ದರ್ಶನ್‌ 53ನೇ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆ

Team Udayavani, Nov 8, 2018, 1:01 PM IST

darshan.jpg

“ಒಡೆಯ’ ಚಿತ್ರದ ನಂತರ ದರ್ಶನ್‌ ಅಭಿನಯಿಸುತ್ತಿರುವ ಚಿತ್ರ ಯಾವುದು? ಅದರಲ್ಲಿ ದರ್ಶನ್‌ ಗೆಟಪ್‌ ಹೇಗಿರಲಿದೆ? ಡಿ ಬಾಸ್‌ 53ನೇ ಚಿತ್ರದ ಶೀರ್ಷಿಕೆ ಏನು? ಎಂಬ ಅಭಿಮಾನಿಗಳ ಪ್ರಶ್ನೆಗಳಿಗೆ ಈಗ ಒಂದಷ್ಟು ಉತ್ತರ ಸಿಕ್ಕಿದೆ. 

ಹೌದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದರ್ಶನ್‌ ಅಭಿನಯದ 53 ನೇ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಈ ಚಿತ್ರದ ಪೋಸ್ಟರ್‌ ಅನ್ನು ಸ್ವತಃ ದರ್ಶನ್‌ ಅವರೇ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿದ್ದಾರೆ. “ನನ್ನ 53ನೇ ಚಿತ್ರದ ಥೀಮ್‌ ಪೋಸ್ಟರ್‌ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು ನಿರ್ದೇಶಕ ಈ ಪೋಸ್ಟರ್‌ ಮೂಲಕ ತಿಳಿಸಲು ಯತ್ನಿಸಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಸಹ
ಶೀಘ್ರದಲ್ಲೇ ಅಧಿಕೃತವಾಗಿ ಹೇಳಲಿದ್ದೇವೆ’ ಎಂದಿದ್ದಾರೆ ದರ್ಶನ್‌. 

ಸದ್ಯ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ದರ್ಶನ್‌ ತನ್ನ ರಕ್ತಸಿಕ್ತ ಬಲಗೈನಲ್ಲಿ ಪುಟ್ಟ ಮಗುವಿನ ಕೈಯೊಂದನ್ನು ಹಿಡಿದುಕೊಂಡಿದ್ದಾರೆ. ಪೋಸ್ಟರ್‌ನ ಕೆಳಭಾಗದಲ್ಲಿ ‘ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು’ ಎಂದು ಬರೆಯಲಾಗಿದೆ.
ದರ್ಶನ್‌ ಎದುರು ಹತ್ತು ತಲೆಯ ರಾವಣನ ಕಟೌಟ್‌ವೊಂದು ಎದ್ದು ನಿಂತಿದೆ. ಇದನ್ನೆಲ್ಲ ನೋಡುತ್ತಿದ್ದರೆ ಇದು ಪಕ್ಕಾ ಮಾಸ್‌ ಚಿತ್ರ ಅನ್ನೋದು ಅಭಿಮಾನಿಗಳ ಲೆಕ್ಕಾಚಾರ.

ಆರಂಭದಲ್ಲಿ, “ಚೌಕ’ ಚಿತ್ರದಲ್ಲಿ ದರ್ಶನ್‌ ಅತಿಥಿ ಕಲಾವಿದನಾಗಿ “ರಾಬರ್ಟ್‌’ ಎಂಬ ಖಡಕ್‌ ಪಾತ್ರದಲ್ಲಿ ಪ್ರೇಕ್ಷಕರ ಮನಗೆದ್ದಿದ್ದರಿಂದ, ಅವರ 53ನೇ ಚಿತ್ರಕ್ಕೂ “ರಾಬರ್ಟ್‌’ ಎಂದೇ ಹೆಸರಿಡಲಾಗಿದೆ ಎನ್ನಲಾಗುತ್ತಿತ್ತು. ಆದರೆ ಈಗ ಆ ಎಲ್ಲಾ ಊಹೆಗಳು ತಲೆಕೆಳಗಾಗಿದ್ದು, ದರ್ಶನ್‌ ರಾಬರ್ಟ್‌ ಬದಲು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಯೋಚನೆಯೂ ಅಭಿಮಾನಿಗಳ ತಲೆಯಲ್ಲಿ ಓಡಾಡುತ್ತಿದೆ!

ಆದರೆ ಚಿತ್ರತಂಡ ಮಾತ್ರ ಈ ಪೋಸ್ಟರ್‌ನಲ್ಲಿ ಎಲ್ಲಿಯೂ ಚಿತ್ರದ ಶೀರ್ಷಿಕೆಯನ್ನು ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ, ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಮುಂದಿನ ಡಿಸೆಂಬರ್‌ ವೇಳೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಲಿದೆ ಎನ್ನಲಾಗುತ್ತಿದೆ. “ಚೌಕ’ ಚಿತ್ರದ ಬಳಿಕ ನಿರ್ದೇಶಕ ತರುಣ್‌ ಸುಧೀರ್‌, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, “ಹೆಬ್ಬುಲಿ’, “ಒಂದಲ್ಲಾ… ಎರಡಲ್ಲಾ’, ಚಿತ್ರವನ್ನು ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.