ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್
Team Udayavani, Sep 30, 2023, 6:49 PM IST
ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರ ಅ.6ಕ್ಕೆ ಬಿಡುಗಡೆಯಾಗುತ್ತಿದೆ.
“ಸಿನಿಮಾ ಚೆನ್ನಾಗಿ ಬಂದಿದೆ. ಅದ್ಭುತ ಅಲ್ಲದೇ ಹೋದರು ನೋಡಿದವರು ಚೆನ್ನಾಗಿಲ್ಲ ಅನ್ನೋಲ್ಲ. ಇದು ಒಂದೊಳ್ಳೆ ಪ್ರಯತ್ನ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಇದು ಮೊದಲ ಸಿನಿಮಾ, ಮೊದಲ ಹೆಜ್ಜೆ ನಿಮ್ಮ ಆಶೀರ್ವಾದ ಇರಲಿ’ ಎನ್ನುವುದು ನಿರ್ದೇಶಕರ ಮಾತು.
ರಥ ಕಿರಣ್, “ನಾನು ಅಭಿ ಎಂಬ ಪಾತ್ರ ಮಾಡಿದ್ದೇನೆ. ನನ್ನ ಬಾಲ್ಯದ ಪಾತ್ರವನ್ನು ರವಿ ಬಸ್ರೂರ್ ಮಗ ಮಾಡಿದ್ದಾರೆ. ಅಕ್ಟೋಬರ್ 6ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ’ ಎಂದರು.
“ಅಭಿರಾಮಚಂದ್ರ’ ಸಿನಿಮಾದಲ್ಲಿ ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಶಿವಾನಿ ರೈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…