ಜೀವದಾನ ಎನಿಸಬಲ್ಲ ರಕ್ತದಾನ

Team Udayavani, Jun 14, 2017, 11:46 AM IST

blooddonation.jpg

ಜೂನ್‌ 14, ವಿಶ್ವ ರಕ್ತದಾನಿಗಳ ದಿನ. ಬಹುತೇಕ ಜನರು ದೃಢವಾಗಿ ನಂಬಿರುವಂತೆ ಕಾರಣಾಂತರಗಳಿಂದ ಪ್ರಾಣಾಪಾಯದ ಸ್ಥಿತಿಯಲ್ಲಿರುವ ವ್ಯಕ್ತಿಯೊಬ್ಬರ ಜೀವವನ್ನು ಕೇವಲ ವೈದ್ಯರು ಮಾತ್ರ ಉಳಿಸಬಲ್ಲರು ಎನ್ನುವುದು ನಿಜವಲ್ಲ. ಇಂತಹ ವ್ಯಕ್ತಿಗಳ ಜೀವವನ್ನು ರಕ್ತದಾನದ ಮೂಲಕ ಉಳಿಸಲು ನಿಮ್ಮಿಂದಲೂ ಸಾಧ್ಯ. ನೀವು ಸ್ವಯಂಪ್ರೇರಿತವಾಗಿ ನೀಡುವ ಒಂದು ಯೂನಿಟ್‌ ರಕ್ತವು ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂವರು ವ್ಯಕ್ತಿಗಳ ಪ್ರಾಣ ಉಳಿಸಬಲ್ಲದು. ಇದೇ ಉದ್ದೇಶಕ್ಕಾಗಿಯೇ ರಕ್ತದಾನ ಮಾಡಿ ಮತ್ತು ಪದೇ ಪದೇ ಮಾಡುತ್ತಿರಿ.

ಆರೋಗ್ಯವಂತ ವ್ಯಕ್ತಿಯ ಶರೀರದಲ್ಲಿ ಸುಮಾರು ಐದರಿಂದ ಆರು ಲೀಟರ್‌ಗಳಷ್ಟು ಪ್ರಮಾಣದ ರಕ್ತ ಇರುತ್ತದೆ. ಕೆಲವೊಂದು ಪೂರ್ವಯೋಜಿತ ವೈದ್ಯಕೀಯ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಪ್ರಸವದ ಸಂದರ್ಭದಲ್ಲಿ ಮತ್ತು ಕಾರಣಾಂತರಗಳಿಂದ  ರಕ್ತ ಅಥವಾ ರಕ್ತದಲ್ಲಿರುವ ಘಟಕಗಳ ಪ್ರಮಾಣವು ಕಡಿಮೆಯಾದಾಗ, ಮನುಷ್ಯನ ಆರೋಗ್ಯ ಹದಗೆಡುವ ಅಥವಾ ಪ್ರಾಣಕ್ಕೆ ಸಂಚಕಾರ ಸಂಭವಿಸುವ ಸಾಧ್ಯತೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ತ್ವರಿತವಾಗಿ ಮತ್ತು ಸಂದಭೋìಚಿತವಾಗಿ ಪೂರ್ಣ ರಕ್ತವನ್ನು ಅಥವಾ ರಕ್ತದ ಘಟಕಗಳನ್ನು ಮರುಪೂರಣ ಮಾಡುವ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರುಮಾಡಬಹುದಾಗಿದೆ. ಆದರೆ ಇಂತಹ ಸಂದರ್ಭಗಳಲ್ಲಿ ಆವಶ್ಯಕ ಪ್ರಮಾಣದ ಹಾಗೂ ಸುರಕ್ಷಿತ ರಕ್ತ ದೊರೆಯದೇ ಇದ್ದಲ್ಲಿ, ರೋಗಿಯು ಪ್ರಾಣಾಪಾಯಕ್ಕೆ ಈಡಾಗುವ ಹಾಗೂ ಮೃತಪಡುವ ಸಾಧ್ಯತೆಗಳು ಹೆಚ್ಚುತ್ತವೆ.

