ಪೆಟ್ರೋಲ್‌, ಡೀಸೆಲ್‌ ತೆರಿಗೆ ಇಳಿಕೆ; ಜನರಿಗೆ ದೀಪಾವಳಿ ಕೊಡುಗೆ

Team Udayavani, Nov 4, 2021, 6:00 AM IST

ಪೆಟ್ರೋಲ್‌, ಡೀಸೆಲ್‌ ತೆರಿಗೆ ಇಳಿಕೆ; ಜನರಿಗೆ ದೀಪಾವಳಿ ಕೊಡುಗೆ

ದೀಪಾವಳಿ ಕೊಡುಗೆ ಎಂಬಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳು, ಗುರುವಾರದಿಂದಲೇ ಅನ್ವಯವಾಗುವಂತೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿವೆ. ಇದರಿಂದಾಗಿ ಪ್ರತಿ ಲೀ. ಪೆಟ್ರೋಲ್‌ ಬೆಲೆ 12 ರೂ. ಮತ್ತು ಡೀಸೆಲ್‌ ಬೆಲೆ 17 ರೂ.ಗಳಷ್ಟು ಕಡಿಮೆಯಾಗಲಿದೆ. ಬೆಲೆ ಏರಿಕೆ ಮತ್ತು ಹಣದುಬ್ಬರದ ಮಧ್ಯೆಹಬ್ಬ ಆಚರಿಸುತ್ತಿದ್ದ ಜನರಿಗೆ ಸರಕಾರಗಳು ಈ ಮೂಲಕ ಕೊಂಚ
ನಿರಾಳತೆ ಒದಗಿಸಿದೆ.

ಆದರೆ ಇತ್ತೀಚೆಗಷ್ಟೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಒಮ್ಮೆಗೇ 266 ರೂ. ಗಳಷ್ಟು ಹೆಚ್ಚಿಸಲಾಗಿದೆ. ಸಮಾಧಾನ ಸಂಗತಿ ಎಂದರೆ ಗೃಹ ಬಳಕೆಯ 14 ಕೆ.ಜಿ. ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನವೆಂಬರ್‌ 1ರಿಂದಲೇ ದೇಶಾದ್ಯಂತ 19 ಕೆ.ಜಿ. ತೂಕದ ವಾಣಿಜ್ಯ ಸಿಲಿಂಡರ್‌ ಬೆಲೆ 2,000 ರೂ.ದಾಟಿದೆ. ಇನ್ನು ಗೃಹ ಬಳಕೆಯ ಸಿಲಿಂಡರ್‌ ಬೆಲೆ 14 ಕೆ.ಜಿ.ಗೆ 900 ರೂ. ದಾಟಿದೆ. ಸದ್ಯ ಬೆಂಗಳೂರಿನಲ್ಲಿ ಗೃಹ ಬಳಕೆ ಸಿಲಿಂಡರ್‌ ಬೆಲೆ 902.50 ರೂ. ಗಳಷ್ಟಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹೆಚ್ಚಳವಾಗಿರುವಂತೆಯೇ ಹಣದುಬ್ಬರವೂ ಹೆಚ್ಚಾಗುತ್ತಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ಗೆ ಹೊಂದಿಕೊಂಡ ಉದ್ಯಮಗಳಲ್ಲಿ ಉತ್ಪಾದನ ವೆಚ್ಚವೂ ಹೆಚ್ಚಾಗುತ್ತಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ವಸ್ತುಗಳು, ಸಾರಿಗೆ ದರವೂ ಹೆಚ್ಚಾಗುವ ಆತಂಕವಿದೆ. ಆದರೆ ಈಗ ಕೊಂಚ ಬೆಲೆ ಇಳಿಕೆ ಮಾಡಿರುವುದರಿಂದ ಈ ಕ್ಷೇತ್ರಕ್ಕೆ ಒಂದಷ್ಟು ರಿಲೀಫ್ ಸಿಗಬಹುದು. ಆದರೆ ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯನ್ನು ಒಮ್ಮೆಲೇ 266 ರೂ. ಗಳಷ್ಟು ಏರಿಕೆ ಮಾಡಿರುವುದು ಸಣ್ಣಪುಟ್ಟ ಮತ್ತು ಮಧ್ಯಮ ಪ್ರಮಾಣದ ಹೊಟೇಲ್‌ಗ‌ಳನ್ನು ಇಟ್ಟುಕೊಂಡಿರುವವರಿಗೆ ದುಬಾರಿ ಎನಿಸಿದೆ.

