ವೇದಿಕಾ ಗ್ಲಾಮರಸ್ ಫೋಟೋ ವೈರಲ್
Team Udayavani, Dec 2, 2020, 10:19 AM IST
ಕೋವಿಡ್ ಲಾಕ್ಡೌನ್ ಮುಗಿಯುತ್ತಿದ್ದಂತೆ, ಒಬ್ಬೊಬ್ಬರಾಗಿ ನಟಿಮಣಿಯರು ವಿದೇಶದ ಸುಂದರ ತಾಣಗಳತ್ತ ಮುಖ ಮಾಡಿ ರಿಲ್ಯಾಕ್ಸ್ ಮೂಡ್ಗೆ ಜಾರುತ್ತಿದ್ದಾರೆ. ಇತ್ತೀಚೆಗಷ್ಟೇ ಕನ್ನಡದ ನಟಿಯರಾದ ಶಾನ್ವಿ ಶ್ರೀವಾಸ್ತವ್, ಪ್ರಣೀತಾ ಸುಭಾಷ್ ಸೇರಿದಂತೆ ಅನೇಕ ನಟಿಯರು ಮಾಲ್ಡೀವ್ಸ್ಗೆ ತೆರಳಿ ಕೆಲ ಸಮಯಕಳೆದಿದ್ದರು. ಇದೀಗ ದಕ್ಷಿಣ ಭಾರತದ ಮತ್ತೂಬ್ಬ ನಟಿ ವೇದಿಕಾ ಕೂಡ ಮಾಲ್ಡೀವ್ಸ್ಗೆ ಹಾರಿದ್ದಾರೆ.
ಇದನ್ನೂ ಓದಿ : ಚಿತ್ರೀಕರಣದತ್ತ ಉಪ್ಪಿ ಕಬ್ಜ
ಮಾಲ್ಡೀವ್ಸ್ನ ಕಡಲ ಕಿನಾರೆಯ ಸುಂದರ ಪರಿಸರದಲ್ಲಿ ಕಾಲ ಕಳೆಯುತ್ತಿರುವ ವೇದಿಕಾ, ತಮ್ಮ ಒಂದಷ್ಟು ಹಾಟ್ ಎನಿಸುವಂಥ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದ್ದು, ವೇದಿಕಾ ಹಾಟ್ ಲುಕ್ ಸಿನಿಪ್ರಿಯರು ಫಿದಾ ಆಗಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಸಂಗಮ’ ಚಿತ್ರದ ಮೂಲಕ ನಾಯಕ ನಟಿಯಾಗಿ ಸ್ಯಾಂಡಲ್ವುಡ್ಗೆ ಪರಿಚಯವಾದ ವೇದಿಕಾ, ನಂತರ “ಗೌಡ್ರು ಹೋಟೆಲ್’, “ಶಿವಲಿಂಗ’ ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಸದ್ಯ ವೇದಿಕಾ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ “ಹೋಮ್ ಮಿನಿಸ್ಟರ್’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