ಶಾಲಾರಂಭಕ್ಕೆ ಸರಕಾರದ ಸಿದ್ಧತೆ: ಮಕ್ಕಳ ಮೇಲೂ ಇರಲಿ ಗಮನ


Team Udayavani, Aug 17, 2021, 6:10 AM IST

ಶಾಲಾರಂಭಕ್ಕೆ ಸರಕಾರದ ಸಿದ್ಧತೆ: ಮಕ್ಕಳ ಮೇಲೂ ಇರಲಿ ಗಮನ

ರಾಜ್ಯದಲ್ಲಿ ಭೌತಿಕ ತರಗತಿ ಆರಂಭಿಸಲು ದಿನಾಂಕ ನಿಗದಿ ಮಾಡಿದ್ದು ಮಾತ್ರವಲ್ಲದೆ, ಸುರಕ್ಷಿತ ವಾತಾವರಣದಲ್ಲಿ ನಿರಂತರ ಕಲಿಕೆಗೆ ಅನುಕೂಲವಾಗುವಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ)ವನ್ನು ಬಿಡುಗಡೆ ಮಾಡಲಾಗಿದೆ. ಆ.23ರಿಂದ ಪ್ರೌಢಶಾಲೆ ಹಾಗೂ ಪಿಯು ತರಗತಿಯ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬರಲಿದ್ದಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಶಾಲಾ ಕೊಠಡಿಗಳಲ್ಲಿದ್ದು, ಕಲಿಕೆ ಮುಂದುವರಿಸಲಿದ್ದಾರೆ. ಕಳೆದ ಐದಾರು ತಿಂಗಳಿನಿಂದ ಮನೆಯಲ್ಲೇ ಆನ್‌ಲೈನ್‌ ಅಥವಾ ಪೂರ್ವಮುದ್ರಿತ ವೀಡಿಯೋ ತರಗತಿಗಳ ಮೂಲಕ ಕಲಿಕೆಯಲ್ಲಿದ್ದ ವಿದ್ಯಾರ್ಥಿಗಳು ಈಗ ಶಾಲಾ ಕಾಲೇಜಿಗೆ ಬರಲು ಸಜ್ಜಾಗಿದ್ದಾರೆ.

ಭೌತಿಕ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗೆ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಾಲಾ ಕಾಲೇಜು ಆವರಣದ ಸ್ವತ್ಛತೆ, ದಿಢೀರ್‌ ಅಸ್ವಸ್ಥಗೊಳ್ಳುವ ಮಕ್ಕಳಿಗೆ ಐಸೊಲೇಶನ್‌ ಕೊಠಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಹಕಾರಿಯಾಗಲು 3ರಿಂದ ಆರು ಅಡಿ ಅಂತರದಲ್ಲಿ ಬೆಂಚ್‌ಗಳ ಜೋಡಣೆ, ಪ್ರತಿ ವಿದ್ಯಾರ್ಥಿಯ ದೇಹದ ಉಷ್ಣಾಂಶ ಪರೀಕ್ಷೆ, ಶೌಚಾಲಯ ಸ್ವತ್ಛತೆ ಸೇರಿದಂತೆ ವಿದ್ಯಾರ್ಥಿಗಳು ಸುರಕ್ಷಿತ ವಾತಾವರಣದಲ್ಲಿ ಕಲಿಕೆ ಮುಂದುವರಿಸಲು ಬೇಕಿರುವ ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ.

ಆದರೆ ಕೊರೊನಾ ಸಂಪೂರ್ಣ ಹೋಗಿಲ್ಲ ಮತ್ತು ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುವ ಬಗ್ಗೆಯೂ ತಜ್ಞರು ಈಗಾಗಲೇ ವಿಶ್ಲೇಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಕ, ಪೋಷಕರು ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯೂ ಅತೀ ಮುಖ್ಯವಾಗಿದೆ. ವಿದ್ಯಾರ್ಥಿಯ ಕಲಿಕೆ ಎಷ್ಟು ಮುಖ್ಯವೋ ಕೊರೊನಾ ವಿರುದ್ಧ ಹೋರಾಟ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯ.

