ಸೂರ್ಯಕಾಂತಿ ಎಣ್ಣೆಯ ಕೃತಕ ಅಭಾವ ಸೃಷ್ಟಿಯಾಗದಿರಲಿ


Team Udayavani, Mar 9, 2022, 6:00 AM IST

ಸೂರ್ಯಕಾಂತಿ ಎಣ್ಣೆಯ ಕೃತಕ ಅಭಾವ ಸೃಷ್ಟಿಯಾಗದಿರಲಿ

ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣದಿಂದಾಗಿ ಭಾರತ ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಎಣ್ಣೆಯ ಬೆಲೆ ಹೆಚ್ಚಾಗುವ ಎಲ್ಲ ಸಾಧ್ಯತೆಗಳು ಗೋಚರವಾಗಿವೆ. ಅದರಲ್ಲೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತೀ ಬ್ಯಾರೆಲ್‌ಗೆ 125 ಡಾಲರ್‌ ಮುಟ್ಟಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಎಲ್ಲ ಸಾಧ್ಯತೆಗಳು ಗೋಚರವಾಗಿವೆ.

ಮಂಗಳವಾರ ಬೆಳಗ್ಗೆಯೇ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗಲಿದೆ ಎಂಬ ಆತಂಕ ಎಲ್ಲರಲ್ಲಿ ಇತ್ತು. ಇದಕ್ಕೆ ಕಾರಣ, ಕಳೆದ ಮೂರ್ನಾಲ್ಕು ದಿನಗಳಿಂದಲೂ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಹೀಗಾಗಿ ಕನಿಷ್ಠ 12 ರೂ. ಹೆಚ್ಚಳ ಮಾಡಲಾಗುತ್ತದೆ ಎಂಬ ಮಾತುಗಳೇ ಇದ್ದವು. ಆದರೆ ದಿಲ್ಲಿಯಲ್ಲಿ ಮಾತ್ರ ಸಿಎನ್‌ಜಿಯ ಬೆಲೆಯನ್ನು ಹೆಚ್ಚಿಸಲಾಗಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದರ ಹಿಂದೆ ಚುನಾವಣೆ ಮುಗಿದ ಮಾರನೇ ದಿನವೇ ಬೆಲೆ ಏರಿಕೆ ಮಾಡಿದರು ಎಂಬ ಟೀಕೆಗೂ ಗುರಿಯಾಗಬಾರದು ಎಂಬ ಕಾರಣಕ್ಕಾಗಿ ಬೆಲೆ ಹೆಚ್ಚಳದ ನಿರ್ಧಾರಕ್ಕೆ ಕೈಹಾಕಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ. ಜತೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತೈಲ ಆಮದಿಗೆ ಪರ್ಯಾಯ ಮಾರ್ಗ ಹುಡುಕಿಕೊಳ್ಳುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದಿರುವುದು ಒಂದಷ್ಟು ಸಮಾಧಾನಕರ ಸುದ್ದಿ.

ಪೆಟ್ರೋಲ್‌, ಡೀಸೆಲ್‌ನಂತೆಯೇ ಅಡುಗೆ ಎಣ್ಣೆ ಬೆಲೆಯೂ ಈಗಾಗಲೇ ಗಗನಮುಖಿಯಾಗಿದೆ. ಸಾಮಾನ್ಯವಾಗಿ ಭಾರತಕ್ಕೆ ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಆಮದಾಗುತ್ತದೆ. ಈಗ ಯುದ್ಧ ಶುರುವಾಗಿರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಸೂರ್ಯಕಾಂತಿ ಎಣ್ಣೆ ಬರುತ್ತಿಲ್ಲ. ಇಲ್ಲಿ ಬೇಡಿಕೆ ಹೆಚ್ಚಾಗಿದ್ದು,  ಇದಕ್ಕೆ ತಕ್ಕ ಹಾಗೆ ಪೂರೈಕೆಯಾಗುತ್ತಿಲ್ಲ. ಹೀಗಾಗಿಯೇ ಒಂದು ವಾರದ ಹಿಂದೆ 140ರ ಆಸುಪಾಸಿನಲ್ಲಿದ್ದ ಅಡುಗೆ ಎಣ್ಣೆ, ಈಗ 180 ರೂ.ಗಳ ಆಸುಪಾಸಿಗೆ ತಲುಪಿದೆ.

