ಸಮಾಜವಾದಿಯ ನಾಯಕನ ನೂರರ ನೆನಪು

ಬಿ. ವಿ. ಕಕ್ಕಿಲ್ಲಾಯ ಜನ್ಮಶತಾಬ್ದ

Team Udayavani, Aug 11, 2019, 5:40 AM IST

ಬದುಕಿನ ಉದ್ದಕ್ಕೂ ನಿಷ್ಠಾವಂತ ಸಮಾಜವಾದಿಯಾಗಿ, ಜೀವ ಪರ ಚಿಂತಕರಾಗಿ, ನ್ಯಾಯಪರ ಹೋರಾಟಗಾರರಾಗಿದ್ದ ಬಿ. ವಿ. ಕಕ್ಕಿಲ್ಲಾಯ ಎಂದೇ ಹೆಸರಾಗಿದ್ದ ಬೇವಿಂಜೆ ವಿಷ್ಣು ಕಕ್ಕಿಲ್ಲಾಯರ ಜನ್ಮ ಶತಾಬ್ದ ವರ್ಷವಿದು. ಕೇರಳದ ಕಾಸರಗೋಡು ಸಮೀಪದ ಬೇವಿಂಜೆಯಲ್ಲಿ 1919ರ ಎಪ್ರಿಲ್‌ 11ರಂದು ಹುಟ್ಟಿದ ಬಿ. ವಿ. ಕಕ್ಕಿಲ್ಲಾಯರು ವಿದ್ಯಾರ್ಥಿ ದೆಸೆಯಲ್ಲಿಯೇ ಸ್ವಾತಂತ್ರ್ಯ ಚಳುವಳಿ ಮತ್ತು ಕಮ್ಯುನಿಸ್ಟ್‌ ಸಿದ್ಧಾಂತದ ಆಕರ್ಷಣೆಗೆ ಒಳಗಾಗಿದ್ದರು. ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್‌ನ ಸದಸ್ಯರಾಗಿ, ಮಂಗಳೂರು ಘಟಕದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಕಮ್ಯುನಿಸ್ಟ್‌ ನಾಯಕರ ಪರಿಚಯವಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಭಾರತ ಕಮ್ಯುನಿಸ್ಟ್‌ ಪಕ್ಷದ ಸದಸ್ಯರಾದರು.

1942/43ರಲ್ಲಿ ಕ್ವಿಟ್‌ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದಾಗ ನಿಷೇಧಿತ ಸಾಹಿತ್ಯ ಹೊಂದಿದ ಆರೋಪದಲ್ಲಿ ಮಂಗಳೂರಿನ ಸಬ್‌ಜೈಲಿನಲ್ಲಿ 9 ತಿಂಗಳ ಶಿಕ್ಷೆ ಅನುಭವಿಸಿದರು. 1943ರಿಂದ 45ರ ವರೆಗೆ ಬೀಡಿ, ಹಂಚು, ನೇಯ್ಗೆ, ಗೇರುಬೀಜ, ಮುದ್ರಣ, ಮುನಿಸಿಪಲ್‌ ನೌಕರರನ್ನು ಸಂಘಟಿಸುವಲ್ಲಿ ಸಕ್ರಿಯವಾಗಿ ದುಡಿದರು. ಸಿಪಿಐ ನಾಯಕರಾಗಿ ಬೆಳೆದರು.

ಅಂದಿನ ಕಾಲದಲ್ಲಿ ಕಮ್ಯುನಿಸ್ಟ್‌ ಪಕ್ಷವನ್ನು ಸೇರುವುದು ಸುಲಭವಾಗಿರಲಿಲ್ಲ. ಪಕ್ಷಕ್ಕಾಗಿ ಸರ್ವವನ್ನೂ ತ್ಯಾಗ ಮಾಡುವ ಮನೋಭಾವ ಬೇಕಿತ್ತು. ಕಮ್ಯುನಿಸ್ಟ್‌ ಪಕ್ಷದ ಸದಸ್ಯನೆಂದು ಸಂದೇಹ ಬಂದರೆ ಬಂಧಿಸಿ ಚಿತ್ರಹಿಂಸೆ ಕೊಡಲಾಗುತ್ತಿದ್ದ ದಿನಗಳವು. 1943-44ರಲ್ಲಿ ಪಕ್ಷವನ್ನು ಸಂಘಟಿಸಲು ಕರ್ನಾಟಕ ರಾಜ್ಯದಾದ್ಯಂತ ಸಂಚರಿಸಿದರು. 1944ರಲ್ಲಿ ಮುಂಬಯಿಯಲ್ಲಿ ವಿಜಯಲಕ್ಷಿ ಪಂಡಿತ್‌ರವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿದರು. 1946ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ವೆಲ್ಲೂರು ಹಾಗೂ ಕಣ್ಣೂರು ಜೈಲುಗಳಲ್ಲಿ ಬಂಧನದಲ್ಲಿದ್ದರು. ಸ್ವಾತಂತ್ರ್ಯ ದೊರಕಿದ ದಿನವೇ ಕಣ್ಣೂರು ಜೈಲಿನಿಂದ ಬಿಡುಗಡೆ ಹೊಂದಿದರು. ಅವರಿಗೆ ಮಂಗಳೂರಲ್ಲಿ ಅದ್ದೂರಿ ಸ್ವಾಗತ ನೀಡಲಾಗಿತ್ತು. ಅಂದಿನಿಂದ ಕಾರ್ಮಿಕ ಮತ್ತು ಕಮ್ಯುನಿಸ್ಟ್‌ ಪಕ್ಷದ ಸಂಘಟನೆಗಳಲ್ಲಿ ಇನ್ನಷ್ಟು ತೊಡಗಿಸಿಕೊಂಡರು.

