50 ದಿನದ ಪ್ರಯುಕ್ತ 50 ಕೆಜಿ ಕೇಕ್
Team Udayavani, Nov 4, 2017, 1:36 PM IST
ಧ್ರುವ ಸರ್ಜಾ ಅಭಿನಯದ “ಭರ್ಜರಿ’ ಚಿತ್ರ ಬರೋಬ್ಬರಿ 71 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದೆ. ಮಲ್ಟಿಪ್ಲೆಕ್ಸ್ನ ಸ್ಕ್ರೀನ್ಗಳನ್ನೂ ಸೇರಿಸಿದರೆ 90ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಚಿತ್ರ 50 ದಿನ ಪೂರೈಸಿರುವುದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಚಿತ್ರವು 50 ದಿನ ಪೂರೈಸಿರುವ ಖುಷಿಯನ್ನು ಚಿತ್ರ ಭಾನುವಾರ ಕೆ.ಜಿ.ರಸ್ತೆಯ ನರ್ತಕಿ ಚಿತ್ರಮಂದಿರದಲ್ಲಿ ಸಂಭ್ರಮಿಸಲಿದೆ.
ಅಂದು ಮಧ್ಯಾಹ್ನ ಚಿತ್ರಮಂದಿರಕ್ಕೆ ಭೇಟಿ ನೀಡಲಿರುವ ಚಿತ್ರತಂಡ ಅಂದು ಕೇಕ್ ಕತ್ತರಿಸುವ ಜೊತೆಗೆ ಧ್ರುವ ಸರ್ಜಾ ಅಭಿಮಾನಿಗಳು ರಕ್ತದಾನ ಶಿಬಿರ ಕೂಡಾ ಆಯೋಜಿಸಿದ್ದಾರೆ. ಅದಲ್ಲದೆ ಡೊಳ್ಳು ಕುಣಿತ ಆಯೋಜಿಸಲಾಗಿದ್ದು, ಅಭಿಮಾನಿಗಳು ಪಟಕಿ ಹೊಡೆದು ಸಂಭ್ರಮಿಸಲಿದ್ದಾರೆ. ಇದರ ಜೊತೆಗೆ ಅನ್ನದಾನ ಆಯೋಜಿಸಲಾಗಿದ್ದು, ಧ್ರುವ ಸರ್ಜಾ ಅವರ ಅಭಿಮಾನಿಗಳಿಂದ ಲಾಡು ಹಂಚಲಾಗುತ್ತದೆ.
ಅಂದಿನ ಸಂಭ್ರಮಕ್ಕೆ ಚಿತ್ರದಲ್ಲಿ ಕಾಣಿಸಿಕೊಂಡ ಕಲಾವಿದರೆಲ್ಲರೂ ಸಾಕ್ಷಿಯಾಗಲಿದ್ದಾರೆ. ಅಂದಹಾಗೆ, “ಭರ್ಜರಿ’ ಚಿತ್ರದಲ್ಲಿ ರಚಿತಾ ರಾಮ್ ಹಾಗೂ ಹರಿಪ್ರಿಯಾ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರವನ್ನು ಕನಕಪುರ ಶ್ರೀನಿವಾಸ್ ನಿರ್ಮಿಸಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ರಂಗಾಯಣ ರಘು, ತಾರಾ, ಅವಿನಾಶ್, ಶ್ರೀನಿವಾಸಮೂರ್ತಿ, ಉದಯ್, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