ಸಹೋದರತೆಯ ಬಂಧ ಇನ್ನಷ್ಟು ಗಟ್ಟಿಯಾಗಲಿ


Team Udayavani, Aug 11, 2022, 6:10 AM IST

ಸಹೋದರತೆಯ ಬಂಧ ಇನ್ನಷ್ಟು ಗಟ್ಟಿಯಾಗಲಿ

ಬದುಕಿನುದ್ದಕ್ಕೂ ಭರವಸೆಯಾಗಿ ನಿಲ್ಲುವ, ಅಪ್ಪನಂತೆ ಕಾಳಜಿ ಇಟ್ಟುಕೊಂಡಿರುವ, ಅಮ್ಮನಂತೆ ಪ್ರೀತಿ ತೋರುವ, ಗೆಳೆಯನಂತೆ ಕ್ಷಮಿಸುವ ಔದಾರ್ಯದ ಜೀವ ಹೀಗೆಂದಾಗ ನೆನಪಾಗುವ ಹೆಸರೇ ಅಣ್ಣ. ಅಣ್ಣ – ತಂಗಿ ನಡುವೆ ಇರುವ ಬಾಂಧವ್ಯವೇ ಅಂತಹದ್ದು. ವರ್ಷಪೂರ್ತಿ ಜಗಳವಾಡುತ್ತಲೇ ಕಾಲ ಕಳೆಯುವ ಈ ಸಂಬಂಧ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಅನುಬಂಧದ ಸುತ್ತ ನಿಂತಿದೆ. ಸಹೋದರ ಸಹೋದರಿಯರ ನಡುವಿನ ಭ್ರಾತೃತ್ವವನ್ನು ಗಟ್ಟಿಗೊಳಿಸುವ ನೆಲೆಯಲ್ಲಿಯೂ ರಕ್ಷಾ ಬಂಧನ ಮುಖ್ಯವಾಗುತ್ತದೆ.

