2100ರ ವೇಳೆಗೆ 41 ಕೋಟಿಯಷ್ಟು ತಗ್ಗಲಿದೆ ಭಾರತದ ಜನಸಂಖ್ಯೆ

Team Udayavani, Jul 24, 2022, 6:20 AM IST

2100ರ ವೇಳೆಗೆ 41 ಕೋಟಿಯಷ್ಟು ತಗ್ಗಲಿದೆ ಭಾರತದ ಜನಸಂಖ್ಯೆ

ಹೊಸದಿಲ್ಲಿ: ಜಗತ್ತಿನಲ್ಲೇ ಎರಡನೇ ಅತಿಹೆಚ್ಚು ಜನಸಂಖ್ಯೆಯಿರುವ ದೇಶ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಇನ್ನೇನು ಕೆಲವೇ ವರ್ಷಗಳಲ್ಲಿ ಜನಸಂಖ್ಯೆ ಇಳಿಮುಖವಾಗಲಿದೆ! ಸ್ಟಾನ್‌ಫೋರ್ಡ್‌ ನ ಅಧ್ಯಯನವೊಂದು ಈ ವಿಚಾರವನ್ನು ಬಹಿರಂಗಪಡಿಸಿದೆ. ಮುಂದಿನ 78 ವರ್ಷಗಳಲ್ಲಿ ಭಾರತದ ಜನಸಂಖ್ಯೆಯು ಸುಮಾರು 41 ಕೋಟಿಯಷ್ಟು ಕಡಿಮೆಯಾಗಲಿದೆ ಎಂದು ಈ ವರದಿ ತಿಳಿಸಿದೆ. ಮುಂಬರುವ ವರ್ಷಗಳಲ್ಲಿ ಭಾರತದ ಜನಸಂಖ್ಯಾ ಸಾಂದ್ರತೆಯು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ. ಪ್ರಸ್ತುತ ಮೇಲ್ನೋಟಕ್ಕೆ ಭಾರತ ಮತ್ತು ಚೀನದ ಜನಸಂಖ್ಯೆಯಲ್ಲಿ ಸಾಮ್ಯತೆ ಕಂಡುಬಂದರೂ, ಅವುಗಳ ಸಾಂದ್ರತೆಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಭಾರತದಲ್ಲಿ ಪ್ರತಿ ಚದರ ಕಿಮೀನಲ್ಲಿ ಸರಾಸರಿ 476 ಮಂದಿ ಜೀವಿಸುತ್ತಿದ್ದರೆ, ಚೀನದಲ್ಲಿ ಇದು 148 ಆಗಿದೆ. 2100ನೇ ಇಸವಿಯ ವೇಳೆಗೆ ಭಾರತದ ಜನಸಂಖ್ಯಾ ಸಾಂದ್ರತೆಯು ಪ್ರತಿ ಚದರ ಕಿ.ಮೀ.ಗೆ ಸರಾಸರಿ 335 ಆಗಲಿದೆ. ಹಲವು ದೇಶಗಳಲ್ಲಿ: ಭಾರತ ಮಾತ್ರವಲ್ಲದೇ ಚೀನ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಇದೇ ರೀತಿಯ ಬೆಳವಣಿಗೆ ಉಂಟಾಗಲಿದೆ. ಚೀನದ ಜನಸಂಖ್ಯೆ 2100ರ ವೇಳೆಗೆ ಬರೋಬ್ಬರಿ 93.2 ಕೋಟಿಯಷ್ಟು ಇಳಿಕೆಯಾಗಿ, 49.4 ಕೋಟಿಗೆ ತಲುಪಲಿದೆ. ಇಳಿಮುಖವಾಗುತ್ತಿರುವ ಫ‌ಲವತ್ತತೆ ಪ್ರಮಾಣವನ್ನು ಆಧರಿಸಿ ಈ ಲೆಕ್ಕ ಹಾಕಲಾಗಿದೆ ಎಂದು ವರದಿ ಹೇಳಿದೆ.

ಎಲ್ಲೆಲ್ಲಿ ಇಳಿಕೆಯಾಗಬಹುದು?

ಭಾರತ : 32.3%
ಚೀನ : 64.6%
ರಷ್ಯಾ : 46.5%
ಬ್ರೆಜಿಲ್‌ : 45.2%
ಅಮೆರಿಕ : 18.6%
ಆಸ್ಟ್ರೇಲಿಯಾ : 1.3%

ಎಲ್ಲೆಲ್ಲಿ ಹೆಚ್ಚಳವಾಗಬಹುದು?
ಕಾಂಗೋ : 73.7%
ನೈಜೀರಿಯಾ : 51.4%
ಕೆನಡಾ : 0.6%

ಭಾರತದ ಪ್ರಸ್ತುತ ಜನಸಂಖ್ಯೆ : 141.2 ಕೋಟಿ
2100ರ ವೇಳೆಗೆ ಭಾರತದ ಜನಸಂಖ್ಯೆ ಎಷ್ಟಾಗಲಿದೆ? 100.3 ಕೋಟಿ

78 ವರ್ಷಗಳಲ್ಲಿ ಇಳಿಕೆಯಾಗ ಲಿರುವ ಭಾರತದ ಜನಸಂಖ್ಯೆ : 41ಕೋಟಿ

ಜಗತ್ತಿನ ಜನಸಂಖ್ಯೆ ಈಗಿರುವ 794 ಕೋಟಿಯಿಂದ 704 ಕೋಟಿಗೆ ಇಳಿಕೆ ನಿರೀಕ್ಷೆ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.