National Tourism Day: 16ನೇ ಶತಮಾನದ ಮಿರ್ಜಾನ್ ಕೋಟೆ!


Team Udayavani, Jan 25, 2024, 11:49 AM IST

National Tourism Day: 16ನೇ ಶತಮಾನದ ಮಿರ್ಜಾನ್ ಕೋಟೆ!

ಈ ಬಾರಿ ಸ್ನೇಹಿತರೆಲ್ಲಾ ಸೇರಿ ಯಾವ ಕಡೆ ಪಯಣ ಮಾಡೋಣ ಎಂದಾಗ. ನಮ್ಮ ಚರ್ಚೆಯಲ್ಲಿ ಕುಮಟಾದ ಮಿರ್ಜಾನ್ ಕೋಟೆ ಗೂಗಲ್ ನಲ್ಲಿ ಕಣ್ಣಿಗೆ ಬಿತ್ತು.ಇನ್ನ್ಯಾಕೆ ತಡ ಎಂದು ನಮ್ಮ ಸವಾರಿ ಕೋಟೆ ಕಡೆಗೆ ಸಾಗಿತು.

ಈ  ಮಿರ್ಜಾನ್ ಕೋಟೆಯು ಉತ್ತರಕನ್ನಡದ (ಕಾರವಾರ) ಕುಮಟಾ ತಾಲೂಕಿನ ಮಿರ್ಜಾನ್ ಗ್ರಾಮದಲ್ಲಿದೆ. ಗೋಕರ್ಣದಿಂದ ಸುಮಾರು 23 ಕಿಮಿ ದೂರದಲ್ಲಿರುವ ಮಿರ್ಜಾನ್ ಕೋಟೆ, ಕುಮಟಾ ಪಟ್ಟಣದಿಂದ 10.5 ಕಿಮಿ ದೂರದಲ್ಲಿದೆ. ನಾವು ಕಾಣಬಹುದಾದ ಉತ್ತಮ ಸ್ಥಿತಿಯಲ್ಲಿರುವ ಕೋಟೆಗಳಲ್ಲಿ ಇದು ಕೂಡಾ ಒಂದಾಗಿದೆ. ಇದು ಅಘನಾಶಿನಿ ನದಿಯ ತಟದಲ್ಲಿದ್ದು ಅದರಾಚೆಗೆ ಅರಬ್ಬೀ ಸಮುದ್ರವನ್ನು ಹೊಂದಿದೆ. ಈ ಕೋಟೆಯಲ್ಲಿ ಸುಮಾರು 11.5 ಎಕರೆಗಳಷ್ಟು ವಿಸ್ತಾರವಾದ ಪ್ರದೇಶದಲ್ಲಿ ಈ ಕೋಟೆಯಿದ್ದು ನೋಡಲು ತುಂಬಾ ಆಕರ್ಷಕವಾಗಿದೆ. ಈ ಕೋಟೆಯು ಕರಾವಳಿ ಪ್ರದೇಶದಲ್ಲಿ ಕಂಡುಬರುವ ಜಂಬಿಟ್ಟಿಗೆ ಕಲ್ಲಿನಿಂದ (ಲ್ಯಾಟರೈಟ್) ನಿರ್ಮಾಣವಾಗಿದ್ದು ಇಂದಿಗೂ ಅದರ ಗೋಡೆಗಳು ಗಟ್ಟಿಯಾಗಿವೆ. ಇದರಲ್ಲಿ ಒಂದು ಮುಖ್ಯ ದ್ವಾರಗಳಿದ್ದು ಮೂರು ಉಪ ದ್ವಾರಗಳು ಕಂಡುಬರುತ್ತವೆ. ಕೋಟೆಯ ಸುತ್ತ ತಗ್ಗು ಪ್ರದೇಶವಿದ್ದು ಹಲವಾರು ಗುಪ್ತದ್ವಾರಗಳನ್ನು ಹೊಂದಿದೆ. ಅದಲ್ಲದೇ ಇಲ್ಲಿ ಹಲವಾರು ಕಂದಕಗಳು, ದರ್ಬಾರ ಹಾಲ್, ರಾಣಿಯ ಸಿಂಹಾಸನ, ಪಾಕಶಾಲೆ, ಮಾರುಕಟ್ಟೆ ದೇವಸ್ಥಾನ, ಮಸಿದಿಯಂತಹ ಅವಶೇಷಗಳು ಮತ್ತು ಈ ಕೋಟೆಯಲ್ಲಿ 9 ಭಾವಿಗಳನ್ನು ನಾವು ಕಾಣಬಹುದಾಗಿದೆ. ಅದಲ್ಲದೇ ಕೋಟೆಯ ಧ್ವಜ ಸ್ತಂಭ, ಕಾವಲು ಗೋಪುರ ಅಲ್ಲಿಂದ ಕಾಣುವ ಅಘನಾಶಿನಿ ನದಿ ನೋಡುಗರ ಗಮನವನ್ನು ಸೆಳೆಯುತ್ತದೆ.

