ಹೊರೆಯಾಯಿತೆ “ಇಂದಿರಾ ಕ್ಯಾಂಟೀನ್‌’!

Team Udayavani, Dec 13, 2018, 6:00 AM IST

indira-canteen-asaa.jpg

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಣಕಾಸು ಬೆಂಬಲ ದೊರೆಯದ ಹಿನ್ನೆಲೆಯಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ “ಇಂದಿರಾ ಕ್ಯಾಂಟೀನ್‌’ ಯೋಜನೆ ಮಹಾನಗರ ಪಾಲಿಕೆಗಳಿಗೆ ಹೊರೆಯಾಗಿ ಪರಿಣಮಿಸಿದೆ.

ರಾಜ್ಯದ ಜನರಿಗೆ ರಿಯಾಯಿತಿ ದರದಲ್ಲಿ ಅನ್ನಾಹಾರ ಒದಗಿಸುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ “ಇಂದಿರಾ ಕ್ಯಾಂಟೀನ್‌’ ಯೋಜನೆ ಜಾರಿಗೊಳಿಸಿತ್ತು. ಜನರಿಂದಲೂ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆದರೆ, ರಾಜ್ಯ ಸರ್ಕಾರದಿಂದ ಯೋಜನೆಗೆ ಅನುದಾನ ಲಭ್ಯವಾಗದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಗಳು ತಮ್ಮ ಸ್ವಂತ ಹಣದಲ್ಲಿ ಯೋಜನೆ ಮುಂದುವರಿಸುವಂತಾಗಿದೆ.

ಮೊದಲಿಗೆ ಬೆಂಗಳೂರಿನಲ್ಲಿ ಯೋಜನೆ ಜಾರಿಗೊಳಿಸಿದ್ದ ಸರ್ಕಾರ, ಕ್ಯಾಂಟೀನ್‌ಗಳ ನಿರ್ಮಾಣ ಹಾಗೂ ಉಪಕರಣಗಳ ಖರೀದಿಗೆ ಆರಂಭದ ಬಂಡವಾಳವಾಗಿ 100 ಕೋಟಿ ರೂ.ಬಿಡುಗಡೆ ಮಾಡಿತ್ತು. ಅದೇ ರೀತಿ ರಾಜ್ಯದ 247 ಕಡೆಗಳಲ್ಲಿ ಕ್ಯಾಂಟೀನ್‌ ನಿರ್ಮಿಸಲು ಸಹ ಆರಂಭಿಕ ಬಂಡವಾಳವಾಗಿ 211 ಕೋಟಿ ರೂ.ಬಿಡುಗಡೆ ಮಾಡಿದೆ. ಜತೆಗೆ, ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಪಾಲಿಕೆಗಳ ಸ್ವಂತ ಆದಾಯದಿಂದ ಬಿಲ್‌ ಪಾವತಿಸಬೇಕು ಎಂದು ಆದೇಶ ಹೊರಡಿಸಿದೆ.

ಮೊದಲಿಗೆ ಸರ್ಕಾರದ ಆದೇಶ ಪಾಲಿಸಿದ ಪಾಲಿಕೆಗಳಿಗೆ ಇದೀಗ ಆರ್ಥಿಕ ಸಂಕಷ್ಟ ಎದುರಾಗುತ್ತಿದ್ದು, ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರೂ, ಸರ್ಕಾರ ಮಾತ್ರ ತಮಗೂ,ಇಂದಿರಾ ಕ್ಯಾಂಟೀನ್‌ ಯೋಜನೆಗೂ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ. ಜೊತೆಗೆ, ಅನುದಾನ ಬಿಡುಗಡೆ ಮಾಡಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಸ್ವಂತ ಅನುದಾನದಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳದಂತಹ ಪರಿಸ್ಥಿತಿಯಲ್ಲಿ ಮಹಾನಗರ ಪಾಲಿಕೆಗಳಿದ್ದು, ಈಗಾಗಲೇ ಜಾರಿಯಲ್ಲಿರುವ ಕಾಮಗಾರಿಗಳನ್ನು ಪೂರೈಸಲೂ ಅವು ಸರ್ಕಾರದ ಅನುದಾನವನ್ನೇ ನೆಚ್ಚಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಸ್ವಂತ ಆದಾಯದ ಮೂಲದಿಂದ ಇಂದಿರಾ ಕ್ಯಾಂಟೀನ್‌ನ ಗುತ್ತಿಗೆದಾರರಿಗೆ ಬಿಲ್‌ ಪಾವತಿಸುವುದು ಹೊರೆಯಾಗುತ್ತಿದೆ ಎಂಬುದು ಮಹಾನಗರ ಪಾಲಿಕೆಗಳ ವಾದ.