ಶ್ರಾವಣ ಮಾಸವೆಂಬುದು ಸಂಬಂಧ ಮತ್ತು ಸಂಸ್ಕಾರಗಳಿಗೆ ಮಹತ್ವವನ್ನು ನೀಡುವ ಮಾಸವಾಗಿದ್ದು ಹುಣ್ಣಿಮೆಯ ದಿನದಂದು ಆಚರಿಸುವ ಹಬ್ಬವೇ ರಕ್ಷಾ ಬಂಧನ. ಮನುಷ್ಯ ತನ್ನ ಜೀವನದಲ್ಲಿ ಹಲವು ವಸ್ತುಗಳ ರಕ್ಷಣೆ ಮಾಡಲೇ ಬೇಕು. ಅದು ಹೆಚ್ಚಾಗಿ ಸ್ತ್ರೀ ಸಂಬಂಧಿತವಾದದ್ದು ಎನ್ನುವುದು ವಿಶೇಷ. ಇದರ ಅರ್ಥ ಅವರು ಅಬಲರು ಎಂದಲ್ಲ. ಅವರ ರಕ್ಷಣೆ ಕರ್ತವ್ಯವೆಂದು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರೀತಿಸುವಂತೆ ಕಾಡುವ ಹುಡುಗರಿಂದ ತಪ್ಪಿಸಿಕೊಳ್ಳಲು ರಕ್ಷಾಬಂಧನ ಆಚರಿಸುತ್ತಾರೆ. ರಕ್ಷಾ ಬಂಧನದಲ್ಲಿ ರಾಖೀ ಕಟ್ಟುವ ಸಂಪ್ರದಾಯವಿದ್ದು ಇದು ರಕ್ಷಣೆಯ ಸೂಚಕವೆಂದು ಕರೆಯುತ್ತಾರೆ. ಹಾಗೆಂದು ಸಂಬಂಧಗಳನ್ನು ಕೈಗೆ ಕಟ್ಟಿದ ದಾರದಿಂದಾಗಲಿ ಅಥವಾ ಕೊಡುವ ಉಡುಗೊರೆಯಿಂದಾಗಲಿ ಅಳೆಯಲು ಸಾಧ್ಯವಿಲ್ಲ. ಸಹೋದರತೆಯ ಸಂಬಂಧ ಗಟ್ಟಿಗೊಳ್ಳಲು ನಂಬಿಕೆ, ಪ್ರೀತಿ ಎಂಬ ತಳಪಾಯದ ಅಗತ್ಯವಿದೆ. ಆದರೆ ಇಂದು ಇದು ಕೇವಲ ಸಾಮಾಜಿಕ ಜಾಲತಾಣದ ತೋರ್ಪಡಿಕೆಯ ಹಬ್ಬವಾಗಿ ಆಚರಿಸುತ್ತಿರುವುವುದು ಸಹೋದರತೆಯ ಭ್ರಾತೃತ್ವ ಎಂಬ ವಿಟಮಿನ್‌ ಕೊರತೆ ಯಿಂದ ಈ ಜಗತ್ತೇ ಬಳಲುತ್ತಿದೆ ಎಂಬ ಅರ್ಥವನ್ನು ಇದು ಕಲ್ಪಿಸುತ್ತದೆ. ಮಹಿಳೆ ಸಬಲಳೆಂದು ಮಾರುದ್ಧ ಬೋರ್ಡ್‌ ಹಾಕಿದರಾಯಿತೆ ಆಕೆ ಮನೆಯಿಂದ ಹೊರ ಹೋಗಲು ಇಂದಿಗೂ ಅಂಜುತ್ತಾಳೆ, ಉದ್ಯೋಗ ಕ್ಷೇತ್ರದಲ್ಲಿ ಅಭದ್ರತೆಯ ಭೂತ ಇನ್ನೂ ಆಕೆಯನ್ನು ಬಿಟ್ಟಿಲ್ಲ ಹೀಗೆ ತಾನಿದ್ದ ಪ್ರದೇಶವೆಲ್ಲ ಅಸುರಕ್ಷತೆ ಎಂದು ಆಕೆಗನಿಸುವ ಈ ಕಾಲಘಟಕ್ಕೆ ರಕ್ಷಾಬಂಧನವೆಂಬ ಆಚರಣೆ ಒಂದು ದಿನಕ್ಕೆ ಸೀಮಿತವಾದರೆ ಸಮಸ್ಯೆಗಳಿಗೆ ಪರಿಹಾರ ಕಾಣಲು ಸಾಧ್ಯವೇ ಎಂಬುದನ್ನು ಸಹ ಪ್ರಶ್ನಿಸಬೇಕಾಗುತ್ತದೆ. ಹಾಗಿದ್ದರೂ ಕಟ್ಟುವ ಸಣ್ಣ ದಾರದ ಮೂಲಕವಾದರೂ ಸಹೋದರತೆಯ ಬಂಧ ಉಳಿಯಲೆಂಬ ಚಿಂತನೆಯಲ್ಲಿ ಸಾಗೋಣ.

