ಯೋಗ ಪ್ರೋಡೈಜಿ ಈಶ್ವರ್‌ ಶರ್ಮಾಗೆ ಪಾಯಿಂಟ್ಸ್‌ ಆಫ್ ಲೈಟ್‌ ಪ್ರಶಸ್ತಿ


Team Udayavani, Jun 19, 2021, 10:35 PM IST

Points of Light Award

ಲಂಡನ್‌: ಲಂಡನ್‌ನ ಸೇವೇನೋಕ್ಸ್‌ ಕೆಂಟ್‌ನಲ್ಲಿರುವ ಮೂಲತಃ ಮೈಸೂರಿನವರಾದ ಡಾ| ವಿಶ್ವನಾಥ್‌ ಮತ್ತು ಡಾ| ಮಮತಾ ಅವರ ಪುತ್ರ 11 ವರ್ಷದ ಈಶ್ವರ್‌ ಶರ್ಮಾ ಆಟಿಸಂ ಮತ್ತು ಎಡಿಎಚ್‌ಡಿ ಹೊಂದಿರುವ ಯುವ ಯೋಗ ಚಾಂಪಿಯನ್‌  ಪಾಯಿಂಟ್ಸ್‌ ಆಫ್ ಲೈಟ್‌ ಪ್ರಶಸ್ತಿಗೆ ಭಾಜನರಾಗಿದ್ದು, ಯುಕೆ ಪ್ರಧಾನಿಯವರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತಮ್ಮ ಸಾಧನೆಗಳಿಂದ ಸಮಾಜದಲ್ಲಿ ಬದಲಾವಣೆ ತರಬಲ್ಲ ಮತ್ತು ಪ್ರೇರಣೆಯಾಗಬಲ್ಲವರಿಗೆ 2014ರಿಂದ ಈ ಪ್ರಶಸ್ತಿಯನ್ನು ವಿತರಿಸಲಾಗುತ್ತಿದೆ. ಯುಕೆಯ ಪ್ರಧಾನಿಯವರಿಂದ ಈ ಪ್ರಶಸ್ತಿ ಪಡೆದವರಲ್ಲಿ ಈಶ್ವರ್‌ 1646ನೇಯವರಾಗಿದ್ದು, ಜೂ. 1ರಂದು ಪ್ರಶಸ್ತಿ ಸ್ವೀಕರಿಸಿದರು.

ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್‌ ಅವಧಿಯಲ್ಲಿ 14 ದೇಶಗಳ 40 ಮಕ್ಕಳಿಗೆ ದೈನಂದಿನ ಯೋಗ ತರಗತಿಗಳನ್ನು ನಡೆಸಿಕೊಟ್ಟಿರುವ ಈಶ್ವರ್‌ ಶರ್ಮಾ, ಈಗಾಗಲೇ ಮೂರು ಬಾರಿ ವಿಶ್ವ ಯೋಗ ಚಾಂಪಿಯನ್‌ ಆಗಿದ್ದಾರೆ. ಯೋಗದಿಂದ ಇತರ ಮಕ್ಕಳಿಗೆ, ವಿಶೇಷವಾಗಿ ತನ್ನಂತಹ ವಿಶೇಷ ಅಗತ್ಯವಿರುವವರಿಗೆ ಸಹಾಯ ಮಾಡಲು ಅವರು, ಉಚಿತ ಆನ್‌ಲೈನ್‌ ತರಗತಿಗಳನ್ನು ಆಯೋಜಿಸಲು ಪ್ರಾರಂಭಿಸಿದರು.

ಈಶ್ವರ್‌ ಅವರಿಗೆ ಪತ್ರ ಬರೆದಿರುವ ಯುಕೆ ಪ್ರಧಾನಿ ಬೋರಿಸ್‌ ಜಾನ್ಸನ್‌, ಲಾಕ್‌ ಡೌನ್‌ ಸಮಯದಲ್ಲಿ ನೀವು ಜಾಗತಿಕವಾಗಿ ನೂರಾರು ಮಕ್ಕಳಿಗೆ ಯೋಗದ ಸಂತೋಷವನ್ನು ತಂದಿದ್ದೀರಿ. ವಿಶೇಷ ಅಗತ್ಯವಿರುವ ಮಕ್ಕಳಿಗೆ ನೀವು ನೀಡುತ್ತಿರುವ ಚಟುವಟಿಕೆಯನ್ನು ಆನಂದಿಸಲು ಮತ್ತು ಉತ್ಕೃಷ್ಟಗೊಳಿಸಲು ಸಹಾಯ ಮಾಡಿದ್ದೀರಿ ಎಂದು ಕೇಳಿ ನನಗೆ ವಿಶೇಷವಾಗಿ ಸ್ಫೂರ್ತಿ ದೊರಕಿತಂದಂತಾಗಿದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರ್‌ ಶರ್ಮಾ, ಈ ಮಾನ್ಯತೆಯಿಂದ ನಾನು ಗೌರವ ಮತ್ತು ವಿನಮ್ರನಾಗಿದ್ದೇನೆ. ಸಾಂಕ್ರಾಮಿಕ ರೋಗದಿಂದಾಗಿ ಮಕ್ಕಳಲ್ಲಿ ಅಭೂತಪೂರ್ವ ಮಾನಸಿಕ ಆರೋಗ್ಯ ಸಮಸ್ಯೆಗಳು ಕಂಡುಬಂದಿವೆ. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸಮತೋಲ ನಗೊಳಿಸಲು ಸಹಾಯ ಮಾಡುವ ಶಿಸ್ತಾಗಿ ಇದು ಯೋಗಕ್ಕೆ ಮಾನ್ಯತೆ ಎಂದು ನಾನು ಭಾವಿಸುತ್ತೇನೆ. ಈ ಪ್ರಶಸ್ತಿಯು ಯೋಗದ ಸಂದೇಶವನ್ನು ಪ್ರಪಂಚದಾದ್ಯಂತ ಹರಡಲು ನನ್ನ ಪ್ರಯತ್ನವನ್ನು ಮುಂದುವರಿಸಲು ಪ್ರೇರೇಪಿಸಿದೆ. ಭವಿಷ್ಯದಲ್ಲಿ ರಾಷ್ಟ್ರೀಯ ಶಾಲಾ ಪಠ್ಯಕ್ರಮದಲ್ಲಿ ಯೋಗ ಮತ್ತು ಧ್ಯಾನವನ್ನು ಅಳವಡಿಸಿಕೊಳ್ಳಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.