ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಇಂದು ತೀರ್ಪು ಪ್ರಕಟ
Team Udayavani, Sep 30, 2020, 8:42 AM IST
ಲಕ್ನೋ: ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ಇಂದು ಹೊರಬೀಳಲಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಭವಿಷ್ಯ ನಿರ್ಧಾರವಾಗಲಿದೆ.
ಎಲ್ಲಾ ಆರೋಪಿಗಳು ಹಾಜರಿರಬೇಕೆಂದು ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೇ ಕೋವಿಡ್ ಕಾರಣದಿಂದ ಇವರಾರು ಹಾಜರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಅಡ್ವಾಣಿ ಮತ್ತು ಜೋಷಿ ಅವರಿಗೆ ವಯಸ್ಸಾಗಿದ್ದು ಅವರಿಗೆ ವಿನಾಯಿತಿ ನೀಡುವ ಸಾಧ್ಯತೆಯಿದೆ. ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಅನಾರೋಗ್ಯ ಪೀಡಿತರಾಗಿದ್ದಾರೆ.
ದೇಶವೇ ಕುತೂಹಲದಿಂದ ಕಾಯುತ್ತಿರುವ ಈ ಪ್ರಕರಣದ ಅಂತಿಮ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಎಲ್ಲಾ 32 ಆರೋಪಿಗಳು ಖುದ್ದು ಹಾಜರಿರಬೇಕೆಂದು ನ್ಯಾಯಾಲಯ ತಿಳಿಸಿದೆ. ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 28 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.
ಸೆಪ್ಟೆಂಬರ್ 1ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