
ಜೋಗಪ್ಪನ ಅರಮನೆಯಲ್ಲಿ ಸಂಜನಾ ದಾಸ್
Team Udayavani, Mar 24, 2023, 10:59 AM IST

ಹಯವದನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ “ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ತಂಡ ನಾಯಕಿಯನ್ನು ಪರಿಚಯಿಸಿದೆ. ಈಗಾಗಲೇ ವೆನ್ಯ ರೈ ಎಂಬ ನವ ಪ್ರತಿಭೆಯನ್ನು ನಾಯಕಿಯಾಗಿ ಪರಿಚಯಿಸಿರುವ ಸಿನಿಮಾ ತಂಡ ಇದೀಗ ಚಿತ್ರಕ್ಕೆ ಮತ್ತೂಬ್ಬ ನಟಿಮಣಿ ಸಂಜನಾ ದಾಸ್ ರನ್ನು ಕರೆ ತಂದಿದೆ.
ಕನ್ನಡದಲ್ಲಿ “ಕೆಟಿಎಂ’, “ಮೂನ್ ವಾಕ್’ ಹಾಗೂ ಮಲಯಾಳಂ ನಲ್ಲಿ “ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಅನೇಕ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಹಯವದನ ನಿರ್ದೇಶನದ “ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ.
ಇದನ್ನೂ ಓದಿ:ವೃತ್ತಿಜೀವನದ 800ನೇ ಗೋಲು ಗಳಿಸಿದ ಲಿಯೋನೆಲ್ ಮೆಸ್ಸಿ; ವಿಡಿಯೋ ನೋಡಿ
“ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ತಂಡ ಮಹಾರಾಷ್ಟ್ರದಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದಲ್ಲಿ “ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿದ್ದಾರೆ. ತಂದೆ ಮಗನ ಬಾಂಧವ್ಯದ ಜೊತೆಗೆ ಪ್ರೇಮ್ ಕಹಾನಿ, ಕಾಮಿಡಿ ಹಾಗೂ ಸೆಂಟಿಮೆಂಟ್ ಎಲಿಮೆಂಟ್ ಗಳನ್ನ ಒಳಗೊಂಡ ಜರ್ನಿ ಸಿನಿಮಾ ಇದಾಗಿದೆ.
ಚಿತ್ರದಲ್ಲಿ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಬಿರಾದರ್ ಒಳಗೊಂಡ ತಾರಾಬಳಗವಿದೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
