ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

Team Udayavani, Jan 21, 2022, 6:10 AM IST

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಕೊರೊನಾ ಮೂರನೇ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವವರಿಗಿಂತ ಹೋಂ ಐಸೊಲೇಶನ್‌ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ಸಂದರ್ಭದಲ್ಲಿ ಕೊರೊನಾ ಸೋಂಕಿಗೆ ಒಳಗಾಗುತ್ತಿರು ವವರಿಗೆ ಪ್ರಾಣಾಪಾಯ ಇಲ್ಲದಿರುವುದು ಹಾಗೂ ಈ ಹಿಂದಿನ ಮೊದಲ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಆರೋಗ್ಯ ಸೇವೆಗಾಗಿ ಪಟ್ಟ ಕಷ್ಟ ಈಗಿಲ್ಲ ಎಂಬುದು ಸಮಾಧಾನಕರ.

ರಾಜ್ಯ ಸರಕಾರವು ಮೂರನೇ ಅಲೆಗೆ ಆಸ್ಪತ್ರೆ, ಹಾಸಿಗೆ, ಆಕ್ಸಿಜನ್‌, ಐಸಿಯು ಹೀಗೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಇದೀಗ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆ. ಆದರೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚು. ಇವರಿಗೆ ಔಷಧ ಕಿಟ್‌ ಹಾಗೂ ಆರೋಗ್ಯ ಸೇವೆಯ ಸಹಾಯವಾಣಿ ನೆರವು, ವೈದ್ಯರ ಸಲಹೆ ಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಸಹ ಎಲ್ಲ ಜಿಲ್ಲಾಡಳಿತಗಳಿಗೆ ಈ ಕುರಿತು ಸೂಚನೆ ನೀಡಿರುವುದು ಉತ್ತಮ ಕೆಲಸ. ಆದರೆ ಇದು ಪರಿಣಾಮಕಾರಿ ಯಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳ ಬೇಕಾಗಿದೆ. ಏಕೆಂದರೆ ಪ್ರತೀ ಮನೆಯಲ್ಲಿಯೂ ಜ್ವರ, ಕೆಮ್ಮು, ನೆಗಡಿ, ಮೈಕೈ ನೋವು ಹೀಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದು ಸಾಮಾನ್ಯವಾಗಿದೆ.

ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಹಳ್ಳಿಗಳತ್ತ ವೈದ್ಯರ ನಡೆ ಕಾರ್ಯಕ್ರಮ ಆರಂಭಿಸಿ ಗ್ರಾಮೀಣ ಭಾಗದ ಪ್ರತೀ ಮನೆಗೂ ವೈದ್ಯರ ತಂಡ ಭೇಟಿ ನೀಡಿ ತಪಾಸಣೆ ನಡೆಸಿ ಹೋಂ ಐಸೊಲೇಶನ್‌ನಲ್ಲಿರು ವವರು ಹಾಗೂ ಇತರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಔಷಧ ಕಿಟ್‌ ವಿತರಿಸುವ ಅಭಿಯಾನ ರಾಜ್ಯವ್ಯಾಪಿ ನಡೆಸಲಾಗಿತ್ತು. ಅದು ಫ‌ಲ ನೀಡಿದ್ದರಿಂದ ಇದೀಗ ಮತ್ತೆ ಆರಂಭಿಸಲಾಗಿದೆ.

ನಗರ ಹಾಗೂ ಗ್ರಾಮೀಣ ಎರಡೂ ಭಾಗದಲ್ಲಿ ಕೊರೊನಾ ಸೋಂಕು ದೃಢಪಟ್ಟು ಹೋಂ ಐಸೊಲೇಶನ್‌ನಲ್ಲಿ  ಇರುವವರಿಗೆ ಮಾತ್ರ  ಔಷಧ ಕಿಟ್‌ ಹಾಗೂ ಇತರ ಸೇವೆ ನೀಡಿ ಸುಮ್ಮನಾಗುವಂತಿಲ್ಲ. ಎಷ್ಟೋ ಮಂದಿ ಪರೀಕ್ಷೆ ಮಾಡಿಸಿದರೆ ಪಾಸಿಟಿವ್‌ ಬರಬಹುದು. ಇದರಿಂದ ದೈನಂದಿನ ದುಡಿಮೆ ಹಾಗೂ ಇತರ ಕೆಲಸಕ್ಕೆ ತೊಂದರೆಯಾಗಬಹುದು. ಕುಟುಂಬ ಸದಸ್ಯರಿಗೂ ಸಮಸ್ಯೆಯಾಗಬಹುದು ಎಂದು ಪರೀಕ್ಷೆಗೆ ಹಿಂಜರಿದು ಆರೋಗ್ಯ ಸಮಸ್ಯೆಯಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಬಗ್ಗೆಯೂ ಸರಕಾರ ಗಮನಹರಿಸಬೆಕು.