ಪೌರಾಣಿಕ ಹಿನ್ನೆಲೆ
ಮಹಾಭಾರತದಂತಹ ಪೌರಾಣಿಕ ಹಿನ್ನೆಲೆ ರಕ್ಷಾಬಂಧನಕ್ಕಿದ್ದು ಈ ಜಗತ್ತಿನಲ್ಲಿ ಮೊದಲ ಅಣ್ಣ ತಂಗಿ ಎಂದರೆ ಅದು ಭಗವಾನ್‌ ಶ್ರೀ ಕೃಷ್ಣ ಹಾಗೂ ದ್ರೌಪದಿ. ಶಿಶುಪಾಲನ ತಾಯಿಗೆ ಮಾತನಿತ್ತ ಸಲುವಾಗಿ ಶ್ರೀ ಕೃಷ್ಣ ಆತ ನೂರು ತಪ್ಪು ಮಾಡುವವರೆಗೂ ಮೌನವಹಿಸುತ್ತಾನೆ ಆದರೆ ತುಂಬಿದ ಸಭೆಯಲ್ಲಿ ಶಿಶುಪಾಲ ಕೃಷ್ಣನ ತೇಜೋವಧೆ ಮಾಡಿ ನಿಂದಿಸುತ್ತಾನೆ ಅಲ್ಲಿಗೆ ಆತನ ಪಾಪದ ಕೊಡ ತುಂಬಿತ್ತು. ಕೃಷ್ಣ ತನ್ನ ಸುದರ್ಶನ ಚಕ್ರದಿಂದ ಶಿಶುಪಾಲನ ಅಂತ್ಯ ಮಾಡುತ್ತಾನೆ. ಆದರೆ ಅದೇ ಸಂದರ್ಭ ಸುದರ್ಶನ ಚಕ್ರದ ವೇಗದ ರಭಸ ಕೃಷ್ಣನಿಗೂ ಘಾಸಿ ಮಾಡಿಸುತ್ತದೆ. ಅಲ್ಲಿದ್ದ ನೆರೆದವರು ಕೃಷ`ನ ಗಾಯ ಉಪಶಮನ ಮಾಡಲು ಏನಾದರೂ ಸಿಗಬಹುದೇ ಎಂದು ಯೋಚಿಸುತ್ತಿರುವಾಗ ದ್ರೌಪದಿ ಯೋಚಿಸದೆ ತನ್ನ ಸೀರೆಯ ಸೆರಗನ್ನು ಛೇದಿಸಿ ಕೃಷ್ಣನಿಗೆ ಕಟ್ಟುತ್ತಾಳೆ. ಅಲ್ಲಿಗೆ ರಕ್ಷಾಬಂಧನದ ಅರ್ಥ ಜನ್ಮತಾಳುತ್ತದೆ. ನನಗೆ ರಕ್ಷಣೆಯಿತ್ತ ನಿನ್ನ ರಕ್ಷಣೆಗೆ ಸದಾ ಸಿದ್ಧನೆಂದು ಕೃಷ್ಣ ವಚನವಿಟ್ಟನೆಂದು ಹೀಗೆ ರಕ್ಷಾಬಂಧನ ಜನ್ಮತಾಳಿದೆ ಎಂದು ಹೇಳಲಾಗುತ್ತದೆ.

ರಕ್ಷಾಬಂಧನ ಎಂದರೆ ಪ್ರೀತಿಯ ಭಾವದಿಂದ ತನ್ನ ರಕ್ಷಣೆಯ ಜವಾಬ್ದಾರಿಯನ್ನು ಪರಸ್ಪರ ಹಂಚಿಕೊಳ್ಳುವುದು ಎಂದು ಹೇಳ ಬಹುದು. ದೇಶ ಕಾಯುವ ಯೋಧರು, ಮಾಹಿತಿ ನೀಡಿ ರಕ್ಷಿಸುವ ಮಾಧ್ಯಮ ದವರು, ನಮ್ಮನ್ನು ಒಂದೆಡೆ ಯಿಂದ ಇನ್ನೊಂದೆಡೆಗೆ ಸಾಗಿಸುವ ಸಾರಿಗೆಯವರು, ರೋಗ ಗುಣಪಡಿಸುವ ವೈದ್ಯರು, ಅನ್ನ ನೀಡುವ ರೈತರು, ಅಕ್ಷರ ಕಲಿಸುವ ಗುರುಗಳು, ಆರಕ್ಷಕರು ಇವರೆಲ್ಲ ನಮ್ಮ ರಕ್ಷಕರೇ. ಹೀಗೇ ಹಲವಾರು ಪ್ರಾಮಾಣಿಕ ಶಕ್ತಿಗಳು ನಮ್ಮ ರಕ್ಷಕರೇ ಆಗಿರುವರು. ಇವರೊಂದಿಗೆ ಸಾಧ್ಯ ವಾದಷ್ಟು ಭಾವ ಬಂಧವ ದಾರದೊಂದಿಗೆ ಬೆಸೆಯೋಣ. ಈ ಸಲದ ರಕ್ಷಾಬಂಧನವನ್ನು ಅರಿತು ಅರಿವಿರುವವರೊಂದಿಗೆ ಅರಿವಿಗಾಗಿ ಆಚರಿಸಿ ಸಂಬಂಧದ ಬಂಧವನ್ನು ಉಳಿಸೋಣ.

– ರಾಧಿಕಾ ಕುಂದಾಪುರ

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.