ಅರಿಯಿರಿ ನಮ್ಮ ಸಂವಿಧಾನ


Team Udayavani, Nov 26, 2022, 6:20 AM IST

ಅರಿಯಿರಿ ನಮ್ಮ ಸಂವಿಧಾನ

ಪ್ರಜಾಪ್ರಭುತ್ವ ರೀತಿಯಲ್ಲಿ ಆಡಳಿತ ವ್ಯವಸ್ಥೆ ಹೊಂದಿದ ದೇಶಗಳ ಪೈಕಿ ನಮ್ಮ ದೇಶವೇ ಅತ್ಯುತ್ತಮವಾದದ್ದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನ.26 ಶನಿವಾರ ದೇಶಾದ್ಯಂತ “ಸಂವಿಧಾನ ದಿನ’ ಎಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಆಡಳಿತ ವ್ಯವಸ್ಥೆ ಮತ್ತು ಕಾನೂನಿನ ಬೆನ್ನೆಲುಬು ಆಗಿರುವ ಸಂವಿಧಾನದ ಕೆಲವು ಕುತೂಹಲಕಾರಿ ಅಂಶಗಳನ್ನು ಇಲ್ಲಿ ವಿವರಿಸುವ ಪ್ರಯತ್ನ ಮಾಡಲಾಗಿದೆ.

– 1950ರಲ್ಲಿ ರಚಿಸಲಾಗಿರುವ ಮೂಲ ಸಂವಿಧಾನವನ್ನು ಸಂಸತ್‌ ಭವನದಲ್ಲಿ ಸುರಕ್ಷಿತವಾಗಿ ಸಂರಕ್ಷಿಸಿ ಇರಿಸಲಾಗಿದೆ.
– ದೇಶದ ಖ್ಯಾತ ಕ್ರಾಂತಿಕಾರಿ ನಾಯಕರಾಗಿದ್ದ ಮಹೇಂದ್ರ ನಾಥ ರಾಯ್‌ (ಎಂ.ಎನ್‌.ರಾಯ್‌) ಸಂವಿಧಾನ ರಚನಾ ಸಭೆ (ಕಾನ್‌ಸ್ಟಿಟ್ಯುವೆಂಟ್‌ ಅಸೆಂಬ್ಲಿ) ರಚನೆ ಮಾಡಬೇಕು ಎಂಬ ಬಗ್ಗೆ ಸಲಹೆ ನೀಡಿದ್ದ ಮೊದಲಿಗರಲ್ಲಿ ಒಬ್ಬರು. 1934ರಲ್ಲಿ ನಡೆದಿದ್ದ ಸಂವಿಧಾನ ರಚನಾ ಸಭೆಯಲ್ಲಿ ಈ ಬಗ್ಗೆ ಅವರು ಪ್ರಸ್ತಾಪ ಮಾಡಿದ್ದರು.

