NEET, JEE ಪರೀಕ್ಷೆ ಮುಂದೂಡುವುದರಿಂದ ಏನು ಲಾಭ?

ಪ್ರವೇಶ ಪರೀಕ್ಷೆ ಮುಂದೂಡಬೇಕೇ? ಬೇಡವೇ?

Team Udayavani, Aug 29, 2020, 6:57 AM IST

NEET, JEE ಪರೀಕ್ಷೆ ಮುಂದೂಡುವುದರಿಂದ ಏನು ಲಾಭ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ಯಾವಾಗ ಕೊನೆಯಾಗಲಿದೆ ಎಂಬುದು ಯಾರಿಗೂ ಗೊತ್ತಿಲ್ಲ.

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಕೊನೆಯಾಗಬಹುದು ಮತ್ತು ಆನಂತರ ಪರಿಸ್ಥಿತಿ ಸಂಪೂರ್ಣ ಮೊದಲಿನಂತೆ ಆಗಲಿದೆ ಎಂಬುದರ ಖಚಿತತೆ ಇದ್ದರೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌), ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡುವುದರಲ್ಲಿ ಅರ್ಥವಿದೆ. ಕೋವಿಡ್ 19 ಅಂತ್ಯ ಯಾವಾಗ ಎಂಬುದೇ ಗೊತ್ತಿಲ್ಲದಿರುವಾಗ ಪರೀಕ್ಷೆ ಮುಂದೂಡುವುದು ಎಷ್ಟು ಸಮಂಜಸ?

ಮುಂದೂಡಿಕೆಯಿಂದ ವಿದ್ಯಾರ್ಥಿಗಳ ಬದುಕಿಗೆ ದೊಡ್ಡ ಹೊಡೆತ ಕೊಟ್ಟಂತಾಗುತ್ತದೆ. ಪರೀಕ್ಷೆಯಿಲ್ಲದೆ ವೈದ್ಯಕೀಯ ಅಥವಾ ಎಂಜಿನಿಯರಿಂಗ್‌ ಮೊದಲಾದ ವೃತ್ತಿಪರ ಕೋರ್ಸ್‌ಗಳ ರಾಷ್ಟ್ರಮಟ್ಟದ ಸೀಟು ಹಂಚಿಕೆ ಅಷ್ಟು ಸುಲಭವಿಲ್ಲ.

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯಲ್ಲಿ ಪಡೆದ ಅಂಕದ ಆಧಾರದಲ್ಲಿ ಸೀಟು ನೀಡಲು ಸಾಧ್ಯವಿಲ್ಲ. ಏಕೆಂದರೆ, ಒಂದೊಂದು ರಾಜ್ಯದಲ್ಲಿ ವಿಭಿನ್ನವಾದ ಮೌಲ್ಯಮಾಪನ ಪದ್ಧತಿಯಿದೆ.

ಮೌಲ್ಯಮಾಪನವು ಪರೀಕ್ಷೆಯ ಫ‌ಲಿತಾಂಶ ನೀಡಬಲ್ಲದೇ ವಿನಾ ಅದೊಂದೇ ವೃತ್ತಿಪರ ಕೋರ್ಸ್‌ನ ಸೀಟು ಹಂಚಿಕೆ ಮಾನದಂಡ ಆಗಲಾರದು. ಹೀಗಾಗಿ ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯಾದರೆ ಸೀಟು ಪಡೆದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆಯಾಗಿ ಉಳಿಯಲಿದೆ. ಹೀಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲೇಬೇಕು.

ರಾಜ್ಯ ಸರಕಾರ ಬಹಳ ಯಶಸ್ವಿಯಾಗಿ ಈಗಾಗಲೇ ಎಸೆಸೆಲ್ಸಿ, ದ್ವಿತೀಯ ಪಿಯುಸಿ ಇಂಗ್ಲಿಷ್‌ ಹಾಗೂ ಸಿಇಟಿ ಪರೀಕ್ಷೆಯನ್ನು ಪೂರ್ಣಗೊಳಿಸಿದೆ. ಕೋವಿಡ್ 19 ಈ ಯಾವ ಪರೀಕ್ಷೆಗೂ ಅಡ್ಡಿ ಆಗಲಿಲ್ಲ.

ಸರಕಾರ ವಿದ್ಯಾರ್ಥಿಗಳ ಸುರಕ್ಷೆಗಾಗಿ ಅತ್ಯಂತ ಪರಿಣಾಮಕಾರಿ ಕ್ರಮವನ್ನು ತೆಗೆದುಕೊಂಡಿತ್ತು. ಇದೇ ರೀತಿಯ ಸುರಕ್ಷಾ ಕ್ರಮಗಳೊಂದಿಗೆ ನೀಟ್‌, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕು ಮತ್ತು ಅದರ ಆಧಾರದಲ್ಲೇ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯಾಗಬೇಕು.

ಕೋವಿಡ್ 19ನಿಂದ ಎಲ್ಲರಿಗೂ ಸಮಸ್ಯೆಯಾಗಿದೆ ಎಂದು ಪರೀಕ್ಷೆ ಮುಂದೂಡುವುದು ಸರಿಯಲ್ಲ. ದೇಶದ ಕೆಲವೊಂದು ಭಾಗದಲ್ಲಿ ಮಳೆ ಅಥವಾ ಪ್ರವಾಹದಿಂದ ಸಮಸ್ಯೆಯಾಗಿರಬಹುದು. ಅಂಥ ಪ್ರದೇಶದ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ನಿರ್ಧಾರವನ್ನು ತೆಗೆದುಕೊಂಡು ಪರೀಕ್ಷೆ ನಡೆಸಬೇಕು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರಗಳ ಮೂಲಕ ಸಾರಿಗೆ ವ್ಯವಸ್ಥೆ ಮಾಡಬೇಕು. ನೀಟ್‌ ಪರೀಕ್ಷೆ ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ. ಇನ್ನೂ ಎಲ್ಲಿಯ ತನಕ ಮುಂದೂಡುವುದು? ವಿದ್ಯಾರ್ಥಿಗಳ ಒಂದು ವರ್ಷದ ಶೈಕ್ಷಣಿಕ ಜೀವನವೇ ಹಾಳಾಗಬಹುದು.

ಪರೀಕ್ಷೆ ಸಿದ್ಧತೆಗಾಗಿ ಪಟ್ಟ ಶ್ರಮ ವ್ಯರ್ಥವಾದೀತು. ಪಾಲಕ, ಪೋಷಕರಲ್ಲಿ ಆತಂಕ ಸೃಷ್ಟಿಯಾದೀತು. ಹೀಗಾಗಿ ಪರೀಕ್ಷೆ ನಡೆಸಬೇಕು. ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಪ್ರವೇಶವೂ ಅರ್ಥಪೂರ್ಣವಾಗಿರಬೇಕು.

– ಡಾ| ಎನ್‌.ಪ್ರಭುದೇವ್‌, ವಿಶ್ರಾಂತ ಕುಲಪತಿ ಹಾಗೂ ಶಿಕ್ಷಣ ತಜ್ಞ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.