19 ಏಜ್ ಈಸ್ ನಾನ್ಸೆನ್ಸ್ ನಾಯಕನಿಗೆ ತಮಿಳಿನಲ್ಲಿ ಭರ್ಜರಿ ಅವಕಾಶ!

Team Udayavani, Nov 4, 2019, 12:10 PM IST

4-November-5

ಲೋಕೇಶ್ ನಿರ್ಮಾಣದಲ್ಲಿ ಮೂಡಿ ಬಂದಿರುವ 19 ಏಜ್ ಈಸ್ ನಾನ್‌ಸೆನ್ಸ್ ಚಿತ್ರವೀಗ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ರೆಡಿಯಾಗುತ್ತಿದೆ. ಸದ್ದುಗದ್ದಲವಿಲ್ಲದೆ ತಮ್ಮ ಪಾಡಿಗೆ ತಾವು ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡವೀಗ ತಣ್ಣಗೆ ಸದ್ದು ಮಾಡಲು ಶುರುವಿಟ್ಟುಕೊಂಡಿದೆ. ಹತ್ತೊಂಬತ್ತರ ವಯಸಿನ ಹುಮ್ಮಸ್ಸು, ಉನ್ಮಾದಗಳ ಸುತ್ತ ನಡೆಯೋ ಲವ್, ಫ್ಯಾಮಿಲಿ ಸಬ್ಜೆಕ್ಟಿನ ಈ ಚಿತ್ರದಲ್ಲಿ ಮನುಷ್ ಎಂಬ ಹತ್ತೊಂಬತ್ತರ ಹರೆಯದ ಹುಡುಗ ನಾಯಕನಾಗಿ ನಟಿಸಿದ್ದಾನೆ. ವಿಶೇಷವೆಂದರೆ, ಈ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿರುವಾಗಲೇ ತಮಿಳು ಚಿತ್ರಕ್ಕೆ ಹೀರೋ ಆಗುವ ಸದಾವಕಾಶ ಈ ಹುಡುಗನನ್ನು ಅರಸಿ ಬಂದಿದೆ.

ಈ ಸಿನಿಮಾವನ್ನು ಲೋಕೇಶ್ ನಿರ್ಮಾಣ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಸಿನಿಮಾ ನಿರ್ಮಾಣ ಮಾಡಬೇಕೆಂಬ ಕನಸಿಟ್ಟುಕೊಂಡಿದ್ದ ಲೋಕೇಶ್ ಈ ಮೂಲಕ ಅದನ್ನು ನನಸು ಮಾಡಿಕೊಂಡಿದ್ದಾರೆ. ನಿರ್ದೇಶಕ ಸುರೇಶ್ ಎಂ ಗಿಣಿ ಈ ಕಥೆ ಹೇಳಿದಾಗಲೇ ಸಿನಿಮಾ ವ್ಯಾಮೋಹ ಹೊಂದಿದ್ದ ತಮ್ಮ ಮಗನೇ ಹೀರೋ ಆಗಲು ಸೂಕ್ತ ಎಂಬ ನಿರ್ಧಾರಕ್ಕವರು ಬಂದಿದ್ದರಂತೆ. ಆದರೆ ಮಗನನ್ನು ಏಕಾಏಕಿ ಹೀರೋ ಮಾಡೋ ಮನಸೂ ಅವರಿಗೆ ಇರಲಿಲ್ಲ. ಆತನಿಗೆ ಸೂಕ್ತ ತರಬೇತಿ ಕೊಡಿಸಿ ಅದರಲ್ಲಿನ ಫಲಿತಾಂಶ ನೋಡಿಕೊಂಡು ಮುಂದಿನದ್ದನ್ನು ನೋಡಿಕೊಳ್ಳೋ ನಿರ್ಧಾರ ಲೋಕೇಶ್ ಅವರದ್ದಾಗಿತ್ತು.

ಇದೀಗ ತಾನೇ ಬಿಕಾಂ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಮನುಷ್‌ಗೆ ಸಿಲೆಬಸ್‌ಗಿಂತ ಸಿನಿಮಾ ಮೇಲೇ ಹೆಚ್ಚು ಆಸಕ್ತಿ. ಆದ್ದರಿಂದಲೇ ಆತ ರಂಗಭೂಮಿಯ ಪರಿಣಿತರಿಂದ ಅಚ್ಚುಕಟ್ಟಾಗಿ ನಟನೆಯ ಪಟ್ಟುಗಳನ್ನು ಕಲಿತುಕೊಂಡಿದ್ದ. ನಂತರ ಈ ಸಿನಿಮಾ ಪಾತ್ರಕ್ಕೂ ಬೆರಗಾಗುವಂತೆ ಜೀವ ತುಂಬಿದ್ದ. ಈ ಚಿತ್ರದ ಛಾಯಾಗ್ರಾಹಕರಾಗಿದ್ದ ವೆಟ್ರಿ ಮನುಷ್‌ನ ಶ್ರದ್ಧೆ ಮತ್ತು ನಟನೆಯ ಕಸುವನ್ನು ನೋಡಿ ತಾವು ನಿರ್ದೇಶನ ಮಾಡಲಿರೋ ತಮಿಳು ಚಿತ್ರಕ್ಕೆ ಈತನೇ ಸೂಕ್ತ ಎಂಬ ನಿರ್ಣಯಕ್ಕೆ ಬಂದಿದ್ದರು. ಈ ಕಥೆಯನ್ನು ಲೋಕೇಶ್ ಅವರಿಗೆ ಹೇಳಿ ಒಪ್ಪಿಗೆಯನ್ನೂ ಪಡೆದುಕೊಂಡಿದ್ದಾರಂತೆ. 19 ಏಜ್ ಈಸ್ ನಾನ್ಸೆನ್ಸ್ ತೆರೆಗಾಣುತ್ತಿದ್ದಂತೆಯೇ ಮಾನುಷ್ ನಟನೆಯ ತಮಿಳು ಚಿತ್ರಕ್ಕೆ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.