ಭಾರತದ ಹೈ ಟ್ಯಾರಿಫ್ ನೀತಿ ವರವೋ? ಶಾಪವೋ?

Team Udayavani, Jan 20, 2022, 1:30 PM IST

ಭಾರತದ ಹೈ ಟ್ಯಾರಿಫ್ ನೀತಿ ವರವೋ? ಶಾಪವೋ?

ಎಲೆಕ್ಟ್ರಾನಿಕ್‌ ಉತ್ಪನ್ನಗಳನ್ನು ದೇಶೀಯವಾಗಿಯೇ ಹೆಚ್ಚಾಗಿ ಉತ್ಪಾದಿಸಿ ಇಲ್ಲೇ ಬಳಕೆ ಮಾಡುವಂತಾಗಬೇಕು ಎಂಬ ಕಾರಣದಿಂದ ಭಾರತದಲ್ಲಿ ಹೆಚ್ಚಿನ ಟ್ಯಾರಿಫ್ ನೀತಿ ಅನುಸರಿಸಲಾಗುತ್ತಿದೆ. ಅಂದರೆ, ಭಾರತಕ್ಕೆ ಆಮದಾಗುವ ಎಲೆಕ್ಟ್ರಾನಿಕ್‌ ವಸ್ತುಗಳಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ. ಇದು ಭಾರತದ ಕಂಪನಿಗಳಿಗೆ ಲಾಭವಾಗುವ ಬದಲು, ನಷ್ಟ ತರುತ್ತಿದೆ ಎಂದು ಭಾರತೀಯ ಸೆಲ್ಲುಲರ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ಅಸೋಸಿಯೇಶನ್‌ನ ವರದಿ ತಿಳಿಸಿದೆ.

ಭಾರತದಲ್ಲಿ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಉತ್ಪಾದನೆ
ಚೀನ, ವಿಯೆಟ್ನಾಂ, ಮೆಕ್ಸಿಕೋ ಮತ್ತು ಥಾಯ್ಲೆಂಡ್‌ಗೆ ಹೋಲಿಸಿದರೆ, ಭಾರತದ ಸಾಧನೆ ಅತ್ಯಂತ ಕಡಿಮೆ. ಇವೆಲ್ಲವೂ ಕಡಿಮೆ ದರದಲ್ಲಿ ಕಾರ್ಮಿಕರು ಸಿಗುವ ದೇಶಗಳಾಗಿವೆ. ಅಂದರೆ, 1980ರ ಸಾಲಿಗೆ ಹೋಲಿಕೆ ಮಾಡಿದರೆ, ಆಗ 35ನೇ ಸ್ಥಾನದಲ್ಲಿದ್ದ ಚೀನಾ ಈಗ ನಂ.1 ಸ್ಥಾನಕ್ಕೇರಿದೆ. 1990ರಲ್ಲಿ ಒಂದೇ ಒಂದು ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ರಫ್ತು ಮಾಡದಿದ್ದ ವಿಯೆಟ್ನಾಂ ಇಂದು 8ನೇ ಸ್ಥಾನ ಪಡೆದಿದೆ. ಹಾಗೆಯೇ ಮೆಕ್ಸಿಕೋ 1980ರಲ್ಲಿ 37ನೇ ಸ್ಥಾನದಲ್ಲಿದ್ದು, ಈಗ 11ನೇ ಸ್ಥಾನಕ್ಕೇರಿದೆ. ಇನ್ನು ಥಾಯ್ಲೆಂಡ್‌ ದೇಶ 1980ರಲ್ಲಿ 45ನೇ ಸ್ಥಾನದಲ್ಲಿದ್ದು, ಈಗ 15ನೇ ಸ್ಥಾನಕ್ಕೇರಿದೆ. ಆದರೆ, 1980ರಲ್ಲಿ ಭಾರತ 40ನೇ ಸ್ಥಾನದಲ್ಲಿತ್ತು. ಈಗ ಇದು 28ನೇ ಸ್ಥಾನಕ್ಕೆ ಏರುವಲ್ಲಿ ಮಾತ್ರ ಸಫ‌ಲವಾಗಿದೆ.

ಟ್ಯಾರಿಫ್ ಹೆಚ್ಚಳದಿಂದ ಲಾಭವಾಗಿಲ್ಲವೇ?
ಚೀನಾವಾಗಲಿ, ವಿಯೆಟ್ನಾಂ ಆಗಲಿ ಅಥವಾ ಉಳಿದ ದೇಶಗಳು ಟ್ಯಾರಿಫ್ ಹೆಚ್ಚಳದ ನೀತಿಗೆ ಹೋಗಿಲ್ಲ. ಆದರೆ, ಭಾರತ ಮಾತ್ರ ಅಮೆರಿಕದ ರೀತಿಯಲ್ಲಿ ಟ್ಯಾರಿಫ್ ಹೆಚ್ಚಳದ ನೀತಿಗೆ ಹೋಗಿದೆ. ಭಾರತದಲ್ಲಿನ ಎಲೆಕ್ಟ್ರಾನಿಕ್‌ ವಸ್ತುಗಳ ಮೇಲಿನ ಟ್ಯಾರಿಫ್ ಹೆಚ್ಚಳದ ನೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿರುವ ಹೂಡಿಕೆದಾರರು ಮತ್ತು ಸಲಕರಣೆಗಳ ಉತ್ಪಾದಕರು ಭಾರತದಿಂದ ದೂರ ಸರಿಯುತ್ತಿದ್ದಾರೆ. ಹೀಗಾಗಿಯೇ ನಮ್ಮದು ಅತಿದೊಡ್ಡ ಆರ್ಥಿಕತೆಯಾಗಿದ್ದರೂ, ಹೂಡಿಕೆದಾರರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿಲ್ಲ ಎಂದು ವರದಿ ತಿಳಿಸಿದೆ. ಅಲ್ಲದೆ, ಇಲ್ಲಿಗೆ ಬಂದು ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳನ್ನು ತಯಾರಿಸಬೇಕಾದರೂ, ಬೇರೆ ದೇಶದಿಂದ ಇದಕ್ಕೆ ಬೇಕಾದ ವಸ್ತುಗಳನ್ನು ತರಿಸಿಕೊಳ್ಳುವುದು ದುಬಾರಿಯಾಗುತ್ತದೆ. ಹೀಗಾಗಿಯೇ ಅವರು ಹಿಂದೆ ಸರಿಯುತ್ತಿದ್ದಾರೆ.

ಇಂಡಸ್ಟ್ರಿ ಹೇಳುವುದೇನು?
ಟ್ಯಾರಿಫ್ ಹೆಚ್ಚಳ ನೀತಿಗಿಂತ ಹೊರತಾಗಿ ನಾವು ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಸ್ಪರ್ಧೆ ನೀಡಬೇಕು. ಟ್ಯಾರಿಫ್ ಹೆಚ್ಚಳದ ನೀತಿ ಕೇವಲ ಅಮೆರಿಕದಂಥ ದೇಶಗಳಿಗೆ ಅನ್ವಯವಾಗುತ್ತದೆ. ನಮ್ಮಲ್ಲಿ ಮಾರುಕಟ್ಟೆ ಸುಧಾರಿಸಿಕೊಳ್ಳಬೇಕಾದರೆ, ಪೈಪೋಟಿ ನೀಡಿಯೇ ಗೆಲ್ಲಬೇಕು ಎಂದು ಇಂಡಸ್ಟ್ರಿ ತಜ್ಞರು ಹೇಳುತ್ತಾರೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.