ರೈಲು ನಿಲ್ದಾಣಗಳಲ್ಲಿ ತಪಾಸಣೆ: ಸಮರ್ಪಕ ಅನುಷ್ಠಾನವಾಗಲಿ

Team Udayavani, Jan 8, 2019, 12:30 AM IST

18.jpg

ದೇಶದ ಆಯ್ದ 202 ರೈಲು ನಿಲ್ದಾಣಗಳಿಗೆ ವಿಮಾನ ನಿಲ್ದಾಣಗಳ ಮಾದರಿಯ ಭದ್ರತೆಯನ್ನು ಒದಗಿಸುವ ಕಾರ್ಯಕ್ಕೆ ಸರಕಾರ ಮುಂದಾಗಿದೆ. ಇದರಲ್ಲಿ ನಮ್ಮ ರಾಜ್ಯದ ಹುಬ್ಬಳ್ಳಿ ನಿಲ್ದಾಣವೂ ಇದೆ. ಪ್ರಯಾಣಿಕರ ಸುರಕ್ಷೆಯ ದೃಷ್ಟಿಯಲ್ಲಿ ಇದೊಂದು ಮಹತ್ತರವಾದ ನಿರ್ಧಾರವೆಂದು ಹೇಳಬಹುದು. ನಮ್ಮ ದೇಶದ ರೈಲುಗಳು ಮತ್ತು ರೈಲ್ವೇ ನಿಲ್ದಾಣಗಳ ವಾಸ್ತವ ಸ್ಥಿತಿಗತಿಯನ್ನು ಗಮನಿಸಿದರೆ ಹೀಗೊಂದು ಸಮಗ್ರವಾದ ಭದ್ರತಾ ವ್ಯವಸ್ಥೆ ಬಹಳ ಹಿಂದೆಯೇ ಬರಬೇಕಿತ್ತು. ತಡವಾಗಿಯಾದರೂ ಈ ನಿಟ್ಟಿನಲ್ಲಿ 

ರೈಲ್ವೇ ಇಲಾಖೆ ಮುಂದಡಿ ಇಟ್ಟಿರುವುದು ಸ್ವಾಗತಾರ್ಹ. ಹಾಗೆಂದು ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಪ್ರಯಾಣಿಕರನ್ನು ಭದ್ರತಾ ತಪಾಸಣೆಗೆ ಗುರಿಪಡಿಸುವುದು ಹೇಳಿಕೊಂಡಷ್ಟು ಸುಲಭದ ಕಾರ್ಯವಂತೂ ಅಲ್ಲ. ಇಲ್ಲಿರುವ ಅಗಾಧ ಪ್ರಯಾಣಿಕರ ಸಂಖ್ಯೆ ಮತ್ತು ಅವ್ಯವಸ್ಥೆಯನ್ನೇ ವ್ಯವಸ್ಥೆಯೆಂದು ಒಪ್ಪಿಕೊಂಡಿರುವ ಪರಿಸ್ಥಿತಿಯಲ್ಲಿ ಭದ್ರತಾ ತಪಾಸಣೆ ಕಾರ್ಯಸಾಧುವೆ ಎನ್ನುವ ಪ್ರಶ್ನೆ ಉದ್ಭವಿಸುವುದಂತೂ ನಿಜ. 

