ಶಾಸಕರ ಅಸಮಾಧಾನ ಸಮನ್ವಯ ಮುಖ್ಯ

Team Udayavani, Jan 6, 2021, 5:58 AM IST

ಶಾಸಕರ ಅಸಮಾಧಾನ ಸಮನ್ವಯ ಮುಖ್ಯ

ರಾಜ್ಯವು ಇನ್ನೂ ಕೋವಿಡ್‌ ಮಹಾಮಾರಿಯಿಂದ ಮುಕ್ತವಾಗಿಲ್ಲ, ಸಾಂಕ್ರಾಮಿಕದ ಪರಿಣಾಮವಾಗಿ ಅರ್ಥವ್ಯವಸ್ಥೆಯು ಚೇತರಿಕೆಯ ಆರಂಭಿಕ ಹಂತದಲ್ಲೇ ಇದೆ. ಈ ಕಾರಣಕ್ಕಾಗಿಯೇ ಮುಂದಿನ ರಾಜ್ಯ ಬಜೆಟ್‌ ಹಲವು ರೀತಿಯಲ್ಲಿ ಮಹತ್ವ ಪಡೆದಿದೆ. ಆದರೆ ಬಜೆಟ್‌ ಮಂಡನೆಗೂ ಮುನ್ನ ಶಾಸಕರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಮುಖ್ಯಮಂತ್ರಿಯವರು ನಡೆಸಿದ ಶಾಸಕರ ಸಭೆಯಲ್ಲಿ ಎದುರಾಗಿರುವ ಆಕ್ರೋಶ ನಿಜಕ್ಕೂ ಬೇಸರದ ಸಂಗತಿ. ಇದರ ನಡುವೆಯೂ ಮುಖ್ಯಮಂತ್ರಿಗಳು ಅಭಿವೃದ್ಧಿಗೆ ವೇಗ ನೀಡುವ ಭರವಸೆ ನೀಡಿರುವದರೂ, ಶಾಸಕ ವರ್ಗದಲ್ಲಿನ ಅಸಮಾಧಾನದ ಧ್ವನಿಗಳು, ಸರಕಾರದಲ್ಲಿ ಸಮನ್ವಯದ ಕೊರತೆ ಇದೆಯೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕುತ್ತಿದೆ.

ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದ ಶಾಸಕರು ಮುಖ್ಯಮಂತ್ರಿಗಳು ತಮ್ಮೆಡೆಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದನ್ನು, ಪಕ್ಷದಲ್ಲಿ ಕೆಲವರ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ಪ್ರಶ್ನಿಸಿದ್ದಾರೆ. ರಾಜ್ಯವು ಅಭಿವೃದ್ಧಿಯೆಡೆಗೆ ತ್ವರಿತವಾಗಿ ಹೆಜ್ಜೆಹಾಕಲೇಬೇಕಿರುವ ಇಂಥ ತುರ್ತು ಸಮಯದಲ್ಲಿ ಆಡಳಿತ ಪಕ್ಷದಲ್ಲಿನ ಈ ಬೆಳವಣಿಗೆ ಒಳ್ಳೆಯದಲ್ಲ. ಹಾಗೆಂದು, ಇಲ್ಲಿ ಶಾಸಕರನ್ನೇ ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಅವರುಗಳು ಎತ್ತಿರುವ ಕೆಲವು ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಲೇಬೇಕಿದೆ. ಖುದ್ದು ಮುಖ್ಯಮಂತ್ರಿಗಳೇ ಅನುದಾನ ಬಿಡುಗಡೆಗೆ ಆದೇಶಿಸಿದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಪಡೆಯಲು ಪದೇ ಪದೆ ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣ ವಾಗಿದೆ ಎನ್ನುವ ಶಾಸಕರೊಬ್ಬರ ಬೇಸರ ನಿಜಕ್ಕೂ ಚಿಂತೆ ಹುಟ್ಟಿಸುವಂಥದ್ದು.

ಈ ನಿಟ್ಟಿನಲ್ಲಿ ಶೀಘ್ರವೇ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವರಾದರೂ ಪಕ್ಷದೊಳಗೆ ಈ ರೀತಿಯ ಅಸ
ಮಾಧಾನ, ಸಮನ್ವಯದ ಕೊರತೆಯಿರುವುದು, ಹೊರಗಿನವರು, ಒಳಗಿನವರು ಎಂಬ ಆಂತರಿಕ ಕಲಹ ಉಂಟಾಗಿರುವುದು ಖಂಡಿತ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಕುಡಿಯುವ ನೀರು ಪೂರೈಕೆ, ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳು ಕೋವಿಡ್‌ ಕಾರಣದಿಂದಾಗಿ ನನೆಗುದಿಗೆ ಬಿದ್ದಿವೆ. ಆ ಯೋಜನೆಗಳಿಗೆ ಮರುವೇಗ ಕೊಡುವ ಸಮಯವಿದು. ಪರಿಸ್ಥಿತಿ ಹೀಗಿರುವಾಗ ಶಾಸಕರು, ಮುಖ್ಯ ನಾಯಕತ್ವದ ನಡುವೆ ತಾಳ ಮೇಳ ಇಲ್ಲ ಎಂದಾದರೆ ಅಭಿವೃದ್ಧಿಯತ್ತ ಗಮನ ಕೊಡುವವರು ಯಾರು?

