Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
Team Udayavani, Apr 17, 2024, 3:30 PM IST
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕಲೆಯ ಪೂಜೆ ಮಾಡಿದ್ದ ದ್ವಾರಕೀಶ್ ಇನ್ನು ನೆನಪಾಗಿ ಮಾತ್ರ ಉಳಿದಿದ್ದಾರೆ. ಬುಧವಾರ(ಏ.17 ರಂದು) ಸಕಲ ಪೊಲೀಸ್ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನ ನೆರವೇರಿತು.
ಚಾಮರಾಜಪೇಟೆಯ ಟಿಆರ್ ಮಿಲ್ನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಅವರ ಪುತ್ರರ ಸಮ್ಮುಖದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿತು.
ಅವರ ಹಿರಿಯ ಪುತ್ರ ಸಂತೋಷ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ಹಾಜರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಲಾಗಿದೆ.
ಕನ್ನಡ ಸಿನಿಮಾರಂಗಕ್ಕೆ ಅಪಾರ ಸೇವೆಯನ್ನು ನೀಡಿದ್ದ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಅಭಿಮಾನಿಗಳು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