ಸ್ಥಳೀಯ ಆಡಳಿತಗಳ ಮೂಲಕ ಆರೋಗ್ಯ ಸಮಸ್ಯೆ ಎದುರಿಸುತ್ತಿ ರುವ ನಾಗರಿಕರಿಗೆ ಅಗತ್ಯ ಔಷಧ ಹಾಗೂ ಸಲಹೆ ದೊರಕುವಂತೆ ಮಾಡ ಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಕ್ಷಾ ತೀತವಾಗಿ ಶಾಸಕರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮುಂದಾಗ ಬೇಕು. ಇದಕ್ಕೆ ಸ್ವಯಂ ಸೇವಾ ಸಂಘಟನೆಗಳೂ ಕೈ ಜೋಡಿಸ ಬೇಕಾಗಿದೆ. ಮೊದಲ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಎದುರಾಗಿದ್ದ ಆರೋಗ್ಯ ಮೂಲಸೌಕರ್ಯ ಸವಾಲಿಗೂ ಮೂರನೇ ಅಲೆಯ ಆರೋಗ್ಯ ಮೂಲಸೌಕರ್ಯ ಸವಾಲಿನ ಸ್ವರೂಪವೇ ಬದಲಾಗಿದೆ. ಹೀಗಾಗಿ ಇಂದಿನ ಅಗತ್ಯತೆಗೆ ತಕ್ಕಂತೆ ಸರಕಾರವು ಕ್ರಮ ಕೈಗೊಳ್ಳಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸೂಚನೆ ನೀಡಿದ್ದು ಪರಿಣಾಮಕಾರಿಯಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕಾಗಿದೆ.

ಸರಕಾರಕ್ಕೆ ಈಗ ಔಷಧದ ಕಿಟ್‌ಗಳನ್ನು ಮನೆ ಮನೆಗೆ ತಲುಪಿಸು ವುದು ಹೊಸ ಸವಾಲು. ಸರಕಾರವೇ ಸೋಂಕು ಕಾಣಿಸಿಕೊಂಡವರು ಗಂಭೀರ ಪರಿಸ್ಥಿತಿ ಇದ್ದರೆ ಹೊರತುಪಡಿಸಿ ಆಸ್ಪತ್ರೆಗೆ ಬರುವುದು ಬೇಡ, ಮನೆಯಲ್ಲೇ ಚಿಕಿತ್ಸೆ ಪಡೆಯಿರಿ ಎಂದು ಹೇಳಿದೆ. ಹೀಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಔಷಧ ಕಿಟ್‌ ತಲುಪಿಸುವುದು ಇಂದಿನ ಅಗತ್ಯ ಹಾಗೂ ಆನಿವಾರ್ಯತೆ. ಹೀಗಾಗಿ ಆಡಳಿತ ಹಾಗೂ ವಿಪಕ್ಷ ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ.

ಟಾಪ್ ನ್ಯೂಸ್

“ಇಸ್ಲಾಮಿಕ್‌ ಆಕ್ರಮಿತ ದೇಗುಲಗಳನ್ನು ತೆರವುಗೊಳಿಸುವುದೇ ನಮ್ಮ ಗುರಿ’

“ಇಸ್ಲಾಮಿಕ್‌ ಆಕ್ರಮಿತ ದೇಗುಲಗಳನ್ನು ತೆರವುಗೊಳಿಸುವುದೇ ನಮ್ಮ ಗುರಿ’

ಪಿಯು ಕಾಲೇಜು ಸಮವಸ್ತ್ರ: ಇಲಾಖೆ ಮಾರ್ಗಸೂಚಿ

ಪಿಯು ಕಾಲೇಜು ಸಮವಸ್ತ್ರ: ಇಲಾಖೆ ಮಾರ್ಗಸೂಚಿ

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

PSIಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ

ಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

ಭಾರತದ ವಸುದೈವ ಕುಟುಂಬಕಂ ಜಗತ್ತಿಗೇ ಮಾದರಿಯಾಗಲಿ

ಭಾರತದ ವಸುದೈವ ಕುಟುಂಬಕಂ ಜಗತ್ತಿಗೇ ಮಾದರಿಯಾಗಲಿ

ಈ ವರ್ಷವಾದರೂ ಸುಸೂತ್ರವಾಗಿ ನಡೆಯಲಿ ಶಾಲೆಗಳು

ಈ ವರ್ಷವಾದರೂ ಸುಸೂತ್ರವಾಗಿ ನಡೆಯಲಿ ಶಾಲೆಗಳು

ಆ್ಯಸಿಡ್‌ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆಯಾಗಲಿ

ಆ್ಯಸಿಡ್‌ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆಯಾಗಲಿ

ಗ್ರಾಮೀಣ ಜನರ ಮೊರೆಗೆ ಸ್ಪಂದಿಸಿದ ರಾಜ್ಯ ಸರಕಾರ

ಗ್ರಾಮೀಣ ಜನರ ಮೊರೆಗೆ ಸ್ಪಂದಿಸಿದ ರಾಜ್ಯ ಸರಕಾರ

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

“ಇಸ್ಲಾಮಿಕ್‌ ಆಕ್ರಮಿತ ದೇಗುಲಗಳನ್ನು ತೆರವುಗೊಳಿಸುವುದೇ ನಮ್ಮ ಗುರಿ’

“ಇಸ್ಲಾಮಿಕ್‌ ಆಕ್ರಮಿತ ದೇಗುಲಗಳನ್ನು ತೆರವುಗೊಳಿಸುವುದೇ ನಮ್ಮ ಗುರಿ’

ಪಿಯು ಕಾಲೇಜು ಸಮವಸ್ತ್ರ: ಇಲಾಖೆ ಮಾರ್ಗಸೂಚಿ

ಪಿಯು ಕಾಲೇಜು ಸಮವಸ್ತ್ರ: ಇಲಾಖೆ ಮಾರ್ಗಸೂಚಿ

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.