ಈ ಹೊಟೇಲ್‌ಗಳು ತಮ್ಮ ಅಡುಗೆಗಾಗಿ ನೆಚ್ಚಿಕೊಂಡಿರುವುದು ಈ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ಗಳನ್ನೇ. ಈಗ ಒಂದು ಸಿಲಿಂಡರ್‌ಗೆ 266 ರೂ. ಹೆಚ್ಚುವರಿಯಾಗಿ ನೀಡಬೇಕು ಎಂದಾದರೆ ನಾವು ಈಗ ಕೊಡುತ್ತಿರುವ ದರಕ್ಕೆ ಊಟ, ತಿಂಡಿ, ಕಾಫಿ, ಟೀ ನೀಡಲು ಸಾಧ್ಯವೇ ಎಂಬುದು ಹೊಟೇಲ್‌ ಉದ್ಯಮಿಗಳ ಪ್ರಶ್ನೆಯಾಗಿದೆ.

ಮೊದಲೇ ಕೊರೊನಾ ವಿಚಾರದಲ್ಲಿ ಪೆಟ್ಟು ತಿಂದಿರುವ ನಮಗೆ ಹೊಟೇಲ್‌ ಉದ್ಯಮ ನಡೆಸುವುದೇ ಕಷ್ಟಕರವಾಗಿದೆ. ಇಂಥ ಸ್ಥಿತಿಯಲ್ಲಿ ತೈಲೋತ್ಪನ್ನಗಳು ಮತ್ತು ಸಿಲಿಂಡರ್‌ ಬೆಲೆ ಹೆಚ್ಚಳ ಮಾಡಿದರೆ ನಾವು ಏನು ಮಾಡಬೇಕು ಎಂದೂ ಪ್ರಶ್ನಿಸಿದ್ದಾರೆ. ವಿಷಯವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದು ಸತ್ಯದಂತೆಯೇ ಕಾಣಿಸುತ್ತದೆ. ಕಳೆದ ಎರಡು ವರ್ಷಗಳ ಕೊರೊನಾ ಪೆಟ್ಟಿನಿಂದ ಯಾರೊಬ್ಬರೂ ಚೇತರಿಸಿಕೊಂಡಿಲ್ಲ. ಇಂಥ ಹೊತ್ತಲ್ಲಿ ಹೊಟೇಲ್‌ ಉದ್ಯಮದಲ್ಲಿ ಹೆಚ್ಚಾಗಿ ಬಳಕೆಯಾಗುವ ವಸ್ತುಗಳ ಬೆಲೆ ಏರಿಕೆ ಮಾಡಿದರೆ ಇದನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಹೊಟೇಲ್‌ ಉದ್ಯಮಿಗಳು ಅನಿವಾರ್ಯವಾಗಿ ಊಟ-ತಿಂಡಿಯ ದರ ಹೆಚ್ಚಿಸುತ್ತಾರೆ.

ಈ ಮಧ್ಯೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಒಂದೇ ದಿನ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ್ದು ಉತ್ತಮ ನಿರ್ಧಾರ. ಬೆಲೆ ಏರಿಕೆಯಿಂದ ಈಗಾಗಲೇ ಬಳಲಿದ್ದ ಜನರಿಗೆ ಕೊಂಚ ಮಟ್ಟಿನ ನೆಮ್ಮದಿಯಾದರೂ ಸಿಕ್ಕಿದೆ. ಜತೆಗೆ ದೀಪಾವಳಿ ವೇಳೆಗೆ ಸಿಹಿ ಕೊಡುಗೆ ಕೊಟ್ಟಂತಾಗಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.