ಏರ್‌ ಇಂಡಿಯಾಗೆ ದಂಡ: ಡಿಜಿಸಿಎಯಿಂದ ಸಮುಚಿತ ಕ್ರಮ

Team Udayavani, Jan 21, 2023, 6:00 AM IST

ಏರ್‌ ಇಂಡಿಯಾಗೆ ದಂಡ: ಡಿಜಿಸಿಎಯಿಂದ ಸಮುಚಿತ ಕ್ರಮ

ವಿಮಾನ ಸಂಚಾರದ ವೇಳೆ ಮಹಿಳಾ ಸಹಯಾನಿಯ ಮೇಲೆ ಪುರುಷ ಯಾನಿಯೋರ್ವ ಮೂತ್ರ ವಿಸರ್ಜನೆ ಮಾಡಿದ ಪ್ರಕರಣದ ಸಮಗ್ರ ತನಿಖೆ ನಡೆಸಿದ ಬಳಿಕ ಭಾರತೀಯ ವಿಮಾನಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ)ವು ಏರ್‌ ಇಂಡಿಯಾಗೆ 30 ಲಕ್ಷ ರೂ. ಮತ್ತು ಕರ್ತವ್ಯ ಪಾಲನೆಯಲ್ಲಿ ವಿಫ‌ಲರಾದ ಏರ್‌ ಇಂಡಿಯಾ ವಿಮಾನ ಸೇವಾ ನಿರ್ದೇಶಕರಿಗೆ 3 ಲಕ್ಷ ರೂ.ಗಳ ದಂಡವನ್ನು ವಿಧಿಸಿದೆ.

ಘಟನೆ ನಡೆದ ವಿಮಾನದ ಪೈಲಟ್‌ ಇನ್‌ ಕಮಾಂಡ್‌ ಅವರ ಲೈಸನ್ಸ್‌ ಅನ್ನು ಮೂರು ತಿಂಗಳ ಅವಧಿಗೆ ಅಮಾನತು ಗೊಳಿಸಿ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಸಿಎ ಇದೇ ಮೊದಲ ಬಾರಿಗೆ ವಿಮಾನಯಾನ ಕಂಪೆನಿಗೆ ದಂಡವನ್ನು ವಿಧಿಸುವಂತಹ ದಿಟ್ಟ ಮತ್ತು ಅತ್ಯಂತ ಸಮುಚಿತ ನಿರ್ಧಾರ ಕೈಗೊಂಡಿದೆ.

ವಿಮಾನ ಯಾನದ ವೇಳೆ ಸುರಕ್ಷತೆಯ ದೃಷ್ಟಿಯಿಂದ ಸಿಬಂದಿ ಮತ್ತು ಯಾನಿಗಳಿಗೆ ಸಂಬಂಧಪಟ್ಟಂತೆ ಕಟ್ಟುನಿಟ್ಟಿನ ನಿಯಮಾವಳಿ ಗಳನ್ನು ಅನುಸರಿಸುತ್ತ ಬರಲಾಗಿದ್ದು ಇವುಗಳ ಪಾಲನೆಯಲ್ಲಿ ಕೊಂಚ ಲೋಪವಾದರೂ ಅದನ್ನು ಗಂಭೀರವಾಗಿ ಪರಿಗಣಿಸುತ್ತ ಬರಲಾಗಿದೆ. ಅಷ್ಟು ಮಾತ್ರವಲ್ಲದೆ ವಿಮಾನಯಾನದ ವೇಳೆ ಯಾವುದೇ ಪ್ರಯಾಣಿಕ ಅನುಚಿತ ವರ್ತನೆ ತೋರಿದ್ದೇ ಆದಲ್ಲಿ ದಂಡ, ವಿಮಾನ ಪ್ರಯಾಣಕ್ಕೆ ನಿರ್ಬಂಧ, ಜೈಲು ಶಿಕ್ಷೆಯಂಥ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇದೇ ವೇಳೆ ವಿಮಾನದ ಸಿಬಂದಿಯಿಂದ ಇಂಥ ಲೋಪ ಅಥವಾ ಪ್ರಮಾದಗಳು ನಡೆದರೂ ಅವರ ವಿರುದ್ಧವೂ ನಿಯಮಾವಳಿಗಳಿಗ ನುಸಾರವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.

