ನೆಲೆ ಕಳೆದುಕೊಳ್ಳುತ್ತಿರುವ ಆರ್‌ಜೆಡಿ

Team Udayavani, May 25, 2019, 5:00 AM IST

nele

ಪಟನಾ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಶೂನ್ಯ ಸಂಪಾದನೆ ಮಾಡಿದ್ದು, ಪಕ್ಷದ ಇತಿಹಾಸದಲ್ಲೇ ಅತಿ ಕಳಪೆ ಪ್ರದರ್ಶನ ನೀಡಿದ ಕುಖ್ಯಾತಿಗೆ ಒಳಗಾಗಿದೆ. ಆ ಮೂಲಕ ದಶಕಗಳ ಕಾಲ ಲಾಲೂ ಪ್ರಸಾದ್‌ ಯಾದವ್‌ ಅವರು ಮಾಡಿಕೊಂಡ ಬಂದಿದ್ದ ಜಾತಿ ಆಧಾರಿತ ರಾಜಕೀಯವನ್ನು ರಾಜ್ಯದ ಮತದಾರರು ತಿರಸ್ಕರಿಸಿದ್ದಾರೆ.

ಲಾಲೂ ಅವರ ನೇತೃತ್ವದಲ್ಲಿ 1997ರಲ್ಲಿ ಅಸ್ತಿತ್ವಕ್ಕೆ ಬಂದ ಆರ್‌ಜೆಡಿ, ಒಂದು ಕಾಲದಲ್ಲಿ ಕೇಂದ್ರದಲ್ಲಿ ಸರ್ಕಾರದ ರಚನೆಯಲ್ಲಿ ತನ್ನದೇ ಆದ ಮಹತ್ವದ ಪಾತ್ರ ವಹಿಸುತ್ತಿತ್ತು. ಆದರೆ, ಈ ಬಾರಿ ಸಂಸತ್‌ನಲ್ಲಿ ಪಕ್ಷದ ಪರ ಧ್ವನಿ ಎತ್ತಲು ಒಬ್ಬನೇ ಒಬ್ಬ ಸಂಸದ ಇಲ್ಲ. 2014ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದಿಂದ ನಾಲ್ವರು ಸಂಸದರು ಆರಿಸಿ ಬಂದಿದ್ದರು. ಜಾತಿ ಆಧಾರಿತ ಲೆಕ್ಕಾಚಾರ ಹೊಂದಿದ್ದ ಪಕ್ಷ, ಈ ಬಾರಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು, ರಾಜ್ಯದ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಜೊತೆಗೆ, ಆರ್‌ಎಲ್‌ಎಸ್‌ಪಿ, ಎಚ್‌ಎಎಮ್‌, ವಿಐಪಿ ಸೇರಿದಂತೆ ಇತರ ಸಣ್ಣ ಪುಟ್ಟ ಪಕ್ಷಗಳಿಗೆ ಸೀಟುಗಳನ್ನು ಬಿಟ್ಟು ಕೊಟ್ಟಿತ್ತು.

ಆದರೆ, ಈ ಬಾರಿ ಅದರ ಜಾತಿ ಆಧಾರಿತ ರಾಜಕೀಯ ಲೆಕ್ಕಾಚಾರಗಳೆಲ್ಲಾ ಪೂರ್ತಿ ತಲೆಕೆಳಗಾಗಿವೆ. ಪಾಟಲಿಪುತ್ರದಲ್ಲಿ ಸ್ಪರ್ಧಿಸಿದ್ದ ಲಾಲೂ ಪುತ್ರಿ ಮಿಸಾ ಭಾರತಿಯವರೇ ಸೋಲು ಕಂಡಿದ್ದಾರೆ. ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡರೂ, ಪ್ರತಿಸ್ಪರ್ಧಿ, ಕೇಂದ್ರ ಸಚಿವ ರಾಮ್‌ ಕೃಪಾಲ್‌ ಯಾದವ್‌ ಎದುರು ಸೋಲಿನ ರುಚಿ ಕಾಣಬೇಕಾಯಿತು. ಆರ್‌ಜೆಡಿಗೆ ಮರಳಿ ಬಂದು, ಮಾಧೇಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಕೇಂದ್ರ ಸಚಿವ ಶರದ್‌ ಯಾದವ್‌ ಸಹ ಸೋಲು ಕಂಡರು.

ಈ ಕ್ಷೇತ್ರದಲ್ಲಿ ಯಾದವ್‌ ಸಮುದಾಯದ ಮತಗಳು ಹೆಚ್ಚಿವೆ ಎಂಬುದು ವಿಶೇಷ. ಇದೇ ವೇಳೆ, ಸರಣ್‌ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್‌ ಪಡೆದು ಸ್ಪರ್ಧೆ ಮಾಡಿದ್ದ ಲಾಲೂ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಮಾವ, ಚಂದ್ರಿಕಾ ರಾಯ್‌ ಕೂಡ ಸೋತು ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಮಾಡಿದರು.

ಪಕ್ಷದ ಪ್ರಮುಖರ ಸೋಲು: ಅಷ್ಟೇ ಅಲ್ಲ, ಆರ್‌ಜೆಡಿಯ ಪ್ರಮುಖ ನಾಯಕರಾದ ಮಾಜಿ ಕೇಂದ್ರ ಸಚಿವ ರಘುವಂಶ ಪ್ರಸಾದ್‌ ಸಿಂಗ್‌, ಮುಸ್ಲಿಂ ಸಮುದಾಯದ ಪ್ರಮುಖ ನಾಯಕ ಅಬ್ದುಲ್‌ ಬಾರಿ ಸಿದ್ಧಿಕಿ ಹಾಗೂ ಹಿರಿಯ ನಾಯಕ ಜಯಪ್ರಕಾಶ್‌ ನಾರಾಯಣ ಯಾದವ್‌ ಕೂಡ ಸೋಲು ಕಂಡರು. ಮುಸ್ಲಿಂ ಮತಗಳ ಬಾಹುಳ್ಯವುಳ್ಳ ಅರಾರಿಯಾ, ಪೂರ್ನಿಯಾ, ಕತಿಹಾರ್‌ನಂತಹ ಕ್ಷೇತ್ರಗಳಲ್ಲಿಯೇ ಪಕ್ಷ ದಯನೀಯ ಸೋಲು ಕಂಡಿದೆ.

ಮೇವು, ಭ್ರಷ್ಟಾಚಾರ ಹಗರಣಗಳ ಮೇಲಿನ ಆರೋಪದಿಂದಾಗಿ ಜೈಲು ಸೇರಿರುವ ಲಾಲೂ ಪ್ರಸಾದ್‌ ಯಾದವ್‌ಗೆ ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಅವರ ಪುತ್ರ ತೇಜಸ್ವಿ ಜನರನ್ನು ತಲುಪುವಲ್ಲಿ ವಿಫ‌ಲರಾದರು. ಬಿಜೆಪಿ, ಕೇವಲ ಮೇಲ್ವರ್ಗದವರ ಪಕ್ಷ ಎಂಬುದನ್ನು ಎತ್ತಿ ತೋರಿಸುವ ಸಲುವಾಗಿ “ಮೀಸಲಾತಿ’ ವಿಷಯವನ್ನೇ ದೊಡ್ಡದಾಗಿ ಬಿಂಬಿಸಿದರು. ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕೇಂದ್ರದ ನೀತಿಯನ್ನು ಬಹಿರಂಗವಾಗಿ ವಿರೋಧಿಸಿದರು. ಇದು ಪಕ್ಷಕ್ಕೆ ಮುಳುವಾಯಿತು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.