ಕೋವಿಡ್, ಪ್ರವಾಹವೇ ಹೊಸ ಸಂಪುಟದ ಮುಂದಿರುವ ಸವಾಲು

Team Udayavani, Aug 5, 2021, 6:00 AM IST

ಕೋವಿಡ್, ಪ್ರವಾಹವೇ ಹೊಸ ಸಂಪುಟದ ಮುಂದಿರುವ ಸವಾಲು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ರಚನೆಯಾಗಿದೆ. ಮುಖ್ಯಮಂತ್ರಿ ಸೇರಿ 30 ಮಂದಿ ಸಂಪುಟ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಳ ಜಾಣ್ಮೆ ಹಾಗೂ ಸೂಕ್ಷ್ಮತೆ ಅರಿತು ಮೂಲ ಬಿಜೆಪಿಯವರು, ವಲಸಿಗರು, ಸಂಘ ಪರಿವಾರದ ಶಿಫಾರಸು ಹೊಂದಿರುವವರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೆಂಬಲಿಗರು ಹೀಗೆ ಎಲ್ಲರನ್ನೂ ಸಂಭಾಳಿಸಿಕೊಂಡು ಹೋಗುವ ಸದ್ಯದ ಪರಿಸ್ಥಿತಿಯಲ್ಲಿ ಸಮತೋಲಿತ ಸಂಪುಟವನ್ನೇ ರಚಿಸಿದ್ದಾರೆ. ಹೀಗಾಗಿ, ಮೊದಲ ಪರೀಕ್ಷೆಯಲ್ಲಿ ಉತ್ತೀರ್ಣರಾದಂತೆ. ಇನ್ನು, ಖಾತೆಗಳ ಹಂಚಿಕೆಯಲ್ಲಿ  ಹೆಚ್ಚು  ಆಕ್ಷೇಪಗಳಿಲ್ಲದಂತೆ ನೋಡಿಕೊಂಡರೆ ಮತ್ತಷ್ಟು ನಿರಾಳರಾಗುತ್ತಾರೆ.

ನಾಯಕತ್ವ ಬದಲಾವಣೆ, ಹೊಸ ಮುಖ್ಯಮಂತ್ರಿ ಆಯ್ಕೆ, ಹೊಸ ಸಚಿವ ಸಂಪುಟ ರಚನೆ ಹೀಗೆ ಕಳೆದ ಹತ್ತು ದಿನಗಳಿಂದ ರಾಜ್ಯದ ಆಡಳಿತ ಯಂತ್ರ ಒಂದು ರೀತಿಯಲ್ಲಿ ಸ್ಥಗಿತಗೊಂಡಂತಾಗಿತ್ತು. ಕೊರೊನಾ ಮೂರನೇ ಅಲೆ ಭೀತಿ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಈಗಿರುವ ಮೊದಲ ಸವಾಲು. ಇದನ್ನು ಸಮರ್ಥವಾಗಿ ಎದುರಿಸಬೇಕಾಗಿದೆ.

ಮುಖ್ಯಮಂತ್ರಿಯವರು ನೂತನ ಸಚಿವ ಸಂಪುಟದ ಸಭೆ ನಡೆಸಿ ಗುರುವಾರದಿಂದಲೇ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡು ಮೂರನೇ ಅಲೆ ನಿಯಂತ್ರಣ ಹಾಗೂ ಪ್ರವಾಹ ಸಂತ್ರಸ್ತರ ನೆರವು ಕಾರ್ಯದಲ್ಲಿ ತೊಡಗಲಿದ್ದಾರೆ ಎಂದು ಹೇಳಿರುವುದು ಸಮಾಧಾನಕರ. ನೂತನ ಸಚಿವರಿಗೂ ನಿಮ್ಮ ನಿಮ್ಮ ಜಿಲ್ಲೆಗಳಿಗೆ ತೆರಳಿ ಪ್ರಗತಿ ಪರಿಶೀಲನೆ ನಡೆಸಿ ಎಂದು ತಾಕೀತು ಸಹ ಮಾಡಿದ್ದಾರೆ. ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಖಾತೆ ಹಂಚಿಕೆಯಾಗದೆ ಪ್ರವಾಸ ಮಾಡಿದರೂ ಕಷ್ಟ. ಆದರೂ ತಮ್ಮ ತಮ್ಮ ಜಿಲ್ಲೆಗಳಲ್ಲಿ ಹೋಗಿ ಅಧಿಕಾರಿಗಳ ಸಭೆ ನಡೆಸಿದರೆ ಸ್ವಲ್ಪ ಮಟ್ಟಿಗಾದರೂ ಜನರ ಸಮಸ್ಯೆಗೆ ಪರಿಹಾರ ಸಿಗಲಿದೆ.  ಬದಲಾದ ರಾಜಕೀಯ ವಿದ್ಯಮಾನದಲ್ಲಿ ಹೊಸ ಸಿಎಂ ನೇತೃತ್ವದ ಸರಕಾರದ ಮೇಲೂ ಜನರ ನಿರೀಕ್ಷೆ ಸಾಕಷ್ಟಿದೆ. ಕೊರೊನಾದಿಂದಾಗಿ ಆರ್ಥಿಕ ಪರಿಸ್ಥಿತಿ ಸಂಕಷ್ಟವಾಗಿದ್ದು ಅದನ್ನು ಸರಿದಾರಿಗೆ ತರಬೇಕಾಗಿದೆ.

