
ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…
Team Udayavani, Aug 2, 2021, 9:43 PM IST

ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ‘ಲೂಸಿಯಾ’ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ಕಾಂಬಿನೇಷನ್ ನಲ್ಲಿ ಸಿದ್ಧವಾಗಲಿರುವ ‘ದ್ವಿತ್ವ’ ಚಿತ್ರಕ್ಕೆ ತ್ರಿಷಾ ಕೃಷ್ಣನ್ ನಾಯಕಿಯಾಗಲಿದ್ದಾರೆ ಎನ್ನುವ ಸುದ್ದಿ ಕೆಲ ದಿನಗಳ ಹಿಂದೆ ಕೇಳಿ ಬಂದಿತ್ತು. ಇದೀಗ ಅದು ಕನ್ಫರ್ಮ್ ಆಗಿದೆ.
ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಸಂಸ್ಥೆ ತ್ರಿಷಾ ಆಗಮನವನ್ನು ಖಚಿತಪಡಿಸಿ ಇಂದು ಟ್ವೀಟ್ ಮಾಡಿದೆ.
The leading lady of #Dvitva is here.
We welcome the talented @trishtrashers on board.@PuneethRajkumar @VKiragandur @hombalefilms@Pawanfilms @HombaleGroup @DvitvaMovie pic.twitter.com/waNkU7FY92— Hombale Films (@hombalefilms) August 2, 2021
‘ಲೂಸಿಯಾ’ ಖ್ಯಾತಿಯ ಪವನ್ ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಈ ಸಿನಿಮಾದಲ್ಲಿ ಅಪ್ಪು ನಾಯಕ ನಟರಾಗಿ ಅಭಿನಯಿಸಲಿದ್ದಾರೆ. ಇದೆ ಮೊದಲ ಬಾರಿಗೆ ಪುನೀತ್ ಹಾಗೂ ಪವನ್ ಕುಮಾರ್ ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಸಿನಿಮಾದ ಫಸ್ಟ್ ಲುಕ್ ಸಿನಿ ಪ್ರೇಮಿಗಳಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಚಿತ್ರಕ್ಕೆ ನಾಯಕಿ ಫೈನಲ್ ಆಗಿರುವುದು ಅಪ್ಪು ಅಭಿಮಾನಿಗಳಿಗೆ ಖುಷಿ ತಂದಿದೆ.
ಇನ್ನು ಸೌತ್ ಸಿನಿಮಾ ರಂಗದ ಸುಂದರಿ ತ್ರಿಷಾ ಕೃಷ್ಣನ್ ಎರಡನೇ ಬಾರಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮುಂಚೆ 2014ರಲ್ಲಿ ತೆರೆಕಂಡಿದ್ದ ‘ಪವರ್’ ಚಿತ್ರದಲ್ಲಿ ತ್ರಿಷಾ ಅಭಿನಯಿಸಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾ ಆಗಿತ್ತು.
ಇನ್ನು ದ್ವಿತ್ವ ಚಿತ್ರವನ್ನು ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲಂಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
