ವಕ್ಫ್ ಮಂಡಳಿಯ ಪ್ರಸ್ತಾವ ಸ್ವಾಗತಾರ್ಹ ಇನ್ನಾದರೂ ಬಗೆಹರಿಯಲಿ ವಿವಾದ


Team Udayavani, Aug 9, 2017, 12:20 PM IST

09-STATE-2.jpg

3 ದಶಕದ ಬಳಿಕವಾದರೂ ವಿವಾದವನ್ನು ಶಾಂತಿ ಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಚಿಂತನಮಂಥನ ನಡೆಯುತ್ತಿದೆ ಎನ್ನುವುದೇ ಈ ಸಂದರ್ಭದಲ್ಲಿ ಮುಖ್ಯವಾಗುತ್ತದೆ.

ರಾಮ ಜನ್ಮಭೂಮಿಯಿಂದ ಸಾಕಷ್ಟು ದೂರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಬಾಬರಿ ಮಸೀದಿ ನಿರ್ಮಿಸಲು ನಮ್ಮ ಅಡ್ಡಿಯಿಲ್ಲ ಎಂದು ಉತ್ತರ ಪ್ರದೇಶದ ಶಿಯಾ ಸೆಂಟ್ರಲ್‌ ವಕ್ಫ್ ಮಂಡಳಿ ಹೇಳಿರುವುದು ದೇಶ ಕಂಡ ಅತ್ಯಂತ ಸೂಕ್ಷ್ಮ ಪ್ರಕರಣವೆಂದೇ ಅರಿಯಲ್ಪಡುವ ಅಯೋಧ್ಯೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸುಪ್ರೀಂ ಕೋರ್ಟಿಗೆ ಮಂಗಳವಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಕ್ಫ್ ಮಂಡಳಿ ಈ ಅಭಿಪ್ರಾಯ ತಿಳಿಸಿದೆ. ಬಾಬರಿ ಮಸೀದಿ ನಮ್ಮ ಆಸ್ತಿ ಎಂದು ಪ್ರತಿಪಾದಿಸುತ್ತಿದೆ ವಕ್ಫ್ ಮಂಡಳಿ.  ಹೀಗಾಗಿ ಈ ವಿವಾದವನ್ನು ಸೌಹಾರ್ದಯುತವಾಗಿ ಕೊನೆಗೊಳಿಸುವ ನಿಟ್ಟಿನಲ್ಲಿ ವಕ್ಫ್ ಮಂಡಳಿಯ ಈ ತೀರ್ಮಾನ  ಮುಖ್ಯವಾಗುತ್ತದೆ. ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಅಯೋಧ್ಯೆ ವಿವಾದದ ಕಕ್ಷಿದಾರರಲ್ಲಿ ವಕ್ಫ್ ಮಂಡಳಿಯೂ ಒಂದು.  ಕಕ್ಷಿದಾರರೇ ವಿವಾದ ಬಗೆಹರಿಸಲು ಮುಂದಾಗಿರುವುದರಿಂದ ಆಶಾಕಿರಣ ಕಾಣಿಸಿದೆ. ಕೇಸನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಲು ಆಗ್ರಹಿಸಿ ಅರ್ಜಿ ಸಲ್ಲಿಸಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಸೇರಿದಂತೆ ಹಲವು ನಾಯಕರು ವಕ್ಫ್ ಮಂಡಳಿಯ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಆದರೆ ಮುಸ್ಲಿಂ ಸಮುದಾಯದಿಂದ ಮಾತ್ರ ಇನ್ನೂ ಯಾವುದೇ ಪ್ರತಿಕ್ರಿಯೆ ಬರದಿರುವುದು ಗಮನಾರ್ಹ. ಏನೇ ಆದರೂ ಸರಿಸುಮಾರು ಮೂರು ದಶಕಗಳ ಬಳಿಕವಾದರೂ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಚಿಂತನಮಂಥನ ನಡೆಯುತ್ತಿದೆ ಎನ್ನುವುದೇ ಈ ಸಂದರ್ಭದಲ್ಲಿ ಮುಖ್ಯವಾಗುತ್ತದೆ.  

90ರ ದಶಕದ ಬಳಿಕ ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದ ಘಟನೆಯಿದು. 1992, ಡಿ.6ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನೆಲಸಮಗೊಳ್ಳುವುದರೊಂದಿಗೆ ದೇಶದ ರಾಜಕೀಯ ಚರಿತ್ರೆ ಮಾತ್ರ ಬದಲಾದದ್ದಲ್ಲ, ಜತೆಗೆ ಸಾಮಾಜಿಕ ಮತ್ತು ಧಾರ್ಮಿಕ ಅಂತರವೂ ಹೆಚ್ಚುತ್ತಾ ಹೋಯಿತು. ಈ ವಿವಾದವನ್ನು ಕೆದಕುವ ಮೂಲಕ ರಾಜಕೀಯ ಬಲವರ್ಧಿಸಿಕೊಳ್ಳುವ ಬಿಜೆಪಿಯ ಉದ್ದೇಶ ಈಗ ಈಡೇರಿದೆ. ವಿಶೇಷವೆಂದರೆ ಕೇಸರಿ ಪಕ್ಷವೂ ಅಧಿಕಾರಕ್ಕೇರಿದ ಬಳಿಕ ಮಾತುಕತೆಯೇ ಅಯೋಧ್ಯೆ ವಿವಾದಕ್ಕೆ ಪರಿಹಾರ ಎಂದು ಹೇಳುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೇ ಪದೇ ಪದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಯೋಧ್ಯೆಯಲ್ಲಿ ಮಂದಿರ ನಿರ್ಮಿಸುವ ಮಾತನ್ನು ಹೇಳುತ್ತಿದ್ದಾರೆ. ಅರ್ಥಾತ್‌ ರಾಮನ ಹೆಸರಲ್ಲಿ ಇನ್ನೊಂದು ರಕ್ತಪಾತ ಬೇಡ ಎನ್ನುವುದು ಎಲ್ಲರ ನಿಲುವೂ ಆಗಿದೆ. 