ಹೀಗಾಗಿ ಹೆತ್ತವರು ತಮ್ಮ ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸುವಾಗ ಮನೆಯಿಂದಲೇ ಹೆಚ್ಚು ವ್ಯವಸ್ಥಿತ ರೀತಿಯಲ್ಲಿ ಸಜ್ಜುಗೊಳಿಸಿ ಕಳುಹಿಸುವುದು ಒಳ್ಳೆಯದು. ಮಾಸ್ಕ್ ಧರಿಸುವುದು ಕಡ್ಡಾಯ. ಆದರೂ ವಿದ್ಯಾರ್ಥಿಗಳು ಅನೇಕ ಬಾರಿ ಅರಿವಿದ್ದು ಅಥವಾ ಇಲ್ಲದೆಯೋ ಸರಿಯಾಗಿ ಮಾಸ್ಕ್ ಧರಿಸದೇ ಇರಬಹುದು. ಮನೆಯಿಂದಲೇ ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸಿ ಕಳುಹಿಸುವುದು, ಸ್ನೇಹಿತರೊಂದಿಗೆ ವ್ಯವಹರಿಸುವ ಸಂದರ್ಭದಲ್ಲೂ ಜಾಗೃತಿ ವಹಿಸುವಂತೆ ತಿಳಿ ಹೇಳುವುದು, ಮನೆಯಿಂದ ಶಾಲೆಗೆ ಹೋಗುವಾಗ ಅಥವಾ ವಾಪಸ್‌ ಮನೆಗೆ ಬರುವಾಗ ಅತ್ಯಂತ ಎಚ್ಚರ ವಹಿಸುವುದು. ಅರ್ಧ ದಿನಕ್ಕೆ ಬೇಕಾಗುವಷ್ಟು ಬಿಸಿ ನೀರು, ಲಘು ಉಪಹಾರ ಇತ್ಯಾದಿಗಳನ್ನು ಮನೆಯಿಂದಲೇ ಸಿದ್ಧಪಡಿಸಿ ನೀಡಬೇಕು. ಮಕ್ಕಳಲ್ಲಿ ಜ್ವರ, ಶೀತ, ಕೆಮ್ಮು ಸೇರಿದಂತೆ ದಿಢೀರ್‌ ಅಸ್ವಸ್ಥತೆ ಕಾಣಿಸಿಕೊಂಡಲ್ಲಿ, ಶಾಲೆಗೆ ಕಳುಹಿಸದೆ ಅಗತ್ಯ ಚಿಕಿತ್ಸೆ ಕೊಡಿಸಬೇಕು. ಇದರ ಜತೆಗೆ ಮನೆಯಲ್ಲಿ ಯಾರಿಗಾದರೂ ಜ್ವರ, ಶೀತ ಅಥವಾ ಕೊರೊನಾ ಲಕ್ಷಣ ಕಾಣಿಸಿಕೊಂಡರೂ ಮಕ್ಕಳ ಸುರಕ್ಷತೆಗೆ ಗಮನ ನೀಡಬೇಕು. ಇದೆಲ್ಲದರ ಜತೆಗೆ ಲಭ್ಯವಾದಾಗ ಆದಷ್ಟು ಬೇಗ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಹೆತ್ತವರು ಶೀಘ್ರ ಲಸಿಕೆ ಹಾಕಿಸಿಕೊಂಡರೆ, ಮಕ್ಕಳಿಗೆ ಅನುಕೂಲ ಹೆಚ್ಚಿದೆ.

ಶಾಲೆಯಲ್ಲಿ ಭೌತಿಕ ತರಗತಿ ಆರಂಭವಾಗುತ್ತಿದೆಯಾದರೂ ಕೊರೊನಾ ಇನ್ನು ಹೋಗಿಲ್ಲ. ಹೀಗಾಗಿ ಸುರಕ್ಷತೆಗೆ ಆದ್ಯತೆ ನೀಡುತ್ತಾ, ನಿಯಮಗಳನ್ನು ಶಾಲೆ, ಮನೆ ಹಾಗೂ ಸುತ್ತಲಿನ ಪರಿಸರದಲ್ಲಿ ಕಟ್ಟುನಿಟ್ಟಾಗಿ ಪಾಲಿಸುವ ಕಡೆಗೂ ವಿಶೇಷ ಗಮನ ನೀಡಬೇಕು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.