ಸ್ಥಳೀಯ ಸಂಸ್ಥೆಗಳಿಗೆ ವಿನಾಯ್ತಿ: ಆಹಾರ ಪೂರೈಕೆ ಗುತ್ತಿಗೆ ದಾರಿಗೆ ಬಿಲ್‌ ಪಾವತಿಸುವ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ವಿನಾಯ್ತಿ ನೀಡಲಾಗಿದೆ. ಅದರಂತೆ ವ್ಯತ್ಯಾಸದ ಮೊತ್ತದಲ್ಲಿ ಸರ್ಕಾರ ಶೇ.70ರಷ್ಟು, ಕಾರ್ಮಿಕರ ಇಲಾಖೆಯಿಂದ ಶೇ.30ರಷ್ಟು ಹಣವನ್ನು ಪಾವತಿಸಲಾಗುತ್ತದೆ ಎಂದು ಉಲ್ಲೇಖೀಸಲಾಗಿದೆ.

ಬಿಬಿಎಂಪಿಗೆ 146.75 ಕೋಟಿ ರೂ. ಬಾಕಿ: 2016ರ
ಆಗಸ್ಟ್‌ನಿಂದ ಈವರೆಗೆ ಬಿಬಿಎಂಪಿಗೆ ಒಟ್ಟು 245 ಕೋಟಿ ರೂ.ಅನುದಾನ ಸರ್ಕಾರದಿಂದ ಬರಬೇಕಿದೆ. ಆರಂಭದ ಬಂಡವಾಳವಾಗಿ ಮೊದಲಿಗೆ 100 ಕೋಟಿ ರೂ.ಬಿಡುಗಡೆ ಮಾಡಿತ್ತು. ಇನ್ನು ಇತ್ತೀಚೆಗೆ ವಿಪಕ್ಷಗಳು ಅನುದಾನ ಬಿಡುಗಡೆ ಮಾಡಿಲ್ಲವೆಂದು ಆರೋಪಿಸಿದ ಹಿನ್ನೆಲೆಯಲ್ಲಿ 36.25 ಕೋಟಿ ರೂ.ನೀಡಿದ್ದು, ಇನ್ನೂ 146.75 ಕೋಟಿ ರೂ.ಬರಬೇಕಿದೆ.

ಸರ್ಕಾರದ ಆದೇಶದಲ್ಲೇನಿದೆ?
ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡಲು ಗುತ್ತಿಗೆದಾರಿಗೆ 49 ರಿಂದ 57 ರೂ.ವರೆಗಿನ ದರಕ್ಕೆ ಅನುಮೋದನೆ ನೀಡಲಾಗಿದೆ. ಅದರಂತೆ ಒಬ್ಬ ವ್ಯಕ್ತಿಯಿಂದ ದಿನಕ್ಕೆ ಒಂದು ತಿಂಡಿ ಹಾಗೂ ಎರಡು ಊಟಕ್ಕೆ 25 ರೂ.ಸಂಗ್ರಹವಾಗುತ್ತದೆ. ಉಳಿದ ವ್ಯತ್ಯಾಸದ ಮೊತ್ತದ ಪೈಕಿ ಶೇ.70ರಷ್ಟು ಹಣವನ್ನು ಮಹಾನಗರ ಪಾಲಿಕೆಗಳು ತಮ್ಮ ಸ್ವಂತ ಅನುದಾನ/ಎಸ್‌ಎಫ್ಸಿ ಮುಕ್ತನಿಧಿಯಿಂದ ಪಾವತಿಸಬೇಕು. ಉಳಿದ ಶೇ.30ರಷ್ಟು ಹಣವನ್ನು ಕಾರ್ಮಿಕರ ಇಲಾಖೆಯಿಂದ ಪಾವತಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಪ್ರಚಾರ ಸರ್ಕಾರಕ್ಕೆ, ಹೊರೆ ಪಾಲಿಕೆಗೆ. ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಯೋಜನೆಗೆ ಪಾಲಿಕೆಯ ಬೊಕ್ಕಸದಿಂದ ಅನುದಾನ ನೀಡುತ್ತಿರುವುದು ಪಾಲಿಕೆಗೆ ಹೊರೆಯಾಗಿದ್ದು, ಇಂದಿರಾ ಕ್ಯಾಂಟೀನ್‌ ಎಂಬ ಬಿಳಿ ಆನೆ ಸಾಕುವುದು ಕಷ್ಟವಾಗುತ್ತಿದೆ. ಇಂದಿರಾ ಕ್ಯಾಂಟೀನ್‌ ಜಯಪ್ರಿಯತೆ ಸರ್ಕಾರಕ್ಕೆ, ಯೋಜನೆಯ ಹೊರೆ ಬಿಬಿಎಂಪಿಗೆ ಎನ್ನುವಂತಾಗಿದ್ದು, ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು. 
– ಪದ್ಮಾನಾಭ ರೆಡ್ಡಿ, ಬಿಬಿಎಂಪಿ ವಿಪಕ್ಷ ನಾಯಕ

– ವೆಂ. ಸುನೀಲ್‌ಕುಮಾರ್‌
 
ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.