Udayavni Special

ದೆಹಲಿ ಹಿಂಸಾಚಾರ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿ


Team Udayavani, Feb 26, 2020, 7:45 AM IST

cha-40

ಟ್ರಂಪ್‌ ಭೇಟಿಯ ವೇಳೆಯಲ್ಲೇ, ಸಿಎಎ-ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಏಕಾಏಕಿ ಹಿಂಸಾಚಾರಕ್ಕೆ ತಿರುಗಿರುವುದರ ಹಿಂದೆ ಹಲವಾರು
ಅನುಮಾನಗಳೂ ಉದ್ಭವವಾಗಿವೆ.

ಪ್ರಜಾಪ್ರಭುತ್ವ ರಾಷ್ಟ್ರವೆಂದರೆ ಅಲ್ಲಿ ಪರ-ವಿರೋಧಕ್ಕೆ ಎಂದಿಗೂ ಮನ್ನಣೆ ಇದ್ದೇ ಇರುತ್ತದೆ. ಹಾಗೆಯೇ ಸರ್ಕಾರ ಮಾಡಿದ ಎಲ್ಲ ಕಾನೂನುಗಳನ್ನು ಜನ ಒಪ್ಪಲೇಬೇಕು ಎಂದೇನಿಲ್ಲ. ಇಂಥ ಸಂದರ್ಭಗಳಲ್ಲಿ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸುವ, ಅವುಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುವ ವರ್ಗವೂ ಇರುತ್ತದೆ. ಇದು ಆಗಲೇಬೇಕು ಕೂಡ. ಆದರೆ, ಪ್ರತಿಭಟನೆ ಎಂದಾಕ್ಷಣ, ಅಲ್ಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರ ಸಿಕ್ಕಿದೆ ಎಂದರ್ಥವಲ್ಲ.

ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರದತ್ತ ತಿರುಗುತ್ತಿರುವುದು ಸಾಮಾನ್ಯವಾಗಿಬಿಟ್ಟಿದೆ. ಅದೂ, ಸಿಎಎ-ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಏಕಾಏಕಿ ಹಿಂಸಾಚಾರಕ್ಕೆ ಈಡಾಗಿರುವುದರ ಹಿಂದೆ ಹಲವಾರು ಅನುಮಾನಗಳೂ ಉದ್ಭವವಾಗಿವೆ.

ಸದ್ಯ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಪ್ರವಾಸಕ್ಕೆಂದು ಬಂದಿದ್ದರು. ಸೋಮವಾರ ಟ್ರಂಪ್‌ ಅವರು ಗುಜರಾತ್‌ನ ಅಹ್ಮದಾಬಾದ್‌ಗೆ ಕಾಲಿಡುತ್ತಿದ್ದಂತೆ, ಅತ್ತ ದೆಹಲಿಯಲ್ಲಿ ಹಿಂಸಾಚಾರ ಶುರುವಾಗಿತ್ತು. ಸಂಜೆ ಆಗ್ರಾಗೆ ಬರುವ ಹೊತ್ತಿಗೆ, ಈ ಹಿಂಸಾಚಾರ ಇನ್ನಷ್ಟು ಹೆಚ್ಚಾಗಿತ್ತು. ರಾತ್ರಿ ವೇಳೆಗಂತೂ ಇನ್ನೂ ಹೆಚ್ಚಾಗಿತ್ತು. ಇನ್ನೊಂದು ಕಡೆಯಲ್ಲಿ, ಅಪರೂಪಕ್ಕೆ ಎಂಬಂತೆ ಅಮೆರಿಕ ಅಧ್ಯಕ್ಷರು ಭಾರತ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮಗಳ ಕಣ್ಣೆಲ್ಲಾ ಭಾರತದ ಮೇಲೆಯೇ ಇತ್ತು. ಇಂಥ ಹೊತ್ತಿನಲ್ಲಿ ಹಿಂಸಾಚಾರ ನಡೆಸುವುದರಿಂದ ಭಾರತದ ಮಾನ ಹೋಗುತ್ತದೆ ಎಂಬ ಕನಿಷ್ಠ ಅರಿವೂ ಪ್ರತಿಭಟನಾಕಾರರಿಗೆ ಇಲ್ಲದಂತಾಗಿದ್ದುದು ವಿಷಾದವೇ ಸರಿ.

