Assembly; ವಿಧಾನಮಂಡಲದಲ್ಲಿ ಈ ವಾರ ಚರ್ಚೆಯೋ? ಸಮರವೋ?

Team Udayavani, Dec 11, 2023, 6:00 AM IST

1-asv

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಾರವಾದರೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಚರ್ಚೆಗೆ ಅವಕಾಶ ಸಿಗುವುದೇ? ವಿಪಕ್ಷದ ಜಂಟಿ ಹೋರಾಟದ ಕಿಚ್ಚು ಸೋಮವಾರದಿಂದ ಹೆಚ್ಚಾಗಲಿದ್ದು, ಇದಕ್ಕೆ ಪೂರಕವಾದ ವಿಚಾರಗಳು ಬಿಜೆಪಿ ಹಾಗೂ ಜೆಡಿಎಸ್‌ ಬತ್ತಳಿಕೆಗೆ ಸೇರಿಕೊಂಡಿವೆ. ಹೀಗಾಗಿ ಸದನ ಮತ್ತೆ ರಣರಂಗವಾಗುವ ಸಾಧ್ಯತೆ ಇದೆ.
ಸೋಮವಾರ ಮೂರು ಮಸೂದೆಗಳ ಚರ್ಚೆಗೆ ಬಿಜೆಪಿ ಈಗಾಗಲೇ ಒಪ್ಪಿಗೆ ನೀಡಿದೆ. ಪ್ರತಿ ದಿನ ಮೂರು ಮಸೂದೆಗಳನ್ನು ಮಂಡಿಸುತ್ತೇವೆ ಎಂದು ಆಡಳಿತ ಪಕ್ಷ ಕಲಾಪ ಸಲಹಾ ಮಂಡಳಿ ಸಭೆಯಲ್ಲಿ ತಿಳಿಸಿದೆ. ಆದರೆ ಉತ್ತರ ಕರ್ನಾಟಕದ ಚರ್ಚೆ ಎಂದಿನಿಂದ ಎಂಬ ಸ್ಪಷ್ಟತೆ ಇಲ್ಲ.

ಬಿಜೆಪಿಯಿಂದ ಮೂರು ಅಸ್ತ್ರ
ಈ ಮಧ್ಯೆ ಬಿಜೆಪಿ ಮೂರು ಪ್ರಬಲ ಅಸ್ತ್ರಗಳನ್ನು ಪ್ರಯೋಗಿಸಲು ನಿರ್ಧರಿಸಿದೆ. ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆದ ವಿಚಾರವನ್ನು ಮಂಗಳ ವಾರ ಪ್ರಸ್ತಾವಿಸಲು ಬಿಜೆಪಿ ಮುಂದಾಗಿದೆ.

ಸ್ಪೀಕರ್‌ ಬಗ್ಗೆ ಜಮೀರ್‌ ಹೇಳಿಕೆ ಬಗ್ಗೆ ಸೋಮವಾರ ಗದ್ದಲ ಸೃಷ್ಟಿಸುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ ಭಾಗದಲ್ಲಿ ಇತ್ತೀಚೆಗೆ ಪತ್ತೆಯಾದ ಭ್ರೂಣಹತ್ಯೆ ಪ್ರಕರಣ, ವರ್ಗಾವಣೆ ವಿಚಾರದಲ್ಲಿ ಯತೀಂದ್ರ ಅವರ ವೀಡಿಯೋ ವಿಚಾರಗಳನ್ನು ಪ್ರಸ್ತಾವಿಸಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮುಂದಾಗಿದೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಅಸಲಿ ಆಟ ಈ ವಾರ ಆರಂಭವಾಗುವುದೆಂದು ಹೇಳಲಾಗುತ್ತಿದೆ.

ಭುಗಿಲೇಳಲಿದೆ ಒಬಿಸಿ ವಿಚಾರ
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಿಂದ ಸುಮಾರು 50 ಸಾವಿರ ಫಲಾನುಭವಿಗಳಿಗೆ ಹಿಂದಿನ ಬಿಜೆಪಿ ಸರಕಾರದಲ್ಲಿ ನೀಡಿದ್ದ ವಿವಿಧ ಸೌಲಭ್ಯವನ್ನು ಸರಕಾರ ತಡೆಹಿಡಿದಿರುವುದು ಮತ್ತೂಂದು ವಿವಾದ ಸೃಷ್ಟಿಸುವ ಸಾಧ್ಯತೆ ಇದೆ. ಶಾಸಕ ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಬಿಜೆಪಿಯ ಹಿಂದುಳಿದ ವರ್ಗದ ಶಾಸಕರು ನಿಯಮ 69 ರಡಿ ಚರ್ಚೆಗೆ ಅವಕಾಶ ಕೋರಿ ಸ್ಪೀಕರ್‌ಗೆ ನೋಟಿಸ್‌ ನೀಡಿದ್ದಾರೆ. ಗಂಗಾ ಕಲ್ಯಾಣ, ಹಿಂದುಳಿದ ವರ್ಗದ ಯುವಕರಿಗೆ ನೀಡಿದ್ದ ಸೌಲ ಸೌಲಭ್ಯ ಸಹಿತ ಸುಮಾರು 50 ಸಾವಿರ ಫಲಾನುಭವಿಗಳ ಆಯ್ಕೆಯನ್ನು ರಾಜ್ಯ ಸರಕಾರ ವಿನಾಕಾರಣ ತಡೆ ಹಿಡಿದಿದೆ ಎಂದು ಬಿಜೆಪಿ ಈ ಹಿಂದೆ ಆರೋಪಿಸಿತ್ತು.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.