ಇವೆಲ್ಲದರ ಹೊರತಾಗಿಯೂ ಪ್ರಕರಣ ನಡೆದು ಎರಡು ತಿಂಗಳುಗಳಾದರೂ ಏರ್‌ ಇಂಡಿಯಾ ಡಿಜಿಸಿಎಗೆ ವರದಿ ನೀಡದಿರುವುದು ಮತ್ತು ತಪ್ಪಿತಸ್ಥ ಯಾನಿಯ ವಿರುದ್ಧ ಕ್ರಮ ಜರಗಿಸದೇ ಇದ್ದುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು ಮಾತ್ರವಲ್ಲದೆ ಭಾರತೀಯ ವಿಮಾನಯಾನ ಕಂಪನಿಗಳು ನೀಡುತ್ತಿರುವ ಸೇವೆಗೆ ಮಸಿ ಬಳಿದಂತಾಗಿತ್ತು. ಘಟನೆ ನಡೆದ ವಿಮಾನದ ಪೈಲಟ್‌, ಕಂಪೆನಿಯ ಸೇವಾ ನಿರ್ದೇಶಕರು, ಸಿಬಂದಿ ಮತ್ತು ಸಹಯಾನಿಯ ಮೇಲೆ ಮೂತ್ರ ಮಾಡಿದ ಆರೋಪಿಯ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತ್ತು. ಅದರಂತೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಡಿಜಿಸಿಎ, ಏರ್‌ ಇಂಡಿಯಾದಿಂದ ಘಟನೆಯ ಸಮಗ್ರ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿದ ಬಳಿಕ ಕಂಪೆನಿಗೆ ದಂಡ ವಿಧಿಸುವ ನಿರ್ಧಾರ ಕೈಗೊಂಡಿದೆ.

ವಿಮಾನಯಾನದ ಸಂದರ್ಭದಲ್ಲಿ ಯಾನಿಗಳ ಅನುಚಿತ ವರ್ತನೆ, ನಿಯಮಾವಳಿಗಳ ಉಲ್ಲಂಘನೆ, ಸಿಬಂದಿಯಿಂದ ಕರ್ತವ್ಯಲೋಪ ಮತ್ತು ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಸಂಬಂಧಪಟ್ಟ ತನಿಖಾ ಸಂಸ್ಥೆಗಳಿಗೆ ಈ ಬಗ್ಗೆ ಮಾಹಿತಿ ನೀಡದೆ ಗೌಪ್ಯವಾಗಿರಿಸುವಂಥ ಪ್ರಕರಣಗಳು ಪದೇ ಪದೆ ನಡೆಯುತ್ತಿವೆ. ಇಂತಹ ಘಟನಾವಳಿಗಳು ಹೆಚ್ಚುತ್ತಿರುವ ಬೆನ್ನಲ್ಲೇ ಡಿಜಿಸಿಎ ಏರ್‌ ಇಂಡಿಯಾ ಕಂಪೆನಿ ಮತ್ತದರ ಸೇವಾ ನಿರ್ದೇಶಕರಿಗೆ ದಂಡ ವಿಧಿಸುವ ನಿರ್ಧಾರ ಕೈಗೊಂಡಿರುವುದು ಉಳಿದ ವಿಮಾನಯಾನ ಸಂಸ್ಥೆಗಳು ಮತ್ತು ಕಂಪೆನಿಗಳಿಗೆ ಎಚ್ಚರಿಕೆಯ ಘಂಟೆಯಾಗಿದೆ. ಇನ್ನಾದರೂ ವಿಮಾನಯಾನ ಕಂಪೆನಿಗಳು ಯಾನಿಗಳ ಸುರಕ್ಷೆಗೆ ಮೊದಲ ಆದ್ಯತೆ ನೀಡುವುದರ ಜತೆಯಲ್ಲಿ ನಿಯಮಾವಳಿಗಳಿಗ ನುಸಾರವಾಗಿ ಯಾನಿಗಳಿಗೆ ಸೇವೆ ನೀಡಲು ಕಟಿಬದ್ಧವಾಗಬೇಕು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.