ಕೇಂದ್ರ ಸರಕಾರದ ಪುರಸ್ಕೃತ ಯೋಜನೆಗಳಿಂದ ರಾಜ್ಯಕ್ಕೆ ಬರಬೇಕಾದ ಅನುದಾನದ ಪಾಲು ಪಡೆಯಬೇಕು. ಜಿಎಸ್‌ಟಿ ಪರಿಹಾರ ಪಡೆಯಬೇಕು. ಮೇಕೆದಾಟು ಯೋಜನೆ ವಿಚಾರದಲ್ಲಿ ಖಡಕ್‌ ನಿಲುವು ತಾಳಬೇಕು. ಇದೆಲ್ಲವೂ ಹೊಸ ಸಂಪುಟದ ಜವಾಬ್ದಾರಿಯಾಗಿದೆ.

ಸಂಪುಟದಲ್ಲಿ ಸ್ಥಾನ ಸಿಗದವರ ಆಕ್ರೋಶ ಅಸಮಾಧಾನ ಸಹಜ. ಸಂಪುಟದಲ್ಲಿ ಇನ್ನೂ ನಾಲ್ಕು ಸ್ಥಾನ ಖಾಲಿ ಇದ್ದು ಅದು ನಿಮಗೇ ಎಂದು ಸಮಾಧಾನ ಹೇಳಬಹುದು. ಆದರೆ, ಅಸಮಾಧಾನ ಸ್ಫೋಟವಾಗದಂತೆ ನೋಡಿಕೊಳ್ಳುವಲ್ಲಿ ಕೇಂದ್ರದ ವರಿಷ್ಠರು, ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಸಂಘ ಪರಿವಾರದವರ ಹೊಣೆಗಾರಿಕೆಯೂ ಇದೆ. ಯಾಕೆಂದರೆ ಮುಖ್ಯಮಂತ್ರಿಯವರೇ ಹೇಳಿದಂತೆ ಕೇಂದ್ರದ ವರಿಷ್ಠರದೇ ಅಂತಿಮ ತೀರ್ಮಾನ. ಎಲ್ಲವನ್ನೂ ಅಳೆದು ತೂಗಿ ಸಾಮಾಜಿಕ ನ್ಯಾಯ, ಜಾತಿವಾರು, ಪ್ರಾದೇಶಿಕವಾರು, ಜಿಲ್ಲಾವಾರು ಅನ್ಯಾಯ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೂ ಅಸಮಾಧಾನಿತರಿಗೆ ಸಮಾಧಾನಪಡಿಸುವ ಕೆಲಸವೂ ಸುಲಭದ್ದಲ್ಲ. ಆದರೆ ಅದೇ ದೊಡ್ಡ ತಲೆನೋವಾಗಿ ಪರಿಣಮಿಸಬಾರದು. ಇದೇ ಕಾರಣಕ್ಕಾಗಿ ಮತ್ತೆ ಆಡಳಿತಕ್ಕೆ ಅಡ್ಡಿಯುಂಟಾಗಬಾರದು.

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.