ಇಂದು ರಾಷ್ಟ್ರಕವಿ, ರಸಋಷಿ ಕುವೆಂಪು ಜನ್ಮ ದಿನ


Team Udayavani, Dec 29, 2020, 2:28 PM IST

ಇಂದು ರಾಷ್ಟ್ರಕವಿ, ರಸಋಷಿ ಕುವೆಂಪು ಜನ್ಮ ದಿನ

ಇಂದು ರಾಷ್ಟ್ರಕವಿ, ವಿಶ್ವ ಮಾನವ ತಣ್ತೀದ ಹರಿಕಾರ ಕುವೆಂಪು ಅವರ ಜನುಮ ದಿನ. 20ನೇ ಶತಮಾನದಲ್ಲಿ ಅವರು ಬೋಧಿಸಿದ ವಿಶ್ವ ಮಾನ ತಣ್ತೀವನ್ನು ಗೌರವಿಸುವ ಸಲುವಾಗಿ ಪ್ರತೀ ವರ್ಷ ಅವರ ಜನ್ಮ ದಿನವಾದ ಡಿಸೆಂಬರ್‌ 29 ಅನ್ನು ವಿಶ್ವ ಮಾನವ ದಿನ ಎಂದು ಆಚರಿಸಲಾಗುತ್ತದೆ.

ಕನ್ನಡ ಭಾಷೆ ಎಂದಾಗ ಎಲ್ಲ ಭಾಷಿಗರಿಗೂ ನೆನಪಾಗುವುದು ರಸ ಋಷಿ ಕುವೆಂಪು. ಅವರು ರಚಿಸಿರುವ ಕಾವ್ಯಗಳಲ್ಲೂ ಹೆಜ್ಜೆನಿನಂಥ ಸವಿ, ರಸೋತ್ಸಾಹ, ಆಧ್ಯಾತ್ಮದ ಜತೆಗೆ ಮೈಗೂಡಿಸಿಕೊಳ್ಳಬೇಕಾದಂಥ ವೈಚಾರಿಕ ಪ್ರಜ್ಞೆ, ಬೆಟ್ಟದಂಥ ನಿಲುವು. ಇವಿಷ್ಟು ಕುವೆಂಪು ಅವರ ಕಾವ್ಯಗಳಲ್ಲಿ ನಾವು ಪಟ್ಟಿಮಾಡಬಹುದಾದ ಅಸಾಮಾನ್ಯ ಸಂಗತಿಗಳು. ಇಂಥ ಸಾವಿರಾರು ಸತ್ತ್ವಗಳು, ತಣ್ತೀಗಳು ಹುದುಗಿವೆ.

ವಿಶ್ವಮಾನವ ತಣ್ತೀ
ಹುಟ್ಟುವ ಪ್ರತೀ ಮಗುವು ವಿಶ್ವಮಾನ ವನೇ. ಅನಂತರ ಆ ಮಗುವನ್ನು ಜಾತಿ, ಮತದ ಕಟ್ಟುಪಾಡುಗಳಿಂದ ಬಂಧಿಸಲಾಗು ತ್ತದೆ. ಆದರೆ ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಆತ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶ. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳುತ್ತಿದ್ದರು.

ಪ್ರತಿ ಮಗುವೂ ಹುಟ್ಟುತ್ತಲೇ ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು “ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು “ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು. ಹುಟ್ಟುವಾಗ “ವಿಶ್ವಮಾನವನಾಗಿಯೇ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಜಾತಿ, ಮತ, ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿಂದ ಪಾರಾಗಿ ಅವನನ್ನು “ಬುದ್ಧ’ ನನ್ನಾಗಿ, ಅಂದರೆ ವಿಶ್ವಮಾನವನನ್ನಾಗಿ, ಪರಿವರ್ತಿಸುವುದೆ ನಮ್ಮ ವಿದ್ಯೆ, ಸಂಸ್ಕೃತಿ, ನಾಗರಿಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಲೋಕ ಉಳಿದು, ಬಾಳಿ ಬದುಕಬೇಕಾದರೆ! ಪ್ರಪಂಚದ ಮಕ್ಕಳೆಲ್ಲ “ಅನಿಕೇತನ’ರಾಗಬೇಕು ಎಂದವರು ಕುವೆಂಪು ಅವರು.

ಪಂಚ ಮಂತ್ರ: ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿಯನ್ನು ಅವರು ಪರಿಚಯಿಸಿದ್ದರು. ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ ಎಂದಿದ್ದರು. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ ಅಂತಹ ದೃಷ್ಟಿ ಬರಿಯ ಯಾವುದೊ ಒಂದು ಜಾತಿಗೆ, ಮತಕ್ಕೆ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು.

ಕುವೆಂಪು
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ 
ಜನನ:
29 ಡಿಸೆಂಬರ್‌ 1904
ನಿಧನ:
11 ನವೆಂಬರ್‌ 1994
ಪ್ರಶಸ್ತಿಗಳು: ಜ್ಞಾನಪೀಠ ಪುರಸ್ಕಾರ, ಕರ್ನಾಟಕ ರತ್ಮ, ಪದ್ಮ ವಿಭೂಷಣ, ಪದ್ಮ ಭೂಷಣ, ಕನ್ನಡ ಸಾಹಿತ್ಯ ಅಕಾಡೆಮಿ ಪುರಸ್ಕಾರ

ಕುವೆಂಪು ಬರೆದ ಆಧುನಿಕ ಕನ್ನಡ ಮಹಾಕಾವ್ಯ ಶ್ರೀರಾಮಾಯಣ ದರ್ಶನಂ ಕೇವಲ ರಾಮಾಯಣದ ಕತೆಯನ್ನು ಮಾತ್ರ ಓದಿಸುವುದಿಲ್ಲ. ಅದೊಂದು ಅಂತರಂಗದ ಅನುಭೂತಿ. ಪ್ರಕೃತಿ ಆರಾಧಕರಾದ ಕುವೆಂಪು ಅವರು ಕನ್ನಡದ ಶೇಷ್ಠ ಸಾಕ್ಷಿ ಪ್ರಜ್ಞೆಯೂ ಹೌದು. ಕುವೆಂಪು ಅವರ ವಿಶ್ವ ಮಾನವ ಸಂದೇಶಗಳಾದ ಮನುಜ ಪಥ, ವಿಶ್ವಪಥ, ಸರ್ವೋದಯ, ಸಮನ್ವಯ ಹಾಗೂ ಪೂರ್ಣ ದೃಷ್ಟಿಯ ತಣ್ತೀಗಳನ್ನು ಇಡೀ ಜಗತ್ತೇ ಮೈಗೂಡಿಸಿ ಕೊಳ್ಳಬಹುದಾಗಿದೆ. ಅವರ ಪ್ರಕೃತಿ ಪ್ರೇಮಕ್ಕೆ ಕುಪ್ಪಳ್ಳಿಯ ಅವರ ಮನೆಯೇ ಒಂದು ಶ್ರೇಷ್ಠ ಉದಾಹರಣೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.