ವಿಮಾನ ನಿಲ್ದಾಣ ಮಾದರಿಯ ತಪಾಸಣೆ ಎಂದಾದರೆ ಪ್ರಯಾಣಿಕರು ರೈಲು ಹೊರಡುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ನಿಲ್ದಾಣಕ್ಕೆ ಬರಬೇಕಾಗುತ್ತದೆ. ವಿಮಾನ ನಿಲ್ದಾಣದಲ್ಲಿ ತಾಸಿಗೂ ಮೊದಲೇ ಪ್ರಯಾಣಿಕರು ಬರಲೇಬೇಕೆಂಬ ನಿಯಮವಿದೆ ಮತ್ತು ಪ್ರಯಾಣಿಕರು ಇದನ್ನು ಪಾಲಿಸುತ್ತಾರೆ ಕೂಡಾ. ರೈಲ್ವೇ 20 ನಿಮಿಷ ಮೊದಲು ಪ್ರಯಾಣಿಕರು ಬಂದರೆ ಸಾಕು ಎನ್ನುತ್ತಿದೆಯಾದರೂ ಇಷ್ಟು ಕಡಿಮೆ ಅವಧಿಯಲ್ಲಿ ನೂರಾರು ಪ್ರಯಾಣಿಕರನ್ನು ತಪಾಸಣೆಗೆ ಗುರಿಪಡಿಸುವುದು ಸವಾಲಿನ ಕೆಲಸವೇ ಸರಿ. ರೈಲು ಪ್ರಯಾಣಿಕರು ಮತ್ತು ವಿಮಾನ ಪ್ರಯಾಣಿಕರ ವರ್ತನೆಯಲ್ಲಿ ಸಾಕಷ್ಟು ವ್ಯತ್ಯಾಸವಿರುತ್ತದೆ ಎಂಬ ಮೂಲ ಅಂಶವನ್ನು 
ಈ ಸಂದರ್ಭದಲ್ಲಿ ಇಲಾಖೆ ಅರ್ಥಮಾಡಿಕೊಳ್ಳಬೇಕು. ವಿಮಾನಕ್ಕೆ ನೂರೋ ಇನ್ನೂರೋ ಪ್ರಯಾಣಿಕರು ಸರತಿ ಸಾಲಿನಲ್ಲಿ ತಪಾಸಣೆಗಾಗಿ ಕಾಯುತ್ತಾರೆ. ಆದರೆ ರೈಲುಗಳಲ್ಲಿ ಹಾಗಲ್ಲ. ಒಂದೊಂದು ರೈಲಿನಲ್ಲೂ 800-1000 ಮಂದಿ ಪ್ರಯಾಣಿಸುತ್ತಾರೆ. ದೊಡ್ಡ ನಿಲ್ದಾಣಗಳಲ್ಲಿ ಇಂಥ ರೈಲುಗಳು ಪ್ರತಿ ನಿಮಿಷಕ್ಕೊಂದರಂತೆ ಹೋಗುತ್ತಿರುತ್ತವೆ. ಹೀಗೆ ಸಾವಿರಾರು ಪ್ರಯಾಣಿಕರಿಗೆ ಯಾವುದೇ ಅಡಚಣೆ ಮತ್ತು ಇರಿಸುಮುರಿಸಾಗದಂತೆ ತಪಾಸಣೆ ಮಾಡಲು ಸಾಧ್ಯವಾದರೆ ಇದು ಉತ್ತಮ ಕ್ರಮವಾಗುವುದರಲ್ಲಿ ಅನುಮಾನವಿಲ್ಲ. 

ರೈಲು ಪ್ರಯಾಣಿಕರನ್ನೂ ಭದ್ರತಾ ತಪಾಸಣೆಗೆ ಗುರಿಪಡಿಸಬೇಕೆಂಬ ಬೇಡಿಕೆ 2006ರಲ್ಲಿ ಮುಂಬಯಿಯ ಲೋಕಲ್‌ ರೈಲುಗಳಲ್ಲಿ ಸರಣಿ ಬಾಂಬ್‌ ಸ್ಫೋಟ ಸಂಭವಿಸಿದಾಗಲೇ ಕೇಳಿ ಬಂದಿತ್ತು. ಈ ಘಟನೆಯನ್ನನುಸರಿಸಿ ಮುಂಬಯಿ ಲೋಕಲ್‌ ರೈಲು ನಿಲ್ದಾಣಗಳ ಪ್ರವೇಶ ದ್ವಾರಗಳಲ್ಲಿ ಮೆಟಲ್‌ ಡಿಟೆಕ್ಟರ್‌, ಬ್ಯಾಗ್‌ ತಪಾಸಣೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ನಿಮಿಷಕ್ಕೆ 5000 ಪ್ರಯಾಣಿಕರು ಪ್ರಯಾಣಿಸುವ ನಿಲ್ದಾಣಗಳಲ್ಲಿ ಈ ತಪಾಸಣೆ ಎಷ್ಟು ಪ್ರಯಾಸಕರ ಎನ್ನುವುದು ಕೆಲವೇ ದಿನಗಳಲ್ಲಿ ಅರಿವಾಗಿತ್ತು. ಈಗಲೂ ಕೆಲವು ನಿಲ್ದಾಣಗಳಲ್ಲಿ ತಪಾಸಣೆ ಇದೆಯಾದರೂ ಅದು ಬರೀ ನಾಮಕಾವಸ್ತೆ ಮಾತ್ರ. 

