ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ನಟಿ ರಾಧಿಕಾಗೆ ಗಾಯ 

Team Udayavani, Feb 9, 2019, 3:23 PM IST

ಬೆಂಗಳೂರು: ನಟಿ ರಾಧಿಕಾ ಅವರು ಸಿನಿಮಾ  ಚಿತ್ರೀಕರಣ ನಡೆಯುತ್ತಿದ್ದ ವೇಳೆ ಬಿದ್ದು ಗಾಯಗೊಂಡಿದ್ದು ವೈದ್ಯರು ಅವರಿಗೆ ತಿಂಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಶಾಂತಿನಗರದ ಸ್ಮಶಾನದಲ್ಲಿ  ಗುರುವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಘಟನೆ ನಡೆದಿದ್ದು ,ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಭೈರಾದೇವಿ ಚಿತ್ರದ ಚಿತ್ರಿಕರಣ ನಡೆಯುತ್ತಿದ್ದ ವೇಳೆ ರಾಧಿಕಾ ಅವರು ಗೋರಿಯೊಂದರ ಮೇಲಿಂದ ಬಿದ್ದಿದ್ದು, ಅವರ ಸೊಂಟ ಮತ್ತು ಕಾಲಿಗೆ ಗಾಯವಾಗಿತ್ತು. ಕೂಡಲೆ ಅವರನ್ನು ಸœಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯದ ಹೊರತಾಗಿಯೂ ಮರುದಿನ ಮತ್ತೆ ಚಿತ್ರೀಕರಣಕ್ಕೆ ಬಂದ ಕಾರಣ ನೋವು ಹೆಚ್ಚಾಗಿದೆ.ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿಗೆ ಸೂಚನೆ ನೀಡಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