರ್ಯತಂತ್ರ ರೂಪಿಸಬೇಕು. ಇಲ್ಲವಾದಲ್ಲಿ ಇಂತಹ ನಿಷೇಧಗಳು “ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷೀಲಿ’ ಎಂಬ ಗಾದೆ ಮಾತಿನಂತಾಗುವುದು ನಿಶ್ಚಿತ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.