ವಿದ್ಯಾರ್ಥಿಗಳ ಮೇಲೆ ಬರೆ ಸಲ್ಲದು ಸ‌ರಕಾರ ಗಮನಹರಿಸಲಿ !

Team Udayavani, Dec 21, 2020, 5:58 AM IST

ವಿದ್ಯಾರ್ಥಿಗಳ ಮೇಲೆ ಬರೆ ಸಲ್ಲದು ಸ‌ರಕಾರ ಗಮನಹರಿಸಲಿ

ಸಾಂದರ್ಭಿಕ ಚಿತ್ರ

ರಾಜ್ಯದ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಂಬಂಧಿತ ಸಂಘಟನೆಗಳು ಒಂದರ ಮೇಲೊಂದು ಪ್ರತಿಭಟನೆ ಕರೆ ನೀಡುತ್ತಿವೆ. ಈಚೆಗಷ್ಟೇ ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌) ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದು, ಸರಕಾರದ ಭರವಸೆ ಮೇಲೆ ಪ್ರತಿಭಟನೆ ಹಿಂದೆಗೆದುಕೊಂಡಿತು. ಆದರೆ ಈಗ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ( ರುಪ್ಸಾ) ಪ್ರತಿಭಟನೆಗೆ ಮುಂದಾಗಿದೆ.

ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೆಲವನ್ನು ಬಗೆ ಹರಿಸುವ ಭರವಸೆಯನ್ನು ಸರಕಾರ ಈಗಾಗಲೇ ನೀಡಿದೆ. ಅದಾಗ್ಯೂ ಇತ್ತೀಚೆಗೆ ಖಾಸಗಿ ಶಾಲಾ ಶಿಕ್ಷಕರ ಮತ್ತು ಆಡಳಿತ ಮಂಡಳಿಗಳು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ನೀಡುವಂತೆ ಕ್ಯಾಮ್ಸ್‌ ಪ್ರತಿಭಟನೆ ನಡೆಸಿತ್ತು. ಮುಖ್ಯಮಂತ್ರಿಗಳ ಪರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್‌.ಅಶೋಕ್‌ ಪ್ರತಿ ಭಟನಾ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಸರಕಾರದಿಂದ ಆಗಬಹುದಾದ ಪರಿಹಾರ ಕಾರ್ಯದ ಬಗ್ಗೆಯೂ ಭರವಸೆ ನೀಡಿದ್ದರು. ಸರಕಾರ ಕಾಲಾವಕಾಶ ಕೋರಿದ್ದರಿಂದ ಕ್ಯಾಮ್ಸ್‌ ಪ್ರತಿಭಟನೆಯ ನಂತರ ಶೈಕ್ಷಣಿಕ ಚಟುವಟಿಕೆಯನ್ನು ಮುಂದುವರಿಸಿದೆ.

ಆದರೆ ಈಗ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ( ರುಪ್ಸಾ) ಕೆಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆನ್‌ಲೈನ್‌ ತರಗತಿಗಳನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ ಡಿಸೆಂಬರ್‌ ಅಂತ್ಯದೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಶಾಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ಸರಕಾರಕ್ಕೆ ನೀಡಿದೆ. ಇದರಿಂದ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮತ್ತು ಅವರ ಪಾಲಕ, ಪೋಷಕರಿಗೆ ಆತಂಕ ಸೃಷ್ಟಿಯಾಗಿದೆ. ಕೊರೊನಾ ಸಂದರ್ಭದಲ್ಲಿ ಆನ್‌ಲೈನ್‌ ತರಗತಿಯೂ ರದ್ದಾದರೆ ಮಕ್ಕಳ ಭವಿಷ್ಯ ಹೇಗೆ ಎಂಬ ಚಿಂತೆಯಲ್ಲಿ ಬಹುತೇಕ ಪಾಲಕರಿದ್ದಾರೆ.