ಕಾನೂನಿನ ಮೂಲಕ ಅಯೋಧ್ಯೆ ವಿವಾದ ಬಗೆಹರಿಯುವುದಿಲ್ಲ ಎನ್ನುವುದು ಅಲಹಬಾದ್‌ ಹೈಕೋರ್ಟ್‌ ತೀರ್ಪಿನಿಂದಲೇ ಸ್ಪಷ್ಟವಾಗಿದೆ. 2.17 ಎಕ್ಕರೆ ವಿವಾದಗ್ರಸ್ತ ಭೂಮಿಯನ್ನು ರಾಮ ಲಲ್ಲಾ, ನಿರ್ಮೋಹಿ ಆಖಾಡ ಮತ್ತು ವಕ್ಫ್ ಮಂಡಳಿಗೆ ಸಮಾನವಾಗಿ ಹಂಚಿಕೊಟ್ಟ ತೀರ್ಪು ಯಾರಿಗೂ ಸಮ್ಮತವಾಗಿಲ್ಲ. ಎಲ್ಲ ಮೂರು ಕಕ್ಷಿಗಳು ತೀರ್ಪು ವಿರೋಧಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೇಗೆ ತೀರ್ಪು ನೀಡಿದರೂ ಯಾರಿಗಾದರೊಬ್ಬರಿಗೆ ನಷ್ಟವಾಗಲೇಬೇಕು. ಹೀಗಾಗಿ ಪ್ರಕರಣ ನ್ಯಾಯಾಲ ಯದ ಹೊರಗೆ ಬಗೆಹರಿಸಿಕೊಳ್ಳುವ ಕುರಿತು ಶ್ರೇಷ್ಠ ನ್ಯಾಯಾಧೀಶ ಖೇಹರ್‌ ಚಿಂತಿಸಿದ್ದಾರೆ. ಇದೀಗ ವಕ್ಫ್ ಮಂಡಳಿ ವಿವಾದಗ್ರಸ್ತ ಸ್ಥಳದಿಂದ ದೂರ ಹೋಗುವ ಇರಾದೆ ವ್ಯಕ್ತಪಡಿಸಿರುವುದು ಇದಕ್ಕೆ ಪೂರಕವಾಗಿದೆ. ಕೆಲ ದಿನಗಳ ಹಿಂದೆ ಆರ್‌ಎಸ್‌ಎಸ್‌ ಕೂಡ ಅಯೋಧ್ಯೆ ವಿಚಾರದಲ್ಲಿ ಪಟ್ಟು ಹಿಡಿಯುವುದಿಲ್ಲ ಎಂದಿದೆ. ಅಯೋಧ್ಯೆ ಚಳವಳಿ ಪ್ರಾರಂಭಿಸಿದ ಧರ್ಮ ಸಂಹತ್‌ ಕೈಗೊಳ್ಳುವ ನಿರ್ಧಾರಕ್ಕೆ ಆರ್‌ಎಸ್‌ಎಸ್‌ ಬದ್ಧವಾಗಿರುತ್ತದೆ ಎಂದು ಸಂಘದ ಮುಖಂಡರೊಬ್ಬರು ಹೇಳಿದ್ದಾರೆ.  ಅಯೋಧ್ಯೆ ವಿವಾದಕ್ಕೆ ಹಲವು ಆಯಾಮಗಳಿವೆ. ಜನರ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ಚಿಕ್ಕದೊಂದು ತಪ್ಪು ನಡೆಯೂ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು. ಇನ್ನೂ ಈ ವಿವಾದವನ್ನು ಎಳೆದುಕೊಂಡು ಹೋಗುವುದರಲ್ಲಿ ಅರ್ಥವಿಲ್ಲ. ಹೀಗಾಗಿ ವಕ್ಫ್ ಮಂಡಳಿಯ ಅಭಿಪ್ರಾಯವನ್ನು ಅನುಮೋದಿಸುವುದು ಅತ್ಯಂತ ವಿವೇಚನಾಯುಕ್ತ ನಡೆಯಾಗುತ್ತದೆ. ದೇಶದಲ್ಲಿ ಬಗೆಹರಿಯಲು ಕಾದಿರುವ ಸಾವಿರಾರು ಗಂಭೀರ ಸಮಸ್ಯೆಗಳಿವೆ. ನವಭಾರತ ಕಟ್ಟಲು ಮುಂದಾಗಿರುವ ನಾವು ಮಂದಿರ -ಮಸೀದಿಯಂತಹ ವಿವಾದಗಳನ್ನು ಮೀರಿ ಚಿಂತಿಸುವ ಅಗತ್ಯವಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.