ಮರೆಯುವುದಾದರೂ ಹೇಗೆ‌ ಆ ಕರಾಳ ದಿನವನ್ನು…

ಮಂಗಳೂರಿನಲ್ಲಿ ಸಂಭವಿಸಿದ ಏರ್‌ ಇಂಡಿಯಾ ಮಹಾ ವಿಮಾನ ದುರಂತ: ನಾಳೆಗೆ 11 ವರ್ಷ

Team Udayavani, May 21, 2021, 6:20 AM IST

ಮರೆಯುವುದಾದರೂ ಹೇಗೆ‌ ಆ ಕರಾಳ ದಿನವನ್ನು…

ಏರ್‌ ಇಂಡಿಯಾ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಮೇ 22ರಂದು 11 ವರ್ಷ ಪೂರ್ಣವಾಗುತ್ತಿದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದು ಎಂದೆಂದೂ ಮರೆಯಲಾಗದ ದುರ್ಘ‌ಟನೆಯಾಗಿದೆ.

2010ರ ಮೇ 22ರ ಮುಂಜಾನೆ ಸಂಭವಿಸಿದ ಈ ಮಹಾದುರಂತದಲ್ಲಿ  ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಬದುಕುಳಿದಿದ್ದರು.

ಮೇ 22ಮುಂಜಾನೆ :

ದುಬಾೖಯಿಂದ ಮಂಗಳೂರಿಗೆ ಬಂದ ವಿಮಾನ ಎಲ್ಲ ಸುರಕ್ಷಾ ಸಂಕೇತಗಳ ವಿನಿಮಯ ದೊಂದಿಗೆ ಇಳಿದಿತ್ತು. ಆದರೆ ರನ್‌ವೇಯಲ್ಲಿ ನಿಲ್ಲಬೇಕಾದ ವಿಮಾನವು ನೇರವಾಗಿ ಮುಂದಕ್ಕೆ ಚಲಿಸುತ್ತಲೇ ಸೂಚನಾ ಗೋಪುರದ ಕಂಬಗಳಿಗೆ ಢಿಕ್ಕಿಯಾಗಿ, ಅದನ್ನು ತುಂಡರಿಸಿ ಆಳ ಪ್ರದೇಶಕ್ಕೆ ಉರುಳಿ ಬಿತ್ತು. ಮುಖ್ಯ ಪೈಲಟ್‌ನ ನಿರ್ಲಕ್ಷé, ಸಹ ಪೈಲಟ್‌ನ ಸಲಹೆ ಪಾಲಿಸದೆ ಇದ್ದದ್ದೇ ಈ ದುರ್ಘ‌ಟನೆಗೆ ಕಾರಣ ಎಂದು ಅನಂತರ ನಡೆದ ತನಿಖೆಯಲ್ಲಿ ತಿಳಿದುಬಂದಿತ್ತು. ಬಹುತೇಕ ಶವಗಳು ಸುಟ್ಟುಕರಕಲಾಗಿದ್ದ ಕಾರಣ ಗುರುತು ಪತ್ತೆ ಅಸಾಧ್ಯವಾಗಿತ್ತು.

ಅಂದು ಬದುಕುಳಿದ ಅದೃಷ್ಟವಂತರು :