– ದೇಶದ ಸಂವಿಧಾನದಲ್ಲಿ ಇರುವ ಕೆಲವು ಅಂಶಗಳನ್ನು ಇತರ ದೇಶಗಳ ಸಂವಿಧಾನದಲ್ಲಿ ಜಾರಿಯಾಗಿರುವ ಅಂಶಗಳಿಂದ ಸ್ಫೂರ್ತಿ ಪಡೆದು, ಅದನ್ನು ನಮ್ಮತನಕ್ಕೆ, ದೇಶ ಹೊಂದಿರುವ ಸಾಂಸ್ಕೃತಿಕ, ಸಾಮಾಜಿಕ, ಭೌಗೋಳಿಕ ಅಂಶಗಳಿಗೆ ಹೊಂದಿಸಿಕೊಂಡು ಅನುಷ್ಠಾನಗೊಳಿಸಲಾಗಿದೆ.
– ಜಗತ್ತಿನ ಸಂವಿಧಾನಗಳಿಗೆ ಹೋಲಿಕೆ ಮಾಡಿದಾಗ ನಮ್ಮ ದೇಶದ ಸಂವಿಧಾನವು “ಅತ್ಯಂತ ದೀರ್ಘ‌ವಾದ ಲಿಖಿತ ಸಂವಿಧಾನ’ ಎಂದು ಹೆಸರು ಪಡೆದಿದೆ. ಪ್ರೇಮ್‌ ನಾರಾಯಣ್‌ ರೈಜಾದಾ ಅವರು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಅದನ್ನು ಬರೆದಿದ್ದರು. ಅದನ್ನು ಅವರು ಡೆಹ್ರಾಡೂನ್‌ನಲ್ಲಿ ಪ್ರಕಟಿಸಿದ್ದರು.
– ಸಂವಿಧಾನ ರಚನೆ ಮಾಡುವ ನಿಟ್ಟಿನಲ್ಲಿ ಆಗಿನ ಕಾಲಕ್ಕೆ 64 ಲಕ್ಷ ರೂ. ವೆಚ್ಚವಾಗಿತ್ತು.
– ಸಂವಿಧಾನದ ಮೊದಲ ಕರಡು ಸಿದ್ಧಗೊಂಡ ಬಳಿಕ ಅದಕ್ಕೆ ಸರಿ ಸುಮಾರು 2,000 ತಿದ್ದುಪಡಿಗಳನ್ನು ಸೂಚಿಸಲಾಗಿತ್ತು.
– ದೇಶದಲ್ಲಿ ಮಹಿಳೆಯರಿಗೆ ಮತ ಚಲಾವಣೆಯ ಹಕ್ಕು ನಿಷೇಧಿತವಾಗಿತ್ತು. ಸಂವಿಧಾನ ಜಾರಿಗೊಂಡ ಬಳಿಕ ಮಹಿಳೆಯರಿಗೆ ಮತದಾನದ ಹಕ್ಕು ನೀಡಲಾಯಿತು.
– ದೇಶದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್‌ ಅವರು ಸಂವಿಧಾನಕ್ಕೆ ಸಹಿ ಹಾಕಿದ ಮೊದಲ ವ್ಯಕ್ತಿ. ಸಂವಿಧಾನ ರಚನಾ ಮಂಡಳಿಯ ಅಧ್ಯಕ್ಷರಾಗಿದ್ದ ಪಿರೋಜ್‌ ಗಾಂಧಿ ಅವರು ಸಹಿ ಹಾಕಿದ ಕೊನೆಯ ವ್ಯಕ್ತಿ.
– 1976ರಲ್ಲಿ ಅನುಮೋದನೆಗೊಂಡು ಜಾರಿಯಾದ 43ನೇ ತಿದ್ದುಪಡಿ ಕಾಯ್ದೆಯಲ್ಲಿ ಹಲವು ಅಂಶಗಳು ಉಲ್ಲೇಖಗೊಂಡಿದ್ದವು. ಮೊದಲಿಗೆ ಉಲ್ಲೇಖಗೊಂಡಿದ್ದ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ’ (sovereign democratic republic)) ವನ್ನು ಸಾರ್ವಭೌಮ ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ (sovereign, socialist secular democratic republic) ಎಂದು ಬದಲಾವಣೆಗೊಂಡಿತು. ಇದರ ಜತೆಗೆ ದೇಶದ ಏಕತೆ (unity of the nation),ಯಿಂದ ದೇಶದ ಏಕತೆ ಮತ್ತು ಸಮಗ್ರತೆ (unity and integrity of the nation)ಎಂದೂ ಬದಲಾಯಿಸಲಾಯಿತು. ಈ ಸಂವಿಧಾನ ತಿದ್ದುಪಡಿ ಕಾಯ್ದೆಯನ್ನು “ಮಿನಿ ಸಂವಿಧಾನ’ ಎಂದು ಕರೆಯಲಾಗುತ್ತದೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.