ಇದಕ್ಕೆ ಪೂರಕವೆಂಬಂತೆ, ಕೇಂದ್ರ ಗೃಹ ಇಲಾಖೆಯ ಸಹಾಯಕ ಸಚಿವ ಜಿ.ಕಿಶನ್‌ ರೆಡ್ಡಿ ಅವರು, ಹಿಂಸಾಚಾರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಟ್ರಂಪ್‌ ಬಂದ ವೇಳೆಯಲ್ಲೇ ಹಿಂಸಾಚಾರ ಮಾಡಬೇಕು ಎಂದು ಸಂಚು ರೂಪಿಸಲಾಗಿದೆ ಎಂಬ ಸುಳಿವು ಸಿಕ್ಕಿದೆ ಎಂದಿದ್ದಾರೆ. ಈಶಾನ್ಯ ದೆಹಲಿಯ ಹಿಂಸಾಚಾರಕ್ಕೆ ಟ್ರಂಪ್‌ ಭೇಟಿಯ “ಅವಧಿ’ಯೇ ಕಾರಣ. “ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಹಿಂಸಾಚಾರ ಸಹಿಸುವುದಿಲ್ಲ. ಇದಕ್ಕೆ ಯಾರು ಕಾರಣರೋ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ’ ಬಗ್ಗೆಯೂ ಮಾತನಾಡಿದ್ದಾರೆ.

ಭಾರತದಲ್ಲಿ ಶಾಂತಿಯುತ ಪ್ರತಿಭಟನೆ ಎಲ್ಲರ ಹಕ್ಕಾಗಿದೆ. ಕಳೆದ ಎರಡು ತಿಂಗಳಿಂದ ಶಾಹಿನ್‌ಬಾಘ…ನಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. ಪ್ರತಿಭಟನಾಕಾರರು ಪ್ರಮುಖ ರಸ್ತೆಯೊಂದನ್ನು ತಡೆದಿದ್ದರೂ, ಕೇಂದ್ರ ಸರ್ಕಾರ ಇದುವರೆಗೆ ಅವರನ್ನು ತಡೆಯುವ ಕೆಲಸ ಮಾಡಿಲ್ಲ. ಆದರೆ, ಯಾವುದೇ ಪ್ರತಿಭಟನಾಕಾರರು ಹಿಂಸಾತ್ಮಕ ಪ್ರತಿಭಟನೆಗೆ ಮುಂದಾದರೆ ಸರ್ಕಾರ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂಬ ಎಚ್ಚರಿಕೆಯನ್ನೂ ಕಿಶನ್‌ ರೆಡ್ಡಿ ನೀಡಿದ್ದಾರೆ.

ಹೌದು, ಕಿಶನ್‌ ರೆಡ್ಡಿ ಹೇಳಿದಂತೆ, ಶಾಂತಿಯುತ ಪ್ರತಿಭಟನೆ ಎಲ್ಲರ ಹಕ್ಕು. ಆದರೆ, ಸಮಾಜದಲ್ಲಿ ಅಶಾಂತಿ ನಿರ್ಮಿಸುವುದು ಸರಿಯಲ್ಲ. ಈ ಎರಡು ದಿನದ ಹಿಂಸಾಚಾರದಿಂದ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ನಷ್ಟವಾಗಿದೆ. ದೆಹಲಿಯ ಸಾಮಾನ್ಯ ಜನ ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಪ್ರತಿಭಟನೆಯ ಹೆಸರಿನಲ್ಲಿ ಜನಸಾಮಾನ್ಯರನ್ನು ಗೋಳೊಯ್ದುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಯೂ ಉದ್ಭವವಾಗುತ್ತದೆ.

