ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಮರುಪರಿಶೀಲನೆ ಅಗತ್ಯ


Team Udayavani, Apr 23, 2018, 6:00 AM IST

3.jpg

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಅಧ್ಯಾದೇಶಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳ ಮೇಲೆ ಈ ಅಮಾನುಷ ಪಾತಕ ಎಸಗುವವರನ್ನು ನೇಣಿಗೇರಿಸುವುದೇ ಸರಿ ಎಂದು ಕೆಲವರು ವಾದಿಸಿದರೆ ಇನ್ನೂ ಕೆಲವರು ಅಪರಾಧಿಯನ್ನು ಸಾಯಿಸುವುದರಿಂದ ಅಪರಾಧ ಕಡಿಮೆಯಾಗುವುದಿಲ್ಲ ಎಂದು ಈ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಅದರಲ್ಲೂ ಕೆಲವು ಮಕ್ಕಳ ಹಕ್ಕು ಕಾರ್ಯಕರ್ತರೇ ಗಲ್ಲು ಶಿಕ್ಷೆ ವಿಧಿಸುವುದು ಸರಿಯಾದ ಕ್ರಮವಲ್ಲ ಎಂದು ಹೇಳುತ್ತಿದ್ದಾರೆ. ಕಠುವಾದಲ್ಲಿ ಎಂಟರ ಹರೆಯದ ಬಾಲಕಿ ಮೇಲೆ ನಡೆದಿರುವ ಬರ್ಬರ ಅತ್ಯಾಚಾರದ ಹಿನ್ನೆಲೆಯಲ್ಲಿ ಜನರ ಒತ್ತಾಯಕ್ಕೆ ಮಣಿದು ಸರಕಾರ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಅಧ್ಯಾದೇಶ ತಂದಿದೆ. ಇದೀಗ ರಾಷ್ಟ್ರಪತಿಯವರ ಅಂಕಿತವೂ ಬಿದ್ದಿರುವುದರಿಂದ ಇದು ಕಾನೂನು ರೂಪದಲ್ಲಿ ಜಾರಿಗೆ ಬಂದಂತಾಗಿದೆ. ಈ ಮೂಲಕ ಇಂತಹ ಅಪರಾಧ ಕೃತ್ಯಕ್ಕೆ ಮರಣ ದಂಡನೆ ವಿಧಿಸುವ ಬರೀ 13 ದೇಶಗಳ ಸಾಲಿಗೆ ಭಾರತವೂ ಸೇರಿತು. ಚೀನ, ಖತಾರ್‌, ಸುಡಾನ್‌, ಯುಎಇ, ತಜಿಕಿಸ್ಥಾನ್‌, ಟುನಿಶಿಯಾದಂತಹ ಕೆಲ ದೇಶಗಳಲ್ಲಿ ಮಾತ್ರ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ವಿಧಿಸಲಾಗುತ್ತದೆ. 

ಕಠುವಾ, ಉನ್ನಾವೊ ಮತ್ತು ಸೂರತ್‌ನಲ್ಲಿ ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಒತ್ತಡಕ್ಕೆ ಮಣಿದು ಸರಕಾರ ಗಲ್ಲು ಶಿಕ್ಷೆ ವಿಧಿಸುಂತಹ ಮಹತ್ವದ ಕಾನೂನನ್ನು ಅವಸರದಲ್ಲಿ ಜಾರಿಗೆ ತಂದಿರುವಂತೆ ಕಾಣಿಸುತ್ತದೆ. ನಿಜ, ಕೆಲ ದಿನಗಳಿಂದೀಚೆಗೆ ಅತ್ಯಾಚಾರ ಪ್ರಕರಣಗಳು ಭಾರೀ ಸುದ್ದಿ ಮಾಡುತ್ತಿವೆ ಹಾಗೂ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಕೃತ್ಯಗಳಿಂದ ಭಾರತದ ವರ್ಚಸ್ಸಿಗೆ ಹಾನಿಯಾಗಿದೆ. ಹೀಗಾಗಿ ಪ್ರಧಾನಿ ಮೋದಿ ವಿದೇಶದಿಂದ ಆಗಮಿಸಿದ ಕೂಡಲೇ ಅಧ್ಯಾದೇಶವನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಮಂಜೂರು ಮಾಡಿಕೊಳ್ಳಲಾಗಿದೆ. ಮರುದಿನವೇ ರಾಷ್ಟ್ರಪತಿಯವರು ಅದಕ್ಕೆ ಅಂಕಿತವನ್ನೂ ಹಾಕಿದ್ದಾರೆ. ದಿಲ್ಲಿಯ ನಿರ್ಭಯಾ ಪ್ರಕರಣದಲ್ಲಾಗಿರುವಂತೆ ಜನಾಕ್ರೋಶ ತನ್ನ ವಿರುದ್ಧ ತಿರುಗಬಹುದು ಎಂಬ ಭೀತಿಯೇ ಸರಕಾರ ಇಷ್ಟು ತ್ವರಿತವಾಗಿ ನಿರ್ಧಾರ ಕೈಗೊಳ್ಳಲು ಕಾರಣವಾಗಿರುವ ಸಾಧ್ಯತೆಯೂ ಇದೆ. ಗಲ್ಲು ಶಿಕ್ಷೆಯಂತಹ ಕಾನೂನನ್ನು ಯಾವುದೇ ಚರ್ಚೆಯಿಲ್ಲದೆ, ಸಂಬಂಧಪಟ್ಟ ಕಾರ್ಯಕರ್ತರ, ಕಾನೂನು ತಜ್ಞರ ಸಲಹೆ ಪಡೆದುಕೊಳ್ಳದೆ ಹೀಗೆ ದಿಢೀರ್‌ ಜಾರಿಗೆ ತಂದಿರುವುದು ಸಮರ್ಪಕವಾದ ನಡೆಯಲ್ಲ. 

ಇಷ್ಟಕ್ಕೂ ಮರಣ ದಂಡನೆ ವಿಧಿಸಿದ ಕೂಡಲೇ ಅಪರಾಧಗಳು ಕಡಿಲೆಯಾಗುತ್ತವೆ ಎನ್ನುವುದೇ ಒಂದು ಮಿಥ್ಯೆ. ದೇಶದಲ್ಲಿ ಈಗಾಗಲೇ ಭಯೋತ್ಪಾದನೆ ಮತ್ತು ಕೊಲೆ ಪ್ರಕರಣಗಳಿಗೆ ಮರಣ ದಂಡನೆ ವಿಧಿಸಲಾಗುತ್ತದೆ. ಇದರಿಂದ ಕೊಲೆ ಪ್ರಕರಣಗಳೇನೂ ಕಡಿಮೆಯಾಗಿಲ್ಲ. 2016ರಲ್ಲಿ 136 ಮಂದಿಗೆ ಮರಣ ದಂಡನೆ ವಿಧಿಸಲಾಗಿತ್ತು. ಆದರೆ ಆ ವರ್ಷವೇ 30000ಕ್ಕೂ ಹೆಚ್ಚು ಕೊಲೆಗಳು ಸಂಭವಿಸಿವೆ. ಈ ಸಂದರ್ಭದಲ್ಲಿ ಇಂತಹ ಕೆಲವು ಅಂಕಿಅಂಶಗಳತ್ತಲೂ ಗಮನ ಹರಿಸಬೇಕು. 

ನಿರ್ಭಯಾ ಪ್ರಕರಣದ ಬಳಿಕ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಎಂಬ ಕಠಿಣ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಮಕ್ಕಳ ಮೇಲಾದ ಲೈಂಗಿಕ ಆಕ್ರಮಣಗಳ ಪ್ರಕರಣಗಳ ವಿಚಾರಣೆಗಾಗಿ ಪೋಕ್ಸೋ ಕೋರ್ಟ್‌ಗಳನ್ನು ಸ್ಥಾಪಿಸಬೇಕು, ವರ್ಷದೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂಬಿತ್ಯಾದಿ ಕಠಿನ ನಿಯಮಗಳು ಈ ಕಾಯಿದೆಯಲ್ಲಿವೆ. ಆದರೆ ಇದರ ಜಾರಿ ಬಳಿಕ 2016ರಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು 1 ಲಕ್ಷ ದಾಟಿವೆ ಹಾಗೂ ಈ ಪೈಕಿ ವಿಚಾರಣೆಗೆ ಬಂದಿರುವುದು 229 ಮಾತ್ರ. ಪೋಕ್ಸೋ ನ್ಯಾಯಾಲಯಗಳಲ್ಲಿ 1 ಲಕ್ಷ ಮೇಲ್ಪಟ್ಟು ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಕಾನೂನು ರಚಿಸಿದಷ್ಟು ವೇಗವಾಗಿ ನ್ಯಾಯಾಂಗ ವ್ಯವಸ್ಥೆ ಚಲಿಸುತ್ತಿಲ್ಲ ಎನ್ನುವುದು ಇದರಿಂದ ತಿಳಿಯುತ್ತದೆ. ಈ ಮೂಲಭೂತ ವಿಷಯವನ್ನೇ ಬಿಟ್ಟು ಸರಕಾರ ಮತ್ತೆ ಮತ್ತೆ ಕರಾಳ ಕಾನೂನು ಮೊರೆ ಹೋಗುವುದು ನಿರರ್ಥಕ. 

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊದ ವರದಿಯ ಪ್ರಕಾರ ಶೇ. 95 ಅತ್ಯಾಚಾರ ಪ್ರಕರಣಗಳಲ್ಲಿ ಸಂಬಂಧಿಕರೇ ಆರೋಪಿಗಳಾಗಿರುತ್ತಾರೆ. ಹೀಗಾಗಿ ಅತ್ಯಾಚಾರಕ್ಕೆ ಮರಣ ದಂಡನೆ ವಿಧಿಸಿದರೆ ಬಹುತೇಕ ಪ್ರಕರಣಗಳು ವರದಿಯಾಗದೇ ಹೋಗುವ ಸಾಧ್ಯತೆಯೂ ಇದೆ. ಬಹುತೇಕ ಅತ್ಯಾಚಾರ ಪ್ರಕರಣಗಳು ಬಿದ್ದು ಹೋಗುವುದು ಸಂತ್ರಸ್ತರು ನ್ಯಾಯಾಲಯಗಳಲ್ಲಿ ಹೇಳಿಕೆ ಹಿಂದೆಗೆಯುವುದರಿಂದ ಇಲ್ಲವೇ ವಿಚಾರಣೆಗೆ ಹಾಜರಾಗದೆ ಇರುವುದರಿಂದ. ಹೀಗಾಗಿ ಮರಣ ದಂಡನೆ ಜಾರಿಯಾದ ಬಳಿಕ ಖುಲಾಸೆ ಪ್ರಮಾಣವೂ ಹೆಚ್ಚಾಗಬಹುದು ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ. ಹೀಗಾಗಿ ಈ ನಿರ್ಧಾರವನ್ನು ಮರುಪರಿಶೀಲಿಸುವ ಅಗತ್ಯವಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.