ಪ್ರಸ್ತುತ ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆಯ ಪ್ರಮಾಣವು ಪೂರೈಕೆಯ ಪ್ರಮಾಣಕ್ಕಿಂತ ಸಾಕಷ್ಟು ಹೆಚ್ಚಿದೆ. ಜಾಗತಿಕ ಮಟ್ಟದಲ್ಲಿ ವಾರ್ಷಿಕ 108 ಮಿಲಿಯನ್‌ ಯೂನಿಟ್‌ ರಕ್ತ ಸಂಗ್ರಹವಾಗುತ್ತಿದೆ. ಪ್ರತಿಯೊಂದು ದೇಶದ ಶೇ. 1ರಷ್ಟು ಪ್ರಜೆಗಳು ನಿಯಮಿತವಾಗಿ ರಕ್ತದಾನ ಮಾಡುತ್ತಿದ್ದಲ್ಲಿ, ಆಯಾ ದೇಶದ ರಕ್ತದ ಬೇಡಿಕೆಯನ್ನು ಸುಲಭದÇÉೇ ಪೂರೈಸಬಹುದಾಗಿದೆ. ಜಗತ್ತಿನ 62 ರಾಷ್ಟ್ರಗಳು ತಮ್ಮ ಬೇಡಿಕೆಯ ಶೇ. 100ರಷ್ಟು ರಕ್ತವನ್ನು ಸ್ವಯಂಪ್ರೇರಿತವಾಗಿ ಮತ್ತು ಫ‌ಲಾಪೇಕ್ಷೆಯಿಲ್ಲದೇ ನೀಡುವ ದಾನಿಗಳಿಂದ ಸಂಗ್ರಹಿಸುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತಿನ ಪ್ರತಿಯೊಂದು ರಾಷ್ಟ್ರವೂ 2020ಕ್ಕೆ ಮುನ್ನ ಸ್ವಯಂಪ್ರೇರಿತ ದಾನಿಗಳಿಂದಲೇ ಸಂಗ್ರಹಿಸುವ ಉದ್ದೇಶವನ್ನು ಹೊಂದಿದೆ. ನೀವು 18ರಿಂದ 60 ವಯಸ್ಸಿನವರಾಗಿದ್ದು ಆರೋಗ್ಯವಂತರಾಗಿದ್ದಲ್ಲಿ, ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ನಮ್ಮ ದೇಶದಲ್ಲಿ ಕಂಡುಬರುತ್ತಿರುವ ರಕ್ತದ ಕೊರತೆಯನ್ನು ನೀಗಿಸಬಹುದಾಗಿದೆ. ತತ್ಪರಿಣಾಮವಾಗಿ ಅಸಂಖ್ಯ ರೋಗಿಗಳ ಪ್ರಾಣ ಉಳಿಸುವುದರೊಂದಿಗೆ, ಒಂದಿಷ್ಟು ಪುಣ್ಯವನ್ನೂ ಗಳಿಸಬಹುದಾಗಿದೆ!
ವಿಶ್ವ ರಕ್ತದಾನಿಗಳ ದಿನ
ವಿಶ್ವ ರಕ್ತದಾನಿಗಳ ದಿನವನ್ನು ಜೂನ್‌ 14, 2004ರಂದು ಮೊತ್ತಮೊದಲಿಗೆ ಆಚರಿಸಲಾಗಿತ್ತು. ತದನಂತರ ಪ್ರಪಂಚದ ಪ್ರತಿಯೊಂದು ರಾಷ್ಟ್ರಗಳಲ್ಲಿ ಇದನ್ನು ವರ್ಷಂಪ್ರತಿ ಆಚರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ, ಅಂತಾರಾಷ್ಟ್ರೀಯ ರೆಡ್‌ ಕ್ರಾಸ್‌ ಸಂಸ್ಥೆ, ರೆಡ್‌ ಕ್ರೆಸೆಂಟ್‌ ಸೊಸೈಟೀಸ್‌, ರಕ್ತದಾನಿಗಳ ಅಂತಾರಾಷ್ಟ್ರೀಯ ಒಕ್ಕೂಟ ಮತ್ತು ಅಂತಾರಾಷ್ಟ್ರೀಯ ರಕ್ತಪೂರಣ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ವಿಶ್ವಾದ್ಯಂತ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ರಕ್ತದಾನದ ಮಹತ್ವ ಹಾಗೂ ಆವಶ್ಯಕತೆ, ಸುರಕ್ಷಿತ ರಕ್ತ ಹಾಗೂ ರಕ್ತದ ಉತ್ಪನ್ನಗಳು ಮತ್ತು ಪ್ರತಿಫ‌ಲಾಪೇಕ್ಷೆ ಇಲ್ಲದೇ ಸ್ವಯಂಪ್ರೇರಿತ ರಕ್ತದಾನ ಮಾಡುವ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳೊಂದಿಗೆ ವಿಶೇಷ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಅಂತೆಯೇ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅಸಂಖ್ಯ ಜನರ ಪ್ರಾಣಗಳನ್ನು ಉಳಿಸಿರುವ ರಕ್ತದಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಲಾಗುತ್ತದೆ.
ಕಾರ್ಲ್ ಲ್ಯಾಂಡ್‌ ಸ್ಟೈನರ್‌ ನಾಮಾಂಕಿತ ವೈದ್ಯ ಹಾಗೂ ಬಯಾಲಜಿÓr… ಇವರ ಜನ್ಮದಿನವನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಆಧುನಿಕ ರಕ್ತಪೂರಣ ವಿಧಾನದ ಅನ್ವೇಷಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದ ಈ ವೈದ್ಯರು, 1901ರಲ್ಲಿ ಮನುಷ್ಯನ ರಕ್ತದ ಎ, ಬಿ ಮತ್ತು ಒ ಗುಂಪುಗಳನ್ನು ಪತ್ತೆಹಚ್ಚಿದ ಮತ್ತು ಆಧುನಿಕ ಪದ್ಧತಿಯ ಪ್ರಭೇದಗಳನ್ನು ಅಭಿವೃದ್ಧಿಪಡಿಸಿದ ಸಂಶೋಧಕರೂ ಹೌದು. 1937ರಲ್ಲಿ ಅಲೆಕ್ಸಾಂಡರ್‌ ವೈನರ್‌ ಎನ್ನುವ ಸಹ ಸಂಶೋಧಕರೊಂದಿಗೆ  ರೀಸಸ್‌ ಫ್ಯಾಕ್ಟರ್ಸ್‌ ಎನ್ನುವ ಅಂಶವನ್ನು ಗುರುತಿಸುವ ಮೂಲಕ, ರಕ್ತವನ್ನು ಪಡೆಯುವ ರೋಗಿಗಳ ಪ್ರಾಣಕ್ಕೆ ಯಾವುದೇ ಅಪಾಯ ಸಂಭವಿಸದಂತೆ ರಕ್ತವನ್ನು ಪೂರಣ ಮಾಡಲು ಇವರು ಕಾರಣಕರ್ತರೆನಿಸಿದ್ದರು.
ಈ ವೈದ್ಯರ ಅಸಾಧಾರಣ ಸಾಧನೆ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಲ್ಲಿಸಿದ್ದ ಕೊಡುಗೆಯನ್ನು ಪರಿಗಣಿಸಿ, ಇವರ ಜನ್ಮದಿನವನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ.
ನಿಮಗಿದು ತಿಳಿದಿರಲಿ
ಪೂರ್ವಯೋಜಿತ ವೈದ್ಯಕೀಯ ಚಿಕಿತ್ಸೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರಕ್ತವು ಪ್ರಮುಖ ಸಾಧನ ಸಂಪತ್ತು ಎನಿಸುತ್ತದೆ. ಅಂತೆಯೇ ರಕ್ತವು ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಗಳ ಜೀವಿತಾವಧಿಯನ್ನು ವೃದ್ಧಿಸುವುದರೊಂದಿಗೆ, ಅವರ ಆರೋಗ್ಯ ಮತ್ತು ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಇದಲ್ಲದೇ ಶಸ್ತ್ರಚಿಕಿತ್ಸೆ ಹಾಗೂ ಸಂಕೀರ್ಣ ವೈದ್ಯಕೀಯ ಚಿಕಿತ್ಸೆಗಳಲ್ಲಿ ಅತ್ಯಂತ ಉಪಯುಕ್ತವೆನಿಸುತ್ತದೆ. ಇದಲ್ಲದೇ ಪ್ರಾಕೃತಿಕ ವಿಕೋಪ, ರಸ್ತೆ ಮತ್ತಿತರ ಅಪಘಾತಗಳು, ಭಯೋತ್ಪಾದಕ ಕೃತ್ಯಗಳು ಮತ್ತು ಯುದ್ಧ ಇತ್ಯಾದಿ ಸಂದರ್ಭಗಳಲ್ಲಿ ರಕ್ತವು ಜೀವರಕ್ಷಕ ಎನಿಸುತ್ತದೆ. ಆದರೆ ಇಂತಹ ಪರಿಸ್ಥಿತಿಗಳನ್ನು ವೈದ್ಯರು ಸಮರ್ಥವಾಗಿ ನಿಭಾಯಿಸಲು ಸುರಕ್ಷಿತ ಹಾಗೂ ಆವಶ್ಯಕ ಪ್ರಮಾಣದ ರಕ್ತದ ಪೂರೈಕೆ ಅನಿವಾರ್ಯವೆನಿಸುತ್ತದೆ. ಇದಕ್ಕಾಗಿ ಸರಕಾರಿ ಮತ್ತು ಸ್ವಯಂಸೇವಾ ಸಂಘಟನೆಗಳು ನಡೆಸುವ ರಕ್ತನಿಧಿ (ಬ್ಲಿಡ್‌ ಬ್ಯಾಂಕ್‌)ಗಳಲ್ಲಿ ಆವಶ್ಯಕ ಸೌಲಭ್ಯಗಳೊಂದಿಗೆ ಪ್ರತಿಫ‌ಲಾಪೇಕ್ಷೆ ಇಲ್ಲದೇ ಸ್ವಯಂಪ್ರೇರಿತ ರಕ್ತದಾನ ಮಾಡುವ ದಾನಿಗಳ ಸಹಕಾರದ ಆವಶ್ಯಕತೆಯಿದೆ. ಆರೋಗ್ಯವಂತ ವ್ಯಕ್ತಿಯೊಬ್ಬನು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅನೇಕ ಜನರ ಪ್ರಾಣಗಳನ್ನು ಉಳಿಸುವುದರೊಂದಿಗೆ, ಇಂತಹ ದಾನಿಗಳು ತಮ್ಮ ವೈಯುಕ್ತಿಕ ಆರೋಗ್ಯದ ಮಟ್ಟವನ್ನೂ ಉನ್ನತಸ್ತರದಲ್ಲಿ ಕಾಪಾಡಿಕೊಳ್ಳಬಹುದಾಗಿದೆ.
ಬೇಡಿಕೆ – ಪೂರೈಕೆ
ಭಾರತದ ಜನಸಂಖ್ಯೆಯು 125 ಕೋಟಿಯನ್ನು 
ಮೀರಿದ್ದು, ದೇಶದಲ್ಲಿ ರಕ್ತದ ಬೇಡಿಕೆಯ ಪ್ರಮಾಣವು 
ವಾರ್ಷಿಕ ಸುಮಾರು 5 ಕೋಟಿ ಯೂನಿಟ್‌ ಆಗಿದೆ. ಆದರೆ ರಕ್ತದ ಪೂರೈಕೆಯ ಪ್ರಮಾಣವು ಕೇವಲ 2. 5 ಕೋಟಿ ಯೂನಿಟ್‌ ಎಂದಲ್ಲಿ ನೀವೂ ನಂಬಲಾರಿರಿ. ಇದಕ್ಕೂ ಮಿಗಿಲಾಗಿ ಸೂಕ್ತ ಸಮಯದಲ್ಲಿ ಸುರಕ್ಷಿತ ಮತ್ತು ಆವಶ್ಯಕ ಪ್ರಮಾಣದ ರಕ್ತ ಲಭ್ಯವಾಗದ ಕಾರಣದಿಂದಾಗಿ ಅನೇಕ ರೋಗಿಗಳು ಮೃತಪಡುತ್ತಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಬೇಕಿದ್ದಲ್ಲಿ ನಮ್ಮ ದೇಶದ ಯುವಜನತೆ ನಿಯಮಿತವಾಗಿ ಹಾಗೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕಿದೆ. ಅರ್ಥಾತ್‌, ಈ ವರ್ಷದ ವಿಶ್ವ ರಕ್ತದಾನಿಗಳ ದಿನದ ಘೋಷ ವಾಕ್ಯವಾದ “ರಕ್ತದಾನ ಮಾಡಿ, ಈಗಲೇ ಮಾಡಿ, ಪದೇಪದೇ ಮಾಡಿ’ ಎನ್ನುವುದನ್ನು ಅಕ್ಷರಶಃ ಪರಿಪಾಲಿಸಬೇಕಿದೆ.

n ಡಾ| ಸಿ. ನಿತ್ಯಾನಂದ ಪೈ 

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.