ಮಂಕಿಪಾಕ್ಸ್‌ ಹರಡುವಿಕೆಯ ಬಗ್ಗೆ ಇರಲಿ ಎಚ್ಚರ


Team Udayavani, Jul 26, 2022, 6:00 AM IST

ಮಂಕಿಪಾಕ್ಸ್‌ ಹರಡುವಿಕೆಯ ಬಗ್ಗೆ ಇರಲಿ ಎಚ್ಚರ

ಜಗತ್ತಿನ ಸುಮಾರು 75 ದೇಶಗಳಲ್ಲಿ 16 ಸಾವಿರ ಮಂಕಿಪಾಕ್ಸ್‌ ಪ್ರಕರಣ ಗಳು ಪತ್ತೆಯಾಗಿದ್ದು, ಪ್ರಪಂಚದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಇದೊಂದು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿದೆ. ಹೀಗಾಗಿ ಎಲ್ಲರಲ್ಲೂ ಈ ಬಗ್ಗೆ ಆತಂಕ ಮೂಡಿರುವುದು ಸಹಜವೇ ಆಗಿದೆ.

ಸದ್ಯ ಭಾರತದಲ್ಲಿ ನಾಲ್ಕೇ ನಾಲ್ಕು ಪ್ರಕರಣಗಳು ವರದಿಯಾಗಿದ್ದರೂ, ಈ ರೋಗದ ಬಗ್ಗೆ ಯಾರೂ ಅಲ್ಲಗಳೆಯುವಂತಿಲ್ಲ. ಈ ನಾಲ್ಕರಲ್ಲಿ ಮೂರು ಕೇರಳದಲ್ಲಿ, ಮತ್ತೂಂದು ದಿಲ್ಲಿಯಲ್ಲಿ ಪತ್ತೆಯಾಗಿದೆ. ತೆಲಂಗಾಣದಲ್ಲಿ ಒಬ್ಬರಲ್ಲಿ ಮಂಕಿಪಾಕ್ಸ್‌ ಲಕ್ಷಣಗಳು ಕಂಡು ಬಂದಿವೆ. ದಿಲ್ಲಿ ಪ್ರಕರಣದಲ್ಲಿ ವಿದೇಶ ಪ್ರಯಾಣದ ಯಾವುದೇ ಹಿನ್ನೆಲೆ ಇಲ್ಲದಿದ್ದರೂ ಸೋಂಕು ದೃಢಪಟ್ಟಿರುವುದು ವಿಚಿತ್ರವೆನಿಸಿದೆ. ಹೀಗಾಗಿ ಎಲ್ಲರೂ ಎಚ್ಚರದಿಂದ ಇರಲೇಬೇಕಾದದ್ದು ಅತ್ಯಗತ್ಯವಾಗಿದೆ.

ರವಿವಾರವಷ್ಟೇ ಕೆಲವು ಆರೋಗ್ಯ ತಜ್ಞರು ಈ ಬಗ್ಗೆ ಮಾತನಾಡಿದ್ದು, ಮಂಕಿಪಾಕ್ಸ್‌ ಕುರಿತ ಕೆಲವೊಂದು ಎಚ್ಚರಿಕೆ ಸಂದೇಶಗಳನ್ನು ನೀಡಿದ್ದಾರೆ. ಕೊರೊನಾ ವಿಚಾರದಲ್ಲಿ ನಾವು ಹೇಗೆ ಮುನ್ನೆಚ್ಚರಿಕೆ ವಹಿಸಿದ್ದೇವೆಯೋ ಅದೇ ರೀತಿ ಇದರಲ್ಲೂ ಮುನ್ನೆಚ್ಚರಿಕೆಯ ವಿಧಾನಗಳನ್ನು ಅನುಸರಿಸಬೇಕು ಎಂದು ಹೇಳಿ¨ªಾರೆ. ಅಂದರೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಪಾಲಿಸಬೇಕು ಎಂದಿದ್ದಾರೆ. ಒಂದು ರೀತಿಯಲ್ಲಿ ಇದೊಂದು ಉತ್ತಮವಾದ ಕ್ರಮವೇ ಆಗಿದೆ. ಅತ್ತ ಕೇಂದ್ರ ಸರಕಾರವೂ ರವಿವಾರ ತುರ್ತು ಸಭೆಗಳನ್ನು ನಡೆಸಿ, ಮಂಕಿಪಾಕ್ಸ್‌ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದೆ. ಈ ಎಲ್ಲ ವಿದ್ಯಮಾನಗಳು ಮಂಕಿಪಾಕ್ಸ್‌ ಕುರಿತಂತೆ ನಿರ್ಲಕ್ಷ್ಯ ಸಲ್ಲ ಎಂಬುದನ್ನು ಒತ್ತಿ ಹೇಳಿವೆ.