ಇದರ ಜತೆಗೆ ರಾಜ್ಯದ ಕೆಲವೆಡೆ ಒಬ್ಬರಿಗೆ 5 ಲೀ. ಸೂರ್ಯಕಾಂತಿ ಎಣ್ಣೆ ಎಂಬ ರೀತಿಯಲ್ಲಿ ವ್ಯಾಪಾರ ಮಾಡುತ್ತಿರುವ ವಿದ್ಯಮಾನಗಳೂ ನಡೆದಿವೆ. ಅಲ್ಲದೆ ಆನ್‌ಲೈನ್‌ ಮೂಲಕ ಸೂರ್ಯಕಾಂತಿ ಎಣ್ಣೆ ಖರೀದಿ ಸಾಧ್ಯವೇ ಆಗುತ್ತಿಲ್ಲ. ಬಹುತೇಕ ಕಡೆಗಳಲ್ಲಿ ದಾಸ್ಥಾನ‌ು ಇಲ್ಲ ಎಂಬ ಉತ್ತರಗಳೇ ಸಿಗುತ್ತಿವೆ. ಹೀಗಾಗಿ ಅಡುಗೆ ಎಣ್ಣೆ ಲಭ್ಯವಾಗದೆ ಜನರಲ್ಲಿ ಆತಂಕವೂ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು.

ಇಲ್ಲಿ ಬೇರೆ ರೀತಿಯ ಅನುಮಾನಗಳೂ ಉದ್ಭವವಾಗಿವೆ. ನಿಜಕ್ಕೂ ರಾಜ್ಯದಲ್ಲಿ ಸೂರ್ಯಕಾಂತಿ ಎಣ್ಣೆಯ ಅಭಾವ ಕಾಡುತ್ತಿದೆಯೇ ಎಂಬ ಸಂದೇಹಗಳಿವೆ. ಕೊರೊನಾ ಲಾಕ್‌ಡೌನ್‌ ಅವಧಿಯಲ್ಲಿ ಮಾಡಿದಂತೆ ಈಗ ಈ ಅಡುಗೆ ಎಣ್ಣೆಯನ್ನು ಮಾರುಕಟ್ಟೆಗೆ ಬಿಡದೆ, ಬೇರೆಡೆ ಸಂಗ್ರಹಿಸಿ ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಅವಕಾಶಗಳೂ ಇವೆ. ಅಲ್ಲದೆ ಬೇಕೆಂದೇ ಕೊರತೆ ಸೃಷ್ಟಿಸಿ, ಬೆಲೆ ಹೆಚ್ಚಳಕ್ಕೆ ಅನುವು ಮಾಡಿಕೊಟ್ಟಿರಬಹುದು. ಈ ಎಲ್ಲ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು, ರಾಜ್ಯ ಸರಕಾರ ಸೂರ್ಯಕಾಂತಿ ಎಣ್ಣೆಯನ್ನು ಮಾರಾಟ ಮಾಡುವ ಸಗಟುದಾರರ ಮೇಲೆ ಒಂದು ಕಣ್ಣಿಡಬೇಕು. ಸೂಕ್ತ ರೀತಿಯಲ್ಲಿ ನಿಗಾ ಇರಿಸಿ ಕೃತಕವಾಗಿ ಅಭಾವ ಸೃಷ್ಟಿಯಾಗುವುದು ಮತ್ತು ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಬೇಕು. ಆಗ ಈಗಾಗಲೇ ಕೊರೊನೋತ್ತರ ಕಷ್ಟದಲ್ಲಿರುವ ಜನರಿಗೆ ಒಂದಷ್ಟು ಸಮಾಧಾನವನ್ನಾದರೂ ನೀಡಿದಂತೆ ಆಗುತ್ತದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.