ನೈಜ ಘಟನೆಯ ಸುತ್ತ 19.20.21
Team Udayavani, Aug 17, 2022, 10:53 AM IST
ಮಂಸೋರೆ ನಿರ್ದೇಶನದ “19.20.21′ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಚಿತ್ರತಂಡ ಈ ಪೋಸ್ಟರ್ ಬಿಡುಗಡೆ ಮಾಡಿದೆ.
ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಪೋಸ್ಟರ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. “19.20.21′ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್, ಎಂ.ಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಟಾಲೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ.
“ಆ್ಯಕ್ಟ್-1978′ ಸಿನಿಮಾ ನಿರ್ಮಾಣ ಮಾಡಿದ್ದ ದೇವರಾಜ್ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು , ಬಿಂದು ಮಾಲಿನಿ ಸಂಗೀತ, ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿ.ಕೆ ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನವಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿದೆ.