ವೃತ್ತಿಪರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಬೇಡಿ


Team Udayavani, Aug 8, 2022, 6:00 AM IST

ವೃತ್ತಿಪರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಬೇಡಿ

ಈಗಾಗಲೇ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಸಂಬಂಧ ಸಿಇಟಿ ಫ‌ಲಿತಾಂಶ ಪ್ರಕಟವಾಗಿದ್ದು, ಕೌನ್ಸೆಲಿಂಗ್‌ನ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ­ಯಾಗಬೇಕಾಗಿದೆ. ಎಲ್ಲವೂ ಅಂದುಕೊಂಡಂತಾಗಿದ್ದರೆ ಆ.5ರಂದೇ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಇದನ್ನು ಸೆಪ್ಟಂಬರ್‌ಗೆ ಮುಂದೂಡಲಾಗಿದ್ದು, ಇನ್ನೂ ವೇಳಾಪಟ್ಟಿ ಪ್ರಕಟಿಸದಿರುವುದು ವಿದ್ಯಾರ್ಥಿಗಳಲ್ಲಿ ಆತಂಕಕ್ಕೂ ಕಾರಣವಾಗಿದೆ.

ಇದರ ಮಧ್ಯೆಯೇ ವಿದ್ಯಾರ್ಥಿಗಳು ಮತ್ತು ಪೋಷಕರು ದೊಡ್ಡ­ದೊಂದು ಗೊಂದಲಕ್ಕೆ ಸಿಲುಕಿದ್ದಾರೆ. ಖಾಸಗಿ ಕಾಲೇಜುಗಳಿಗೆ ಪ್ರವೇಶಾತಿ ಸಂಬಂಧ ಕಾಮೆಡ್‌-ಕೆ ನಡೆಸಿದ್ದ ಪರೀಕ್ಷೆಯ ಫ‌ಲಿತಾಂಶ ಪ್ರಕಟವಾಗಿ ಆ.18ರಿಂದಲೇ ದಾಖಲಾತಿ ಪರಿಶೀಲನೆ ಆರಂಭವಾಗಲಿದೆ. ಆ.26­ರಿಂದಲೇ ಪ್ರವೇಶ ಪ್ರಕ್ರಿಯೆಯನ್ನೂ ಆರಂಭಿಸಲು ಅದು ನಿರ್ಧರಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಾವು ಮೊದಲಿಗೆ ಕಾಮೆಡ್‌-ಕೆ ಕೌನ್ಸೆ­ಲಿಂಗ್‌ಗೆ ಹಾಜರಾಗಿ ಸೀಟು ಆಯ್ದುಕೊಳ್ಳಬೇಕೋ ಅಥವಾ ಸಿಇಟಿಯಡಿ ಸೀಟು ಆಯ್ಕೆ ಮಾಡಿಕೊಳ್ಳಬೇಕೋ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ.

ಬಡ ವಿದ್ಯಾರ್ಥಿಗಳು ಕಾಮೆಡ್‌-ಕೆಯಡಿಯಲ್ಲಿ ಎಂಜಿನಿಯರಿಂಗ್‌ ಪ್ರವೇಶ ಪಡೆಯುವುದು ಕಷ್ಟಕರ. ಅಲ್ಲಿನ ಶುಲ್ಕವೂ ದುಬಾರಿ. ಅಲ್ಲದೆ, ಮಧ್ಯಮ ವರ್ಗದ ವಿದ್ಯಾರ್ಥಿಗಳೂ ಕಾಮೆಡ್‌-ಕೆಯಡಿ ಬರುವ ಕಾಲೇಜಿಗೆ ಸೇರಲು ಹಿಂದೆ ಮುಂದೆ ನೋಡುತ್ತಾರೆ. ಇದಕ್ಕೆ ಬದಲಾಗಿ ಮೊದಲೇ ಸಿಇಟಿಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಸೀಟು ಹಂಚಿಕೆ ಮಾಡಿದ್ದರೆ ಚೆನ್ನಾಗಿತ್ತು. ಒಂದು ವೇಳೆ ಇಲ್ಲಿ ಸೀಟು ಸಿಗದಿದ್ದರೆ, ಅನಂತರದಲ್ಲಿ ಕಾಮೆಡ್‌-ಕೆ ಕಾಲೇಜುಗಳಲ್ಲಿ ಸೀಟು ಪಡೆಯಲು ನೋಡ­ಬಹುದಿತ್ತು. ಈಗ ಮೊದಲೇ ನಾವು ಕಾಮೆಡ್‌ ಕೆ ಕಾಲೇಜುಗಳಲ್ಲಿ ಸೀಟು ಆರಿಸಿಕೊಳ್ಳುವ ಸ್ಥಿತಿ ಎದುರಾಗಿದೆ ಎಂಬುದು ವಿದ್ಯಾರ್ಥಿಗಳ ಅಳಲು.