ಇನ್ನು, ರಾಜ್ಯದಲ್ಲಿಯೂ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ| ಕೆ. ಸುಧಾಕರ್‌ ಅವರು ಮಂಕಿಪಾಕ್ಸ್‌ ಕುರಿತಂತೆ ಮಾತನಾಡಿದ್ದು, ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ. ಅಲ್ಲದೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮಂಕಿಪಾಕ್ಸ್‌ನ ಲಕ್ಷಣಗಳು ಕಂಡು ಬಂದರೆ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಸದ್ಯ ರಾಜ್ಯ ಸರಕಾರವೂ ಮಂಕಿಪಾಕ್ಸ್‌ ಬಗ್ಗೆ ಮುನ್ನೆಚ್ಚರಿಕ ಕ್ರಮ ತೆಗೆದುಕೊಂಡಿರುವುದು ಕಂಡುಬರುತ್ತಿದೆ.

ಇದೆಲ್ಲದರ ನಡುವೆ ಈಗ ಸಾರ್ವಜನಿಕರು ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ಕೊರೊನಾ ರೀತಿಯಲ್ಲೇ ಮಂಕಿಪಾಕ್ಸ್‌ನ ಲಕ್ಷಣಗಳೂ ಇವೆ. ಚರ್ಮದ ಮೇಲೆ ತುರಿಕೆ ಕೊರೊನಾ ಹೊರತಾದ ಲಕ್ಷಣ. ಜತೆಗೆ ಜ್ವರ, ಸ್ನಾಯುಸೆಳೆತ, ಅತಿಯಾದ ತಲೆನೋವು, ಗಂಟಲು ನೋವು, ಕೆಮ್ಮು, ಬಲಹೀನತೆ, ಬೆನ್ನು ನೋವು ಕೂಡ ಕಾಣಿಸಿಕೊಳ್ಳುತ್ತದೆ. ಇಂಥ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಹಾಗೆಯೇ ಮನೆಯವರಿಂದ ಪ್ರತ್ಯೇಕವಾಗಿ ಇರುವುದು ಒಳ್ಳೆಯದು.

ಸದ್ಯ ದೇಶದಲ್ಲಿ ಕೊರೊನಾವೂ ಇರುವುದರಿಂದ, ಮಂಕಿಪಾಕ್ಸ್‌ ಮತ್ತು ಕೊರೊನಾ ನಡುವೆ ಕೊಂಚ ಗೊಂದಲವೂ ಉಂಟಾಗಬಹುದು. ಈ ವಿಚಾರದಲ್ಲಿ ಆರೋಗ್ಯ ಇಲಾಖೆ ಗಮನಹರಿಸಬೇಕು. ಜ್ವರ, ಮೈಕೈ ನೋವು ಎಂದು ಆಸ್ಪತ್ರೆಗೆ ಹೋದವರ ಮೇಲೆ ಅನುಮಾನ ಪಡುವ ಸಂಗತಿಯೂ ಆಗಬಾರದು. ಇಂಥ ಸಂದರ್ಭದಲ್ಲಿ ಜನರಲ್ಲಿ ಹೆದರಿಕೆ ಮೂಡಿಸುವುದಕ್ಕಿಂತ ಹೆಚ್ಚಾಗಿ ಅವರಲ್ಲಿ ಧೈರ್ಯ ತುಂಬುವ ಕೆಲಸವೇ ಹೆಚ್ಚಾಗಬೇಕು.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.