ಸಶಕ್ತ ಸ್ಥಳೀಯಾಡಳಿತದಿಂದ ದೇಶದ ಉನ್ನತಿ

Team Udayavani, Aug 19, 2021, 6:10 AM IST

ಸಶಕ್ತ ಸ್ಥಳೀಯಾಡಳಿತದಿಂದ ದೇಶದ ಉನ್ನತಿ

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಸಂದರ್ಭದಲ್ಲಿ ನಮ್ಮ ನಾಯಕರ ಮುಂದೆ ಸ್ವತಂತ್ರ ಭಾರತದ ಪುನರುತ್ಥಾನ ಮತ್ತು ಏಳಿಗೆಗೆ ನೂರಾರು ಯೋಜನೆಗಳು, ಕಲ್ಪನೆ ಗಳಿದ್ದವು. ಇವೆಲ್ಲವನ್ನೂ ಸಾಕಾರ ಗೊಳಿಸುವ ಮೊದಲ ಹೆಜ್ಜೆ ಯಾಗಿ ದೇಶಕ್ಕೊಂದು ಸಮಗ್ರ ವಾದ ಸಂವಿಧಾನವನ್ನು ಡಾ| ಬಾಬು ರಾಜೇಂದ್ರ ಪ್ರಸಾದ್‌ ಹಾಗೂ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ನೇತೃತ್ವ ದಲ್ಲಿ ರಚಿಸಲಾಯಿತು. ಕಾಲಕಾಲಕ್ಕೆ ತಕ್ಕಂತೆ ಸಂವಿಧಾನಕ್ಕೆ ಕೆಲವೊಂದು ಅಗತ್ಯ ತಿದ್ದುಪಡಿಗಳನ್ನು ತಂದು ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಾ ಬಂದಿದೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 74 ವರ್ಷಗಳು ಪೂರ್ಣಗೊಂಡಿದ್ದು ಇದೀಗ ಅಮೃತ ಮಹೋತ್ಸವ ವರ್ಷಕ್ಕೆ ಮುಂದಡಿ ಇರಿಸಿದೆ. ಆದರೆ ಈ 74 ವರ್ಷಗಳ ಹಾದಿಯಲ್ಲಿ ಒಮ್ಮೆ ಹಿಂದಿರುಗಿ ನೋಡಿದಾಗ ನಾವು ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದೆನಿಸುವುದು ಸಹಜ. ಆದರೂ 130 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ದೇಶ ಸಾಧಿಸಿರುವ ಪ್ರಗತಿಯನ್ನು ನಾವೆಂದಿಗೂ ನಿರ್ಲಕ್ಷಿಸಲಾಗದು.

ಪ್ರಜಾಪ್ರಭುತ್ವದಲ್ಲಿ ಆಡಳಿತ ವಿಕೇಂದ್ರೀಕರಣಕ್ಕೆ ಬಹಳ ಮಹತ್ವವಿದೆ. ದೇಶದಲ್ಲಿ ಸ್ಥಳೀಯಾಡಳಿತ ವ್ಯವಸ್ಥೆಗೆ ಬಹಳ ಪ್ರಾಮುಖ್ಯ ನೀಡಬೇಕಾಗಿತ್ತು. ಸಂವಿಧಾನದ ಅಧ್ಯಾಯ (ಆರ್ಟಿಕಲ್‌) 40ರಲ್ಲಿ ಗ್ರಾಮ ಪಂಚಾಯತ್‌ಗೆ ಸಂಪೂರ್ಣ ಆಡಳಿತ ನಡೆಸಲು ಅಧಿಕಾರ ನೀಡಬೇಕೆಂದು ತೀರ್ಮಾನಿಸ ಲಾಗಿತ್ತು. ಆದರೆ ಸರಕಾರ ಇದಕ್ಕೆ ಪೂರಕವಾದ ವ್ಯವಸ್ಥೆಯನ್ನು ರೂಪಿಸುವಲ್ಲಿ ವಿಫಲವಾಯಿತು. ಈ ಹಿನ್ನಲೆಯಲ್ಲಿ ಹೇಳುವುದಾ ದರೆ ನಾವು ಸಾಕಷ್ಟು ಪ್ರಗತಿ ಯಾಗಿಲ್ಲ ಎಂಬುದನ್ನು ಅಲ್ಲಗಳೆಯಲಾಗದು.

ಸರಕಾರದ ಏಳಿಗೆಗೆ ಪೂರಕವಾಗಿ ಸ್ಥಳೀಯಾಡಳಿತ ವ್ಯವಸ್ಥೆಗೆ ಬೆಂಬಲ ನೀಡಲು ಹಾಗೂ ಪ್ರೋತ್ಸಾಹಿ ಸಲು, 1992ರಲ್ಲಿ ಸಂವಿ ಧಾನಕ್ಕೆ 73 ಮತ್ತು 74ನೇ ತಿದ್ದುಪಡಿಯನ್ನು ತರ ಲಾಗಿತ್ತು. ಈ ತಿದ್ದುಪಡಿ ಯನ್ವಯ ದೇಶದಲ್ಲಿ 3 ಹಂತಗಳ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಕರ್ನಾಟಕ ಪಂಚಾಯತ್‌ರಾಜ್‌ ಕಾಯ್ದೆ 1993ರ ಪ್ರಕಾರ ಗ್ರಾಮ ಪಂಚಾಯತ್‌, ತಾಲೂಕು ಪಂಚಾ ಯತ್‌, ಜಿಲ್ಲಾ ಪಂಚಾಯತ್‌ ಎನ್ನುವ 3 ಹಂತಗಳ ಪಂಚಾಯತ್‌ರಾಜ್‌ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿತು.