ತಣ್ಣೀರುಬಾವಿಯ ಪ್ರದೀಪ್‌ (ಅಂದಿನ ಪ್ರಾಯ 28), ಹಂಪನ ಕಟ್ಟೆಯ ಮಹಮ್ಮದ್‌ ಉಸ್ಮಾನ್‌ (49), ವಾಮಂಜೂರಿನ ಜ್ಯೂಯೆಲ್‌ ಡಿ’ಸೋಜಾ (24), ಕೇರಳ ಕಣ್ಣೂರು ಕಂಬಿಲ್‌ನ ಮಾಹಿನ್‌ ಕುಟ್ಟಿ (49), ಕಾಸರಗೋಡು ಉದುಮ ಕುಲಿಕುನ್ನು ನಿವಾಸಿ ಕೃಷ್ಣನ್‌ (37), ಉಳ್ಳಾಲದ ಉಮ್ಮರ್‌ ಫಾರೂಕ್‌ (26), ಪುತ್ತೂರು ಸಾಮೆತ್ತಡ್ಕದ ಅಬ್ದುಲ್ಲಾ (37), ಮಂಗಳೂರು ಕೆಎಂಸಿ ವಿದ್ಯಾರ್ಥಿನಿ ಬಾಂಗ್ಲಾದ ಸಬ್ರಿನಾ (23) ಪವಾಡಸದೃಶರಾಗಿ ಬದುಕುಳಿದ ಅದೃಷ್ಟವಂತರು. ಇವರಲ್ಲಿ ಸಬ್ರಿನಾ ಮಾತ್ರ ಗಂಭೀರ ಗಾಯಗೊಂಡಿದ್ದರು.

ಸ್ಮಾರಕ ಪಾರ್ಕ್‌ :

ದುರಂತ ಸಂಭವಿಸಿದ ಸ್ಥಳದಲ್ಲೇ ಮೃತರ ಹೆಸರುಗಳನ್ನು ಶಿಲೆಗಳಲ್ಲಿ ಬರೆದು ತಾತ್ಕಾಲಿಕ ಸ್ಮಾರಕ ನಿರ್ಮಿಸಲಾಗಿತ್ತು. ಆದರೆ ಆ ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ವಿವಾದ ಉಂಟಾಗಿತ್ತು ಹಾಗೂ ತಾತ್ಕಾಲಿಕ ಸ್ಮಾರಕವು ಕಿಡಿಗೇಡಿಗಳಿಂದಾಗಿ ಪುಡಿಯಾಗಿತ್ತು. ಅಂತಿಮವಾಗಿ 3 ವರ್ಷಗಳ ಹಿಂದೆ ಕೂಳೂರು ಸಮೀಪದ ತಣ್ಣೀರುಬಾವಿಗೆ ತೆರಳುವ ರಸ್ತೆ ಪಕ್ಕದ 90 ಸೆಂಟ್ಸ್‌ ಜಾಗದಲ್ಲಿ 22/5 ಹೆಸರಿನಲ್ಲಿ “ಸ್ಮಾರಕ ಪಾರ್ಕ್‌’ ನಿರ್ಮಿಸಲಾಗಿದೆ. ಅಲ್ಲಿ ಪ್ರತೀ ವರ್ಷ ಮೇ 22ರಂದು ಇಲ್ಲಿ ದುರಂತದಲ್ಲಿ  ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

ಎರಡು ತಿಂಗಳ ಹಿಂದೆ ರದ್ದಾದ ದೂರು, ವಿಚಾರಣೆ! :

ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್‌ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರು ಮತ್ತು ವಿಚಾರಣೆಯನ್ನು ಹೈಕೋರ್ಟ್‌ ಎರಡು ತಿಂಗಳುಗಳ ಹಿಂದೆಯಷ್ಟೇ ರದ್ದುಪಡಿಸಿತ್ತು. ವಿಮಾನ ದುರಂತ ಕುರಿತಂತೆ 2012ರ ಮಾ. 6ರಂದು ಮಂಗಳೂರು ಮೂಲದ “812 ಫೌಂಡೇಶನ್‌’ ಖಾಸಗಿ ದೂರು ದಾಖಲಿಸಿತ್ತು. ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ಐಸಿಎಒ) ಮಾನದಂಡಗಳ ಅನುಸಾರ ಮಂಗಳೂರು ವಿಮಾನ ನಿಲ್ದಾಣ ಕಾರ್ಯನಿರ್ವಹಣೆಗೆ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆ ನಡೆಯುತ್ತಿತ್ತು. ಏರ್‌ ಇಂಡಿಯಾ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.