ಒಬ್ಬ ಪ್ರಬುದ್ಧ ರಾಜಕಾರಣಿ, ಹೋರಾಟ ಗಾರ ಮಾತ್ರವಲ್ಲ; ಅವರು ಓದು ಮತ್ತು ಬರಹಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ಕಮ್ಯುನಿಸಂ ಎಂಬ ಪುಸ್ತಕ ತುಂಬ ಜನಪ್ರಿಯವಾಗಿದೆ. ಇದು 4 ಬಾರಿ ಮರುಮುದ್ರಣ ಕಂಡಿದೆ. ಮಾನವನ ನಡಿಗೆ ವಿಜ್ಞಾನದೆಡೆಗೆ, ಕಾರ್ಲ್ಮಾರ್ಕ್ಸ್ ಬದುಕು ಬರಹ, ಫ್ರೆಡ್ರಿಕ್‌ ಏಂಜಲ್ಸ್‌ ಜೀವನ, ಭಾರತೀಯ ಚಿಂತನೆ, ಹಿಂದೂ ಧರ್ಮ, ಮಾಕ್ಸìವಾದ ಮತ್ತು ಭಗವದ್ಗೀತೆ, ಭಾರತಕ್ಕೊಂದು ಕವಲುದಾರಿ, ಸ್ವಾತಂತ್ರ್ಯ ಸಂಗ್ರಾಮದ ಹೆಜ್ಜೆಗಳು ಮುಂತಾದ ಕೃತಿಗಳನ್ನು ಅವರು ರಚಿಸಿದ್ದಾರೆ. ಬರೆಯದ ದಿನಚರಿಯ ಮರೆಯದ ಪುಟಗಳು ಅವರ ಆತ್ಮಕಥನ. ಕಕ್ಕಿಲ್ಲಾಯರು ನಿಧನರಾದದ್ದು 2012ರ ಜೂನ್‌ 4ರಂದು.

ನಿನ್ನೆ ಮತ್ತು ಇಂದು ಮಂಗಳೂರಿನಲ್ಲಿ ಬಿ. ವಿ. ಕಕ್ಕಿಲ್ಲಾಯರ ನೂರರ ನೆನಪಿನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ವಿ. ಕುಕ್ಯಾನ್‌

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಚೀನಾದಲ್ಲಿನ ವೈರಸ್‌ ಅಧ್ವಾನ ಪ್ರಕೃತಿಯ ಕೊಡುಗೆಯೆ, ಮನುಷ್ಯ ಕೃತವೆ- ಎಂಬ ಚರ್ಚೆ ಈಗ ಎಲ್ಲೆಡೆ ಕೇಳಿಬರುತ್ತಿದೆ. ಇಂಥಾದ್ದೊಂದು ದುರಂತ ಸಂಭವಿಸಲಿದೆ ಎಂದು ಕೆಲವು...

  • ಕವಿ ಗೋಪಾಲಕೃಷ್ಣ ಅಡಿಗರೊಂದಿಗೆ ಒಡನಾಡಿದ ಅಂದಿನ ದಿನಗಳನ್ನು ನೆನೆಯುವುದರಲ್ಲಿ ಎಂಥ ಆನಂದವಿದೆ! 1961-62ರ ಸುಮಾರಿನಲ್ಲಿ ನನ್ನ ಗೆಳೆಯನೊಬ್ಬನ ಕೈಯಲ್ಲಿ ಚಂಡೆಮದ್ದಳೆ...

  • ಗಾಂಧೀಜಿಯವರು 1934ರ ಫೆಬ್ರವರಿ 24-25ರಂದು ಕರ್ನಾಟಕದ ಕರಾವಳಿಯಲ್ಲಿ ಪ್ರವಾಸ ಮಾಡಿದರು. ಅಂದು ಅವರು ಸಾಮಾನ್ಯ ಬಾಲಕಿಗೆ ಬರೆದ ಪತ್ರ ಮತ್ತು ಪತ್ರಕ್ಕೆ ಸಂಬಂಧಿಸಿದ...

  • ಅಮೆರಿಕದಲ್ಲಿ ತರಕಾರಿ ಸಿಗುವುದಿಲ್ಲವಂತೆ, ಊರಿನ ಊಟ ಸಿಗುವುದಿಲ್ಲವಂತೆ, ಕೇವಲ ಮಾಂಸಾಹಾರ, ಬ್ರೆಡ್‌ ಸ್ಯಾಂಡ್‌ವಿಚ್‌ ಇಂತಹುದನ್ನೇ ತಿನ್ನಬೇಕಂತೆ, ಪ್ರವಾಸಿಗರಿಗೇ...

  • ಇತ್ತೀಚೆಗೆ ಊರಿನಲ್ಲಿ ನನ್ನ ದೊಡ್ಡ ಮಾವನ ಮರಿಮೊಮ್ಮಗಳಿಗೆ ನಾಮಕರಣವಾಯಿತು. ಏನು ಹೆಸರಿಟ್ಟಿದ್ದಾರೆ? ಎಂದು ಫೋನಾಯಿಸಿದ್ದೆ. "ಅದ್ವಿಕಾ' ಎಂದು ಉತ್ತರ ಬಂತು....

ಹೊಸ ಸೇರ್ಪಡೆ