Fraud: ದುಬೈ ಕಾರ್ಯಕ್ರಮಕ್ಕೆ ಕಳುಹಿಸುತ್ತೇವೆ ಎಂದು ಹೇಳಿ ನಟ ರವಿಕಿರಣ್‌ಗೆ 4.3 ಲಕ್ಷ ಟೋಪಿ

Team Udayavani, Dec 19, 2023, 10:51 AM IST

Fraud: ದುಬೈ ಕಾರ್ಯಕ್ರಮಕ್ಕೆ ಕಳುಹಿಸುತ್ತೇವೆ ಎಂದು ಹೇಳಿ ನಟ ರವಿಕಿರಣ್‌ಗೆ 4.3 ಲಕ್ಷ ಟೋಪಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ರವಿಕಿರಣ್‌(65) ಅವರಿಗೆ ದುಬೈ ಕಾರ್ಯಕ್ರಮಕ್ಕೆ ಕಳುಹಿಸುತ್ತೇನೆ, ಅನಾಥಾಶ್ರಮಕ್ಕೆ ಹಣದ ಸಹಾಯ ನೀಡಿ ಎಂದು ಪರಿಚಯವಾದ ಗುರೂಜಿಯೊಬ್ಬರು ವಿವಿಧ ಹಂತದಲ್ಲಿ 4.32 ಲಕ್ಷ ರೂ. ಪಡೆದು ವಂಚಿಸಿದ್ದಾರೆ.

ಈ ಸಂಬಂಧ ನಟ, ನಿರ್ಮಾಪಕ ರವಿಕಿರಣ್‌ ನೀಡಿದ ದೂರಿನ ಮೇರೆಗೆ ನವೀನ್‌ ಭಾಗ್ಯಶ್ರೀ ಗುರೂಜಿ ಮತ್ತು ಅವರ ಪತ್ನಿ ಚೈತ್ರಾ ಹಾಗೂ ಇತರರ ವಿರುದ್ಧ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

ನಟ ರವಿಕಿರಣ್‌ಗೆ ಎರಡು ವರ್ಷದ ಹಿಂದೆ ಸ್ನೇಹಿತರ ಮೂಲಕ ಪರಿಚಯವಾದ ನವೀನ್‌ ಭಾಗ್ಯಶ್ರೀ ಗುರೂಜಿ,  ಅಕ್ಟೋಬರ್‌ನಲ್ಲಿ “ನಾನು ಅನಾಥಾಶ್ರಮ ನಡೆಸುತ್ತಿದ್ದೇನೆ. ಏನಾದರೂ ದಿನಸಿ ಕೊಡಿಸಿ’ ಎಂದು ರವಿಕಿರಣ್‌ ಅವರನ್ನು ಕೇಳಿದ್ದಾರೆ. ಆಗ ರವಿ ಕಿರಣ್‌ ಗೂಗಲ್‌ ಪೇ ಮೂಲಕ 2,500 ರೂ. ಕಳುಹಿಸಿದ್ದಾರೆ. ಬಳಿಕ ಗುರೂಜಿ, “ನವೆಂಬರ್‌ನಲ್ಲಿ ದುಬೈನಲ್ಲಿ ಒಂದು ಕಾರ್ಯಕ್ರಮವಿದೆ. ನೀವು ಅಲ್ಲಿಗೆ ಮುಖ್ಯ ಅತಿಥಿಯಾಗಿ ಹೋದರೆ ದುಡ್ಡು ಕೊಡುತ್ತಾರೆ’ ಎಂದು ನಂಬಿಸಿದ್ದಾರೆ. ಅದಕ್ಕೆ ರವಿ ಕಿರಣ್‌ ಒಪ್ಪಿದಾಗ ದುಬೈಗೆ ತೆರಳಲು ಟಿಕೆಟ್‌ ಮಾಡಿಸಿ ಕೊಡುವುದಾಗಿ ವಿವಿಧ ಹಂತಗಳಲ್ಲಿ ಗುರೂಜಿ 89 ಸಾವಿರ ರೂ. ಪಡೆದುಕೊಂಡಿದ್ದಾನೆ.

ಕಡಿಮೆ ಬೆಲೆಗೆ ನಿವೇಶನದ ಆಮಿಷ: ಅಷ್ಟೇ ಅಲ್ಲದೆ, ಟ್ರಸ್ಟಿನಿಂದ ಹೊಸಕೋಟೆಯಲ್ಲಿ ಕಡಿಮೆ ಮೊತ್ತಕ್ಕೆ ನಿವೇಶ ಕೊಡಿಸುತ್ತೇನೆ ಎಂದು ನಂಬಿಸಿ ಹಣ ಪಡೆದಿದ್ದಾರೆ. ಬಳಿಕ ದುಬೈ ವಿಮಾನ ಟಿಕೆಟ್‌ ರದ್ದು ಆಗಿದ್ದು, ಬೇರೆ ಟಿಕೆಟ್‌ ಕೊಡಿಸುತ್ತೇನೆ ಎಂದು ಮತ್ತೆ 22,900 ರೂ. ಪಡೆದುಕೊಂಡಿದ್ದಾನೆ. ಹೀಗೆ ವಿವಿಧ ಕಾರಣ ನೀಡಿ ರವಿ ಕಿರಣ್‌ ಅವರಿಂದ ಒಟ್ಟು 4.32 ಲಕ್ಷ ರೂ. ಪಡೆದಿದ್ದಾರೆ. ಆದರೆ, ಈ ಬಗ್ಗೆ ವಿಚಾರಿಸಲು ಕರೆ ಮಾಡಿದರೆ ಗುರೂಜಿ ಮೊಬೈಲ್‌ ಸಂಪರ್ಕಕ್ಕೆ ಸಿಗುತ್ತಿಲ್ಲ. ನಾನು ಹಣ ವರ್ಗಾಣೆ ಮಾಡಿದ ಖಾತೆ ಮಾಹಿತಿ ಪರಿಶೀಲಿಸಿದಾಗ ಅದು ಗುರೂಜಿ ಪತ್ನಿ ಚೈತ್ರಾ ಹೆಸರಿನಲ್ಲಿರುವುದು ಕಂಡು ಬಂದಿದೆ. ಹೀಗಾಗಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.