ಬೆಂಗಳೂರು, ಮುಂಬಯಿ, ದಿಲ್ಲಿ, ಕೋಲ್ಕತ್ತದಂಥ ಮಹಾ ನಗರಗಳಲ್ಲಿ ರೈಲು ಪ್ರಯಾಣಿಕರನ್ನು ಭದ್ರತಾ ತಪಾಸಣೆಗೆ ಒಳಪಡಿಸುವುದು ಎಣಿಸಿದಷ್ಟು ಸುಲಭದ ಕಾರ್ಯವಂತೂ ಅಲ್ಲ. ಇಲ್ಲಿ ಪ್ರಯಾಣಿಕರ ಸ್ವಭಾವವನ್ನೂ ಪರಿಗಣಿಸಬೇಕಾಗುತ್ತದೆ. ಸಾಮಾನ್ಯ ಸಂದರ್ಭದಲಿಲೆ ಸೀಟಿಗಾಗಿ ನುಗ್ಗಿ ಹೋರಾಡುವ, ತುಸು ತಡವಾದರೂ ರೊಚ್ಚಿಗೆದ್ದು ದಾಂಧಲೆ ಎಸಗುವ ಸ್ವಭಾವದ ಯಾಣಿಕರು ತಪಾಸಣೆ ಹೆಸರಲ್ಲಿ ತೊಂದರೆಯಾದರೆ ಸಹಿಸಿಕೊಂಡಾರೆ? ಅವರನ್ನು ಸಂಭಾಳಿಸುವುದು ಕೂಡಾ ಹರಸಾಹಸದ ಕೆಲಸವಾದೀತು. 

ರೈಲು ನಿಲ್ದಾಣ ಮತ್ತು ರೈಲುಗಳು ಯಾವಾಗಲೂ ಉಗ್ರರ ಸುಲಭದ ಗುರಿಗಳಾಗಿರುತ್ತವೆ. ಇವರಲ್ಲದೆ ಇತರೆಲ್ಲ ರೀತಿಯ ಪಾತಕಿಗಳಿಗೂ ರೈಲು ಮತ್ತು ರೈಲು ನಿಲ್ದಾಣ ಆಶ್ರಯತಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ ಬರೀ ರೈಲು ನಿಲ್ದಾಣ ಮಾತ್ರವಲ್ಲದೆ ರೈಲುಗಳಲ್ಲೂ ಬಿಗು ತಪಾಸಣೆಯ ಅಗತ್ಯವಿದೆ. 

ಬಿಹಾರ, ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ರೈಲುಗಳು ಸರಕು ಸಾಗಿಸುವ ಲಾರಿಗಳಿಗಿಂತಲೂ ಕಡೆಯಾಗಿರುತ್ತವೆ. ಕುರಿ ಕೋಳಿಗಳಿಂದ ಹಿಡಿದು ಎಲ್ಲ ರೀತಿಯ ಪ್ರಾಣಿ-ವಸ್ತುಗಳನ್ನು ರೈಲುಗಳಲ್ಲಿ ಸಾಗಿಸುತ್ತಾರೆ. ಪ್ರಯಾಣಿಕರ ಸುರಕ್ಷತೆ ಎನ್ನುವುದು ಇಲ್ಲಿ ಕಾಲಕಸಕ್ಕೆ ಸಮಾನ. ಇವುಗಳನ್ನೆಲ್ಲ ನಿಯಂತ್ರಿಸಬೇಕಾದರೆ ಕಟ್ಟುನಿಟ್ಟಿನ ತಪಾಸಣೆಯ ಅಗತ್ಯವಿದೆ. ಭದ್ರತಾ ತಪಾಸಣೆ ಮೂಲಕವಾದರೂ ಭಾರತೀಯ ರೈಲ್ವೇಗೆ ಅಂಟಿರುವ ಅತ್ಯಂತ ಅಸುರಕ್ಷಿತ ಸಾರಿಗೆ ಮಾಧ್ಯಮ ಎಂಬ ಕಳಂಕ ನಿವಾರಣೆಯಾದರೆ ಒಳ್ಳೆಯದೇ. ಇದರ ಯಶಸ್ಸು ಯಾವ ರೀತಿ ಅನುಷ್ಠಾನವಾಗುತ್ತದೆ ಎಂಬುದನ್ನು ಅವಲಂಬಿಸಿದೆ. ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡು, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಇದೊಂದು ಉತ್ತಮ ಉಪಕ್ರಮವಾಗುವುದರಲ್ಲಿ ಸಂಶಯವಿಲ್ಲ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.