ಈ ಕೋಟೆಯನ್ನ  ನಾವು ಹೆಚ್ಚಾಗಿ ಮಳೆಗಾಲದಲ್ಲಿ ನೋಡಿದರೆ ಇದರ ಸುಂದರತೆಯು ಇನ್ನಷ್ಟು ಹೆಚ್ಚಿಸುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲಾ.

ಇದನ್ನೂ ಓದಿ: National tourism day: ಶಿಶಿಲ ಬೆಟ್ಟಕ್ಕೆ ಚಾರಣ ಹೊರಟ ಕ್ಷಣ..

ಇನ್ನು ಈ ಕೋಟೆಯ ಬಗ್ಗೆ ಹಲವಾರು ಇತಿಹಾಸಗಳಿವೆ ಕರ್ನಾಟಕದ ಇತಿಹಾಸದಲ್ಲಿ ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿಗೊಂಡಿದ್ದ ಸಾಳುವ ವಂಶದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಈ ಕೋಟೆಯನ್ನು 16 ನೇ ಶತಮಾನದಲ್ಲಿ ನಿರ್ಮಿಸಿದ್ದಾಳೆ ಎಂದು ಇತಿಹಾಸದ ಪುಟಗಳಲ್ಲಿ ಉಲ್ಲೇಖಿಸಲಾಗಿದೆ. ಈ ಕೋಟೆಯನ್ನು ಕಟ್ಟಿರುವವರ ಕುರಿತು ಹಲವಾರು ಭಿನ್ನಾಭಿಪ್ರಾಯಗಳಿದ್ದು, ಇಬ್ನಬಟೂಟ ಎಂಬ ನವಾಯತ ರಾಜ 1200 ರಲ್ಲಿ ಕಟ್ಟಿರುವುದಾಗಿ ಹೇಳುತ್ತಾರೆ. ಮತ್ತೊಂದು ವಾದದ ಪ್ರಕಾರ ಈ ಕೋಟೆಯನ್ನು ಬಿಜಾಪುರದ ಸುಲ್ತಾನ ಶರೀಫ್ ಉಲ್ ಮುಲ್ಕ್ ಇದನ್ನು 1608-1640 ರ ಕಾಲದಲ್ಲಿ ಕುಮಟಾ ಪಟ್ಟಣ ರಕ್ಷಣೆ ದೃಷ್ಟಿಯಿಂದ ಕಟ್ಟಿದನೆಂದು ಹೇಳುತ್ತಾರೆ. ಹೆಚ್ಚಿನವರ ಪ್ರಕಾರ ಇದು ಗೇರುಸೊಪ್ಪೆಯ ರಾಣಿ ಕಟ್ಟಿರುವುದು ಎಂಬ ಮಾತು ಸ್ಥಳೀಯವಲಯದಲ್ಲಿದೆ. ರಾಣಿ ಚೆನ್ನಭೈರಾದೇವಿಯು ವಿಜಯನಗರ ಅರಸರ ಸಾಮಂತ ರಾಣಿಯಾಗಿದ್ದು ಸುಮಾರು 54 ವರ್ಷಗಳ ಕಾಲ ಈ ಪ್ರಾಂತ್ಯವನು ರಾಜ್ಯಭಾರ ಮಾಡಿರುವುದು ವಿಶೇಷವಾಗಿದೆ.

ಈ ರಾಣಿಯ ಆಳ್ವಿಕೆಯ ಅವಧಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ಇತ್ತು. ಈ ಪ್ರದೇಶವು ಅಕ್ಕಿ ಮತ್ತು ಕಾಳುಮೆಣಸಿನ ವ್ಯಾಪಾರದ ಪ್ರಮುಖ ಕೇಂದ್ರವಾಗಿತ್ತು ಎಂದೆನ್ನಬಹುದು. ಈ ಕೋಟೆಗೆ ಪ್ರತಿವರ್ಷವು ಕೂಡಾ ಹಲವಾರು ಪ್ರವಾಸಿಗರು ಬಂದು ಹೋಗುತ್ತಾರೆ ಎಂದರೇ ಅಷ್ಟು ಸುಂದರತೇ ಮತ್ತು ಆಕರ್ಷಣೆ ಈ ಕೋಟೆಗೆ ಇದೆ ಅಂದು ಹೇಳಬಹುದು.

ಹೀಗೆ ನಾವು ನಮ್ಮ ಪ್ರವಾಸವನ್ನ ಈ ಅದ್ಭುತವಾದ ಮಿರ್ಜಾನ್ ಕೋಟೆ ಯನ್ನು ನೋಡಿ ಮನಸ್ಸು ಮತ್ತು ಕಣ್ಣಿಗೆ ಆನಂದವನ್ನ ತಂದುಕೊಂಡೇವು.

-ವಿದ್ಯಾ ( ಎಂ. ಜಿ. ಎಂ ಕಾಲೇಜು ಉಡುಪಿ )

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.