ಕಾರ್ಯಾಂಗ-ಶಾಸಕಾಂಗದ ಸಂಘರ್ಷದಂತಿದೆ, ಎಚ್ಚರವಹಿಸುವುದು ಅಗತ್ಯ


Team Udayavani, Mar 14, 2018, 9:05 AM IST

gatya.jpg

ಯಾವುದೇ ಒಂದು ನಿರ್ಧಾರ ಅಥವಾ ಆದೇಶವಿರಲಿ, ಅದರ ಹಿಂದೆ ಸದುದ್ದೇಶವಿದ್ದರೂ ಸೂಕ್ತ ಸಮರ್ಥನೆ ಕೊಡದಿದ್ದರೆ ಗುಮಾನಿ ಮೂಡುವುದು ಸಹಜ.

ಪೊಲೀಸ್‌ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯುತ್ತಿದೆ ಎಂಬ ಎಡಿಜಿಪಿ ಆರ್‌.ಪಿ.ಶರ್ಮಾ ಆರೋಪ ಹಾಗೂ ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ತಡೆ ನೀಡಿರುವ ವಿಚಾರ ಸರಕಾರಕ್ಕೆ ಮುಜುಗರ ತಂದಿದೆ. ಐಪಿಎಸ್‌ ಹಾಗೂ ಐಎಎಸ್‌ ಅಧಿಕಾರಿಗಳು ಸರ್ಕಾರದ ವರ್ಗಾವಣೆ ಕ್ರಮ ಹಾಗೂ ಸಚಿವರು ಸೇರಿದಂತೆ ಜನಪ್ರತಿನಿಧಿಗಳ ಹಸ್ತಕ್ಷೇಪದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿರುವುದು ಹಾಗೂ ಅಸಮಾಧಾನ ಹೊರಹಾಕುತ್ತಿರುವುದು ಒಂದು ರೀತಿಯಲ್ಲಿ ಕಾರ್ಯಾಂಗ ಹಾಗೂ ಶಾಸಕಾಂಗದ ನಡುವೆ ಸಂಘರ್ಷ ನಡೆಯುತ್ತಿದೆಯೇನೋ ಎಂಬಂತೆ ಭಾಸವಾಗುತ್ತಿದೆ. ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡುವುದು ವಾಡಿಕೆ. ಆದರೆ, ಇತ್ತೀಚೆಗೆ ಅದು ಕಾರಣಾಂತರಗಳಿಂದ ಆರು ತಿಂಗಳು, ಒಂದು ವರ್ಷಕ್ಕೆಲ್ಲಾ ವರ್ಗ ಆಗುತ್ತಿದೆ. ಸಚಿವರು ಹಾಗೂ ಜನಪ್ರತಿನಿಧಿಗಳ ಒತ್ತಡವೇ ಇದಕ್ಕೆ ಕಾರಣ ಎಂಬುದು ಅಧಿಕಾರಿಗಳ ಅಸಮಾಧಾನಕ್ಕೆ ಕಾರಣ.

ಎಡಿಜಿಪಿ ಆರ್‌.ಪಿ.ಶರ್ಮಾ ಇದೇ ವಿಚಾರ ಪ್ರಸ್ತಾಪಿಸಿ ರಾಜಕೀಯ ಹಸ್ತಕ್ಷೇಪದಿಂದ ಪೊಲೀಸ್‌ ವ್ಯವಸ್ಥೆಯೇ ಸರಿ ಇಲ್ಲ ಎಂಬ ಭಾವನೆ ಜನಸಾಮಾನ್ಯರಲ್ಲಿ ಇದೆ. ಬೆಂಗಳೂರು ನಗರಕ್ಕೆ ಕಳೆದ ಎರಡು ವರ್ಷಗಳಲ್ಲಿ ಇಬ್ಬರು ಪೊಲೀಸ್‌ ಆಯುಕ್ತರು ಬದಲಾಗಿರುವುದು, ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಆವರ ಮೇಲೆ ಹಲ್ಲೆ ನಡೆದಿರುವುದು, ರಶ್ಮಿ ಮಹೇಶ್‌ ಮೇಲಿನ ಹಲ್ಲೆ, ಶಿಖಾ ಅವರ ಮೇಲೆ ದುಂಡಾವರ್ತನೆ ತೋರಿದ ಪ್ರಕರಣಗಳನ್ನೂ ಪತ್ರದಲ್ಲಿ ತಿಳಿಸಿದ್ದಾರೆ. ಈ ಬೆಳವಣಿಗೆಗಳಿಂದಾಗಿ ಎಲ್ಲೋ ಒಂದು ಕಡೆ ಸರಕಾರದ ಕಾರ್ಯವೈಖರಿ ಬಗ್ಗೆ ಸಂಶಯ ಮೂಡುವಂತಾಗಿದೆ.

ಮತ್ತೂಂದೆಡೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮಹಾಮಸ್ತಕಾಭಿಷೇಕ ಸಂದರ್ಭದಲ್ಲೇ ವರ್ಗಾವಣೆ ಮಾಡಲಾಗಿತ್ತು. ಅವರ ಜತೆ 12 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತಾದರೂ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ದೊಡ್ಡ ವಿವಾದವೂ ಆಯಿತು. ಮಹಾಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಅಕ್ರಮ ನಡೆಯುತ್ತಿತ್ತು. ಅದನ್ನು ತಡೆಯಲು ಮುಂದಾದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಯಿತು ಎಂಬ ಆರೋಪವೂ ಕೇಳಿ ಬಂದಿತು.

ಆಗ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ನಮ್ಮ ಅನುಮತಿ ಇಲ್ಲದೆ ವರ್ಗಾವಣೆ ಮಾಡುವಂತಿಲ್ಲ ಎಂಬ ಸಂದೇಶ ರವಾನಿಸಿತು. ಆಗ ಸುಮ್ಮನಾದ ಸರಕಾರ ನಂತರ ರೋಹಿಣಿ ಸಿಂಧೂರಿ ಸೇರಿ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿತು.

ರೋಹಿಣಿ ಸಿಂಧೂರಿ ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅನೂಪ್‌ಶೆಟ್ಟಿ ಅವರು ಸರಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿ ತಡೆ ತಂದಿದ್ದಾರೆ. ಇದು ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ. ಇದರ ನಡುವೆ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರ ಮೇಲೆ ಹತ್ಯಾ ಪ್ರಯತ್ನ ಪ್ರಕರಣ ಕಾನೂನು ಸುವ್ಯವಸ್ಥೆ, ಭದ್ರತೆ ಬಗ್ಗೆಯೇ ಶಂಕೆ ಉಂಟುಮಾಡುವಂತಾಯಿತು. ಆ ಬಗ್ಗೆಯೂ ದೇಶಾದ್ಯಂತ ಟೀಕೆಗಳು ಕೇಳಿ ಬಂದವು. ಈ ಎಲ್ಲ ವಿಚಾರಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ಚುನಾವಣೆ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಇದರ ಪರಿಣಾಮ ಬೇರೆ ರೀತಿ ಆಗುವ ಸಾಧ್ಯತೆಯೂ ಇಲ್ಲದಿಲ್ಲ. ಸರಕಾರದ ಕ್ರಮವನ್ನು ಮುಖ್ಯಮಂತ್ರಿಯವರು ಬಿಟ್ಟರೆ ಬೇರೆ ಯಾವ ಸಚಿವರೂ ಸಮರ್ಥಿಸಿಕೊಳ್ಳುತ್ತಿಲ್ಲ ಎಂಬುದು ಗಮನಿಸಿದ ಬೇಕಾದ ಸಂಗತಿ. ಯಾವುದೇ ಒಂದು ನಿರ್ಧಾರ ಅಥವಾ ಆದೇಶ ಯಾವುದೇ ಹಂತದಲ್ಲಿ ಆದರೂ ಅದಕ್ಕೆ ಸೂಕ್ತ ಸಮರ್ಥನೆ ಸರಿಯಾದ ಹಂತದಲ್ಲಿ ಕೊಡದಿದ್ದರೆ ಅದರ ಹಿಂದೆ ಸದುದ್ದೇಶ ಅಥವಾ ಸಹಜವಾಗಿದ್ದರೂ ಗುಮಾನಿ ಮೂಡುವುದು ಸಹಜ. ಹೀಗಾಗಿ, ಒಂದು ಘಟನೆ ಪಾಠ ಕಲಿಸಿದ ನಂತರ ಮತ್ತೆ ಅಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವುದು ಅಗತ್ಯ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.