ಪಕ್ಷದೊಳಗಿನ ಈ ಒಡಕುಗಳನ್ನೆಲ್ಲ ಸರಿಪಡಿಸಿಕೊಂಡು ಬಜೆಟ್‌ ಮಂಡನೆ ವೇಳೆಗೆ ಸರಕಾರ ಆರ್ಥಿಕತೆಯನ್ನು ಸರಿದಾರಿಗೆ ತರಬೇಕು. ಅಭಿವೃದ್ಧಿಯತ್ತ ಮುನ್ನಡೆಯಬೇಕು. ಏಕೆಂದರೆ ಜನರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ ಎಂಬುದು ಮರೆಯಬಾರದು. ಎಲ್ಲದಕ್ಕೂ ಕೊರೊನಾ ಕಾರಣ ಎಂದು ನೆಪ ಹೇಳುವುದಕ್ಕೂ ಆಗುವುದಿಲ್ಲ. ಅಂತಿಮವಾಗಿ ಸಂಕಷ್ಟದಲ್ಲೂ ಸಾಧನೆಯೇ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದ ಹೊತ್ತಲ್ಲೇ ಶಾಸಕರು ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ, ಸಚಿವರು ಕೈಗೆ ಸಿಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿರುವುದು ಸಾಮಾನ್ಯ ವಿಷಯವಲ್ಲ. ಏಕೆಂದರೆ ಮುಂದಿನ ಎರಡು ವರ್ಷಗಳಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಎದುರಾಗಲಿದೆ. ಮುಂದಿನ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಬೇಕು
ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರ ಅಸಮಾಧಾನ ಪಕ್ಷ ಮತ್ತು ಸರಕಾರಕ್ಕೆ ಮುಜುಗರ ತಂದಿರುವುದಂತೂ ಹೌದು.

ರಾಜ್ಯವು ಇನ್ನೂ ಕೋವಿಡ್‌ ಮಹಾಮಾರಿಯಿಂದ ಮುಕ್ತವಾಗಿಲ್ಲ, ಸಾಂಕ್ರಾಮಿಕದ ಪರಿಣಾಮವಾಗಿ ಅರ್ಥವ್ಯವಸ್ಥೆಯು ಚೇತರಿಕೆಯ ಆರಂಭಿಕ ಹಂತದಲ್ಲೇ ಇದೆ. ಈ ಕಾರಣಕ್ಕಾಗಿಯೇ ಮುಂದಿನ ರಾಜ್ಯ ಬಜೆಟ್‌ ಹಲವು ರೀತಿಯಲ್ಲಿ ಮಹತ್ವ ಪಡೆದಿದೆ. ಆದರೆ ಬಜೆಟ್‌ ಮಂಡನೆಗೂ ಮುನ್ನ ಶಾಸಕರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಮುಖ್ಯಮಂತ್ರಿಯವರು ನಡೆಸಿದ ಶಾಸಕರ ಸಭೆಯಲ್ಲಿ ಎದುರಾಗಿರುವ ಆಕ್ರೋಶ ನಿಜಕ್ಕೂ ಬೇಸರದ ಸಂಗತಿ. ಇದರ ನಡುವೆಯೂ ಮುಖ್ಯಮಂತ್ರಿಗಳು ಅಭಿವೃದ್ಧಿಗೆ ವೇಗ ನೀಡುವ ಭರವಸೆ ನೀಡಿರುವದರೂ, ಶಾಸಕ ವರ್ಗದಲ್ಲಿನ ಅಸಮಾಧಾನದ ಧ್ವನಿಗಳು, ಸರಕಾರದಲ್ಲಿ ಸಮನ್ವಯದ ಕೊರತೆ ಇದೆಯೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕುತ್ತಿದೆ.

ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದ ಶಾಸಕರು ಮುಖ್ಯಮಂತ್ರಿಗಳು ತಮ್ಮೆಡೆಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದನ್ನು, ಪಕ್ಷದಲ್ಲಿ ಕೆಲವರ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ಪ್ರಶ್ನಿಸಿದ್ದಾರೆ. ರಾಜ್ಯವು ಅಭಿವೃದ್ಧಿಯೆಡೆಗೆ ತ್ವರಿತವಾಗಿ ಹೆಜ್ಜೆಹಾಕಲೇಬೇಕಿರುವ ಇಂಥ ತುರ್ತು ಸಮಯದಲ್ಲಿ ಆಡಳಿತ ಪಕ್ಷದಲ್ಲಿನ ಈ ಬೆಳವಣಿಗೆ ಒಳ್ಳೆಯದಲ್ಲ. ಹಾಗೆಂದು, ಇಲ್ಲಿ ಶಾಸಕರನ್ನೇ ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಅವರುಗಳು ಎತ್ತಿರುವ ಕೆಲವು ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಲೇಬೇಕಿದೆ. ಖುದ್ದು ಮುಖ್ಯಮಂತ್ರಿಗಳೇ ಅನುದಾನ ಬಿಡುಗಡೆಗೆ ಆದೇಶಿಸಿದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಪಡೆಯಲು ಪದೇ ಪದೆ ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣ ವಾಗಿದೆ ಎನ್ನುವ ಶಾಸಕರೊಬ್ಬರ ಬೇಸರ ನಿಜಕ್ಕೂ ಚಿಂತೆ ಹುಟ್ಟಿಸುವಂಥದ್ದು.

ಈ ನಿಟ್ಟಿನಲ್ಲಿ ಶೀಘ್ರವೇ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವರಾದರೂ ಪಕ್ಷದೊಳಗೆ ಈ ರೀತಿಯ ಅಸ
ಮಾಧಾನ, ಸಮನ್ವಯದ ಕೊರತೆಯಿರುವುದು, ಹೊರಗಿನವರು, ಒಳಗಿನವರು ಎಂಬ ಆಂತರಿಕ ಕಲಹ ಉಂಟಾಗಿರುವುದು ಖಂಡಿತ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಕುಡಿಯುವ ನೀರು ಪೂರೈಕೆ, ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳು ಕೋವಿಡ್‌ ಕಾರಣದಿಂದಾಗಿ ನನೆಗುದಿಗೆ ಬಿದ್ದಿವೆ. ಆ ಯೋಜನೆಗಳಿಗೆ ಮರುವೇಗ ಕೊಡುವ ಸಮಯವಿದು. ಪರಿಸ್ಥಿತಿ ಹೀಗಿರುವಾಗ ಶಾಸಕರು, ಮುಖ್ಯ ನಾಯಕತ್ವದ ನಡುವೆ ತಾಳ ಮೇಳ ಇಲ್ಲ ಎಂದಾದರೆ ಅಭಿವೃದ್ಧಿಯತ್ತ ಗಮನ ಕೊಡುವವರು ಯಾರು?

ಪಕ್ಷದೊಳಗಿನ ಈ ಒಡಕುಗಳನ್ನೆಲ್ಲ ಸರಿಪಡಿಸಿಕೊಂಡು ಬಜೆಟ್‌ ಮಂಡನೆ ವೇಳೆಗೆ ಸರಕಾರ ಆರ್ಥಿಕತೆಯನ್ನು ಸರಿದಾರಿಗೆ ತರಬೇಕು. ಅಭಿವೃದ್ಧಿಯತ್ತ ಮುನ್ನಡೆಯಬೇಕು. ಏಕೆಂದರೆ ಜನರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ ಎಂಬುದು ಮರೆಯಬಾರದು. ಎಲ್ಲದಕ್ಕೂ ಕೊರೊನಾ ಕಾರಣ ಎಂದು ನೆಪ ಹೇಳುವುದಕ್ಕೂ ಆಗುವುದಿಲ್ಲ. ಅಂತಿಮವಾಗಿ ಸಂಕಷ್ಟದಲ್ಲೂ ಸಾಧನೆಯೇ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದ ಹೊತ್ತಲ್ಲೇ ಶಾಸಕರು ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ, ಸಚಿವರು ಕೈಗೆ ಸಿಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿರುವುದು ಸಾಮಾನ್ಯ ವಿಷಯವಲ್ಲ. ಏಕೆಂದರೆ ಮುಂದಿನ ಎರಡು ವರ್ಷಗಳಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಎದುರಾಗಲಿದೆ. ಮುಂದಿನ ಚುನಾವಣೆಯಲ್ಲಿ

140 ರಿಂದ 150 ಸ್ಥಾನ ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರ ಅಸಮಾಧಾನ ಪಕ್ಷ ಮತ್ತು ಸರಕಾರಕ್ಕೆ ಮುಜುಗರ ತಂದಿರುವುದಂತೂ ಹೌದು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.