ಕರ್ನಾಟಕ ಪಂಚಾಯತ್‌ ರಾಜ್‌ ಕಾಯ್ದೆ 1993ರ ಪ್ರಕಾರ ಗ್ರಾ. ಪಂ.ಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮಾತ್ರ ಸ್ಥಳೀಯವಾಗಿ ನಿಧಿಗಳನ್ನು ಕ್ರೋಡೀಕರಣ ಮಾಡಲು ಅವಕಾಶ ನೀಡ ಲಾಯಿತು. ಉಳಿದಂತೆ ಜಿಲ್ಲಾ ಹಾಗೂ ತಾ. ಪಂ.ಗಳು ಕೇವಲ ಕೇಂದ್ರ ಹಾಗೂ ರಾಜ್ಯದ ಅನುದಾನವನ್ನು ಅವಲಂಬಿಸಬೇಕಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕುಡಿ ಯುವ ನೀರಿನ ಪೂರೈಕೆ, ಸ್ವತ್ಛತೆ, ವಸತಿ ಯೋಜನೆ, ಫಲಾನುಭವಿಗಳನ್ನು ಗುರುತಿಸುವುದು ಹಾಗೂ ಗ್ರಾಮೀಣ ಪ್ರದೇಶದ ರಸ್ತೆಗಳ ದುರಸ್ತಿ ಕಾರ್ಯ ಪಂಚಾಯತ್‌ನ ಪ್ರಮುಖ ಕರ್ತವ್ಯವಾಗಿದೆ. ಆದರೆ ಈ ಎಲ್ಲ ಕಾರ್ಯಗಳು ವ್ಯವಸ್ಥಿತ ರೀತಿ ನಡೆಯುತ್ತಿಲ್ಲ.

ಹಳ್ಳಿಗಳ ದೇಶವಾಗಿರುವ ಭಾರತದ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ಎಲ್ಲ ಗ್ರಾ.ಪಂ. ಗಳು ಸ್ವಾವ ಲಂಬಿಯಾಗಲು ಈಗಿಂದಲೇ ಯೋಜನೆ ರೂಪಿಸುವುದು ಅಗತ್ಯ. ಇನ್ನು 10-15 ವರ್ಷಗಳಲ್ಲಿ ಪ್ರತೀ ಗ್ರಾ.ಪಂ.ನಲ್ಲೂ ಮೂಲ ಸೌಕರ್ಯಗಳಿಗೆ ಜಾಗ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದುದ ರಿಂದ ಪ್ರತೀ ಗ್ರಾ.ಪಂ. ಕನಿಷ್ಠ 3-4 ಎಕ್ರೆ ಪ್ರದೇಶ ವನ್ನಾದರೂ ಮೀಸಲಿಡುವುದು ಅಗತ್ಯವಾಗಿದೆ.

ನವ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ ಕೆಲವು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಸಿದ್ಧತೆ ಮಾಡಿರುವುದು ಸಂತೋಷದ ವಿಚಾರ. ಪ್ರಮುಖವಾಗಿ ಅಮೃತ ಗ್ರಾ.ಪಂ.ಯೋಜನೆ, ಗ್ರಾಮೀಣ ವಸತಿ ಯೋಜನೆ ಮುಂತಾದ ಯೋಜನೆಗಳು ಹಾಗೂ ಆರ್ಥಿಕ ನೆರ‌ವನ್ನು ನೀಡುವ ಘೋಷಣೆ ಮಾಡಿದೆ. ಈ ಎಲ್ಲ ಯೋಜನೆಗಳು ಅನುಷ್ಠಾನಕ್ಕೆ ಬಂದಲ್ಲಿ ಭಾರತದ ಭವಿಷ್ಯಉತ್ತಮವಾಗಿ, ದೇಶ ಸಶಕ್ತವಾದೀತೆಂದು ಭಾವಿಸಬಹುದಾಗಿದೆ. ಸ್ವತಂತ್ರ ಭಾರತದ ಶತಮಾನೋತ್ಸವದ ವೇಳೆಗೆ ಸ್ಥಳೀಯ ಸಂಸ್ಥೆಗಳು ಸಶಕ್ತವಾಗಿ ಭಾರತ ಆರ್ಥಿಕವಾಗಿ ಚೈತನ್ಯ ಗೊಂಡು ವಿಶ್ವಗುರುವಾಗಿ ಮೇಳೈಸಲಿ. ಅದಕ್ಕಾಗಿ ಸ್ಥಳೀಯ ಸಂಸ್ಥೆಗಳನ್ನು ಇನ್ನಷ್ಟು ಉದ್ದೀಪನಗೊಳಿಸುವ ಕಾರ್ಯ ನಡೆಯಲಿ.

ಎ. ಜಿ. ಕೊಡ್ಗಿ

ಮಾಜಿ ಶಾಸಕರು , ಮಾಜಿ ಅಧ್ಯಕ್ಷರು,

3ನೇ ರಾಜ್ಯ ಹಣಕಾಸು ಆಯೋಗ

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.