ವಿದ್ಯಾರ್ಥಿಗಳ ಈ ಬೇಸರಕ್ಕೆ ಅರ್ಥವೂ ಇದೆ. ಕಾಮೆಡ್‌-ಕೆನಲ್ಲಿ ಸೀಟು ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದು, ಮತ್ತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೌನ್ಸೆಲಿಂಗ್‌ಗೆ ಹಾಜರಾಗಿ ಅಲ್ಲಿ ಸೀಟು ಸಿಕ್ಕರೆ ಮೊದಲು ಆಯ್ಕೆ ಮಾಡಿಕೊಂಡಿದ್ದ ಕಾಲೇಜನ್ನು ಬಿಡಬೇಕಾಗು­ತ್ತದೆ. ಅಲ್ಲದೆ, ಪ್ರವೇಶಕ್ಕಾಗಿ ಶುಲ್ಕವನ್ನೂ ಕಟ್ಟಿರಬೇಕಾಗುತ್ತದೆ. ಕರ್ನಾ­ಟಕ ಪರೀಕ್ಷಾ ಪ್ರಾಧಿಕಾರದಡಿ ಸೀಟು ಪಡೆದ ಬಳಿಕ ಕಾಮೆಡ್‌-ಕೆಯ­ಡಿಯ ಕಾಲೇಜಿನಲ್ಲಿ ಶುಲ್ಕ ವಾಪಸ್‌ ಕೊಡಿ ಎಂದು ಕೇಳುವುದು ಕಷ್ಟ. ಹೀಗಾಗಿ ಮುಂದೇನು ಮಾಡಬೇಕು ಎಂಬುದು ಗೊತ್ತಾಗದಂತಾಗಿದೆ.
ಈ ಹಿಂದೆ ಪ್ರತಿ ವರ್ಷವೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ, ಕಾಮೆಡ್‌-ಕೆಗಿಂತ ಮೊದಲು ಕೌನ್ಸೆಲಿಂಗ್‌ ಮುಗಿಸುತ್ತಿತ್ತು.

ಇದರಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಉಪಯೋಗವಾಗುತ್ತಿತ್ತು. ಮೊದಲೇ ಹೇಳಿದ ಹಾಗೆ, ಒಂದು ವೇಳೆ ಇಲ್ಲಿ ಸೀಟು ಸಿಗದೇ ಹೋದರೆ ಅಥವಾ ತಾವು ಆಯ್ಕೆ ಮಾಡಿಕೊಳ್ಳಲು ಇಚ್ಚಿಸುವ ಕಾಲೇಜಿನಲ್ಲಿ ಸೀಟು ಸಿಗದಿದ್ದರೆ ಕಾಮೆಡ್‌-ಕೆ ಮೂಲಕ ಪ್ರವೇಶ ಪಡೆಯುತ್ತಿದ್ದರು. ಈಗ ಮೊದಲ ಆಯ್ಕೆಯೇ ಕಾಮೆಡ್‌-ಕೆ ಆದರೆ ಕಷ್ಟಕರ ಎಂಬುದು ವಿದ್ಯಾರ್ಥಿಗಳ ನೋವು.

ಈಗ ರಾಜ್ಯ ಸರಕಾರ ಮಾಡಬೇಕಾಗಿರುವುದು ಇಷ್ಟೇ. ಕಾಮೆಡ್‌-ಕೆ ಪ್ರಕ್ರಿಯೆಗಿಂತ ಮೊದಲೇ ಇಲ್ಲಿ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು. ಈ ಮೂಲಕ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಕಾಯಬೇಕು. ಇಲ್ಲದೆ ಹೋದರೆ, ದುಬಾರಿ ಶುಲ್ಕ ತೆತ್ತು ಕಾಲೇಜಿಗೆ ಸೇರುವ ಅನಿವಾರ್ಯತೆ ಉಂಟಾಗುವ ಸಾಧ್ಯತೆಯೇ ಹೆಚ್ಚು.

ಟಾಪ್ ನ್ಯೂಸ್

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krs

Cauvery ಅನ್ಯಾಯ: ಪರಿಹಾರ ಸೂತ್ರ ಬೇಕೇ ಬೇಕು

CANADA PM

Justin Trudeau: ಕೆನಡಾ ಪ್ರಧಾನಿಯ ಬಾಲಿಶ ವರ್ತನೆ

tdy-6

Women’s Reservation Bill: ತಡೆ ಇಲ್ಲದೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಲಿ

ಚರಿತ್ರೆ-ವರ್ತಮಾನ-ಭವಿಷ್ಯದ ಕೊಂಡಿ ಹಳೆ ಸಂಸತ್‌ ಭವನ

ಚರಿತ್ರೆ-ವರ್ತಮಾನ-ಭವಿಷ್ಯದ ಕೊಂಡಿ ಹಳೆ ಸಂಸತ್‌ ಭವನ

TERRORISTS IMP

Terrorism: ಉಗ್ರ ಸಂಹಾರ ವಿಷಯದಲ್ಲಿ ರಾಜಕೀಯ ಬೇಡ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.