Isrel ಕದನ ವಿರಾಮ: ಸಂಘರ್ಷ ಅಂತ್ಯಕ್ಕೆ ಮುನ್ನುಡಿ?


Team Udayavani, Nov 23, 2023, 5:58 AM IST

ISREL

ಕಳೆದ 47 ದಿನಗಳಿಂದ ಹಮಾಸ್‌ ಉಗ್ರರನ್ನು ಗುರಿಯಾಗಿಸಿ ಗಾಜಾ ಪಟ್ಟಿಯಲ್ಲಿ ನಡೆಸುತ್ತ ಬಂದಿರುವ ಸಮರಕ್ಕೆ ತಾತ್ಕಾಲಿಕ ವಿರಾಮ ನೀಡಲು ಇಸ್ರೇಲ್‌ ಬುಧವಾರ ತನ್ನ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಸಂಧಾನ ಪ್ರಕ್ರಿಯೆಗೆ ಒಂದು ಹಂತದ ಯಶ ಲಭಿಸಿದಂತಾಗಿದೆ.

ಹಮಾಸ್‌ ಉಗ್ರರು ತನ್ನ ಮೇಲೆ ನಡೆಸಿದ ಮಾರಕ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ಸೇನೆ ಗಾಜಾಪಟ್ಟಿಯಲ್ಲಿ ನಿರಂತರವಾಗಿ ನಡೆಸುತ್ತಿರುವ ಪ್ರತಿ ದಾಳಿಗಳಿಗೆ ಉಗ್ರರ ಸಹಿತ ಅಲ್ಲಿನ ಸಹಸ್ರಾರು ಅಮಾಯಕ ನಾಗರಿಕರು ಸಾವನ್ನ ಪ್ಪಿದ್ದು ಗಾಜಾಪಟ್ಟಿಯಲ್ಲಿ ನರಕ ಸದೃಶ ಸನ್ನಿವೇಶ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಿಸುವಂತೆ ಇಸ್ರೇಲ್‌ ಮೇಲೆ ಅಂತಾರಾಷ್ಟ್ರೀಯ ಸಮುದಾಯದಿಂದ ಪ್ರಬಲ ಒತ್ತಡ ಹೇರಲಾಗಿತ್ತು. ಆದರೆ ಹಮಾಸ್‌ ಉಗ್ರರನ್ನು ಸಂಪೂರ್ಣವಾಗಿ ಮಟ್ಟ ಹಾಕದ ವಿನಾ ಕದನ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಸ್ರೇಲ್‌ ಸಾರಿತ್ತು. ಇದೇ ವೇಳೆ ಹಮಾಸ್‌ ಉಗ್ರರು ಕೂಡ ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿತ್ತು. ಇತ್ತಂಡಗಳ ಈ ಬಿಗಿಪಟ್ಟಿನಿಂದಾಗಿ ಯುದ್ಧ ಮತ್ತಷ್ಟು ಕಾಲ ವಿಸ್ತರಿಸುವ ಮತ್ತು ಅರಬ್‌ ರಾಷ್ಟ್ರಗಳು ಕೂಡ ರಣಭೂಮಿಗೆ ಧುಮುಕುವ ಆತಂಕ ತಲೆದೋರಿತ್ತು.

ಈ ಎಲ್ಲ ಬೆಳವಣಿಗೆಗಳ ಹೊರತಾಗಿಯೂ ಕತಾರ್‌, ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ನಡುವೆ ಸಂಧಾನಕಾರನ ಪಾತ್ರವನ್ನು ನಿರ್ವಹಿಸಿ ಇತ್ತಂಡಗಳು ರಾಜಿ ಸೂತ್ರವೊಂದಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಇದೇ ವೇಳೆ ಅಮೆರಿಕ ಕೂಡ ತನ್ನ ಮೇಲಿನ ಒತ್ತಡದಿಂದ ಪಾರಾಗುವ ದಿಸೆಯಲ್ಲಿ ಇಸ್ರೇಲ್‌ ಅನ್ನು ಸಮಾಧಾನಪಡಿಸುವ ಕಾರ್ಯದಲ್ಲಿ ನಿರತವಾಗಿತ್ತು. ಕೊನೆಗೂ ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವೆ ಸಂಧಾನವೊಂದು ಏರ್ಪಟ್ಟಿದ್ದು ತನ್ನ ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ನಾಲ್ಕು ದಿನಗಳ ಕಾಲ ಕದನ ವಿರಾಮ ಘೋಷಿಸಲು ಇಸ್ರೇಲ್‌ ನಿರ್ಧರಿಸಿದೆ. ಇಸ್ರೇಲ್‌ ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯ ಪ್ರಕಾರ ಗುರುವಾರ ಬೆಳಗ್ಗೆಯಿಂದ ನಾಲ್ಕು ದಿನಗಳ ಕದನ ವಿರಾಮ ಜಾರಿಗೆ ಬರ ಲಿದ್ದು, ಆ ಬಳಿಕ ಹಮಾಸ್‌ ಉಗ್ರರು ಮತ್ತಷ್ಟು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದಲ್ಲಿ ಕದನ ವಿರಾಮವನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಿಸುವುದಾಗಿ ಹೇಳಿದೆ. ಈ ಕದನ ವಿರಾಮ ತಾತ್ಕಾಲಿಕವೇ ಹೊರತು ಹಮಾಸ್‌ ಉಗ್ರರ ವಿರುದ್ಧದ ಯುದ್ಧ ಅಂತ್ಯಗೊಂಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದೆ.

ಈ ತಾತ್ಕಾಲಿಕ ಕದನ ವಿರಾಮ ಗಾಜಾಪಟ್ಟಿಯ ನಾಗರಿಕರನ್ನು ನಿಟ್ಟುಸಿರು ಬಿಡುವಂತೆ ಮಾಡಿದೆಯಾದರೂ ಯುದ್ಧದ ಕಾರ್ಮೋಡ ಇನ್ನೂ ಸಂಪೂರ್ಣ ಮರೆಯಾಗಿಲ್ಲ. ಈ ನಾಲ್ಕು ದಿನಗಳ ಅವಧಿಯಲ್ಲಿ ಕತಾರ್‌ ಮತ್ತು ಅಮೆರಿಕದ ಸಂಧಾನ ಮಾತುಕತೆಗಳು ಅಂತಿಮ ಘಟ್ಟ ತಲುಪಿ ಈ ಸಂಘರ್ಷ ಅಂತ್ಯಗೊಂಡಿತು ಎಂಬ ಆಶಾಭಾವನೆ ಈಗ ಜಾಗತಿಕ ಸಮುದಾಯದ್ದಾಗಿದೆ. ಹಮಾಸ್‌ ಉಗ್ರರ ಆಟಾಟೋಪಗಳಿಗೆ ಸಂಪೂರ್ಣ ಕಡಿವಾಣ ಹಾಕುವ ಜತೆಯಲ್ಲಿ ಪ್ಯಾಲೆಸ್ತೀನ್‌ನ ಸಾರ್ವಭೌಮತೆಯನ್ನು ರಕ್ಷಿಸಬೇಕಾದ ಗುರುತರ ಹೊಣೆಗಾರಿಕೆ ವಿಶ್ವ ಸಮುದಾಯದ ಮೇಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.