ಇನ್ನು ಟ್ರಂಪ್‌ ಆಗಮನದ ಹೊತ್ತಲ್ಲೇ ಇಂಥ ಹಿಂಸಾತ್ಮಕ ಕೆಲಸ ಮಾಡುವುದರಿಂದ ಅಮೆರಿಕ ಅಧ್ಯಕ್ಷರ ಗಮನ ಸೆಳೆಯಬಹುದು ಎಂಬುದು ತಪ್ಪು ಗ್ರಹಿಕೆ. ಏಕೆಂದರೆ, ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಟ್ರಂಪ್‌ ಉತ್ತರಿಸಿರುವುದು ಹೀಗೆ: ಸಿಎಎ ಸಂಬಂಧಿ ಹಿಂಸಾಚಾರದ ವಿಚಾರ ನನ್ನ ಕಿವಿಗೆ ಬಿದ್ದಿದೆ. ಆದರೆ, ಇದು ಭಾರತಕ್ಕೆ ಸಂಬಂಧಿಸಿದ ವಿಚಾರ. ಮೋದಿ ಅವರು ಎಲ್ಲರ ಧಾರ್ಮಿಕ ಸ್ವಾತಂತ್ರ್ಯ ಬಯಸುತ್ತಿದ್ದಾರೆ. ಹೀಗಾಗಿ, ಟ್ರಂಪ್‌ರಿಂದ ಯಾವುದೋ ಪರಿಹಾರ ಸಿಗಬಹುದು ಎಂದು ಇಂಥ ಕ್ರಮಕ್ಕೆ ಮುಂದಾಗಿದ್ದರೆ ಅದು ಪ್ರತಿಭಟನಾಕಾರರ ದಡ್ಡತನವಾದೀತು.

ಇದೆಲ್ಲದರ ಜತೆಗೆ, ರಾಜಕಾರಣಿಗಳೂ ಅಷ್ಟೇ, ತಾವೇನು ಮಾತನಾಡುತ್ತಿದ್ದೇವೆ ಎಂಬುದರ ಅರಿವು ಇರಲೇಬೇಕು. ದೆಹಲಿಯ ಎರಡು ದಿನದ ಹಿಂಸಾಚಾರಕ್ಕೆ ಸ್ಥಳೀಯ ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾರತ್ತ ಬೆರಳು ತೋರಲಾಗುತ್ತಿದೆ. ಮಿಶ್ರಾ ಹಾಕಿದ ಬೆದರಿಕೆಯಿಂದಲೇ ಈ ಪ್ರಮಾಣದ ಹಿಂಸಾಚಾರವಾಗಿದೆ ಎಂಬ ಆರೋಪವೂ ಇದೆ. ಈ ಬಗ್ಗೆ ದೆಹಲಿಯ ಸಂಸದ ಗೌತಮ್‌ ಗಂಭೀರ್‌ ಕೂಡ ಅಸಮಾಧಾನ ವ್ಯಕ್ತಪಡಿಸಿ, ಈ ಘಟನೆಗೆ ಕುಮ್ಮುಕ್ಕು ನೀಡಿದವರು ಯಾವುದೇ ಪಕ್ಷದವರಾದರೂ ಸರಿಯೇ, ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದಿದ್ದಾರೆ. ಏನೇ ಆದರೂ, ಪರಿಸ್ಥಿತಿ ಬೇಗನೇ ಹತೋಟಿಗೆ ಬರುವಂತೆ ನೋಡಿಕೊಳ್ಳಬೇಕಾದದ್ದು ಸರ್ಕಾರಗಳ ಹಾಗೂ ಸಮಾಜದ ಜವಾಬ್ದಾರಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಹುಸಿ ಸುದ್ದಿಗಳ ಹರಿದಾಟ ಎಚ್ಚರಿಕೆ ಇರಲಿ

ಹುಸಿ ಸುದ್ದಿಗಳ ಹರಿದಾಟ ಎಚ್ಚರಿಕೆ ಇರಲಿ

ಹಿಂದಿರುಗುತ್ತಿರುವ ವಲಸೆ ಕಾರ್ಮಿಕರು! ಕಷ್ಟಕ್ಕೆ ಕೂಡಲೇ ಸ್ಪಂದಿಸಿ

ಹಿಂದಿರುಗುತ್ತಿರುವ ವಲಸೆ ಕಾರ್ಮಿಕರು! ಕಷ್ಟಕ್ಕೆ ಕೂಡಲೇ ಸ್ಪಂದಿಸಿ

ಎಲ್ಲ ವರ್ಗದವರಿಗೂ ನೆರವು ಅಗತ್ಯ

ಎಲ್ಲ ವರ್ಗದವರಿಗೂ ನೆರವು ಅಗತ್ಯ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

08-April-24

ಕೊರೊನಾ ತಡೆಗೆ ಶ್ರಮಿಸಿ: ಪಾಟೀಲ

ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್‌ನ ಸೇವಿಂಗ್ಸ್ ಕೊಟ್ಟ ಬಾಲಕಿ

ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್‌ನ ಸೇವಿಂಗ್ಸ್ ಕೊಟ್ಟ ಬಾಲಕಿ