ಸರಕಾರ ಖಾಸಗಿ ಶಾಲೆಗಳ ಬೇಡಿಕೆ ಈಡೇರಿಸುವ ಸಂಬಂಧ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕಿದೆ. ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಮತ್ತು ಅವರ ಪಾಲಕ, ಪೋಷಕರಲ್ಲಿ ಸೃಷ್ಟಿಯಾಗಿರುವ ಆತಂಕ ದೂರ ಮಾಡಬೇಕಿದೆ. ಮುಂದಿನ ತರಗತಿಯ ದಾಖಲಾತಿ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟತೆ ನೀಡಿದ್ದಾರೆ. ಮುಂದಿನ ತರಗತಿ ದಾಖಲಾತಿ ಕಡ್ಡಾಯ, ಹೀಗಾಗಿ ದಾಖಲಾತಿ ಮಾಡಲೇಬೇಕು. ಇದರ ಜತೆಗೆ ಪರೀಕ್ಷೆ, ಹಾಜರಾತಿ, ಕನಿಷ್ಠ ಮೌಲ್ಯ ಮಾಪನ, ಪಠ್ಯ ಕಡಿತದ ಗೊಂದಲ, ಕೊರೊನಾ ಸುರಕ್ಷತೆ ಸಂಬಂಧ ಖಾಸಗಿ ಶಾಲೆ ಗಳು ಕೇಳಿರುವ ಪ್ರತ್ಯೇಕ ಪ್ರಮಾಣಿತ ಕಾರ್ಯಚರಣ ವಿಧಾನ(ಎಸ್‌ಒಪಿ), ತರಗತಿ ಯಲ್ಲಿ ವಿದ್ಯಾರ್ಥಿಗೆ ಕೊರೊನಾ ಬಂದರೆ, ಜವಾಬ್ದಾರರು ಯಾರು ಎಂಬ ಆಡಳಿತ ಮಂಡಳಿಗಳ ಪ್ರಶ್ನೆಗೆ ಸರಕಾರ ಸ್ಪಷ್ಟ ಉತ್ತರ ನೀಡಬೇಕಿದೆ. ಹಾಗೆಯೇ ಅನುದಾನ ರಹಿತ ಶಾಲೆಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಸರಕಾರಿ ಮಟ್ಟದಲ್ಲಿ ಆಗಬಹುದಾದ ಪರಿಹಾರ ಕ್ರಮದ ಬಗ್ಗೆ, ಖಾಸಗಿ ಶಾಲಾ ಶಿಕ್ಷಕರು ಕೊರೊನಾದಿಂದ ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಹಾಗೂ ಇತರ ಸವಾಲುಗಳಿಗೆ ಸರಕಾರದಿಂದ ನೀಡಬಹುದಾದ ಪರಿಹಾರಗಳ ಬಗ್ಗೆಯೂ ಸ್ಪಷ್ಟತೆ ಶಾಲಾರಂಭದ ಒಳಗೆ ನೀಡಿದರೆ ಶಿಕ್ಷಕರಿಗೆ, ಮಕ್ಕಳಿಗೆ ಹಾಗೂ ಪಾಲಕ ಪೋಷಕರಿಗೆ ಹೆಚ್ಚು ಅನುಕೂಲವಾಗಲಿದೆ.

ಆದರೆ, ಶಾಲಾಡಳಿತ ಮಂಡಳಿಗಳು ಇದನ್ನೇ ನೆಪವಾಗಿಸಿಕೊಂಡು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬರೆ ಎಳೆಯವುದು ಸರ್ವಥಾ ಸರಿಯಲ್ಲ. ಸರಕಾರ ಮತ್ತು ಶಾಲೆಗಳ ನಡುವಿನ ಜಗ್ಗಾಟದಲ್ಲಿ ವಿದ್ಯಾರ್ಥಿಗಳು ಬಡವಾಗದಂತೆ ನೋಡಿಕೊ ಳ್ಳುವುದು ಆಡಳಿತ ಮಂಡಳಿಗಳ ಕರ್ತವ್ಯ ಕೂಡ ಹೌದು. ಮೊದಲಿಗೆ ಆಡಳಿತ ಮಂಡಳಿ ಸಂಘಗಳು ತಮ್ಮತಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗಿರಿಸಿ, ಸರಕಾರದ ಜತೆ ಮಾತುಕತೆ ಕುಳಿತು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಿ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.