ಅದಿತಿ ಕೈಯಲ್ಲಿ “ಓಲ್ಡ್‌ ಮಾಂಕ್‌’

ಓಲ್ಡೇಜ್‌ ಲವರ್ಸ್‌ಗೆ ಆಗ್ತಾರೆ ಸೇತುವೆ!

Team Udayavani, Jan 29, 2020, 7:03 AM IST

ಶ್ರೀನಿ ಅಭಿನಯದ “ಓಲ್ಡ್‌ ಮಾಂಕ್‌’ ಚಿತ್ರತಂಡಕ್ಕೆ ಇದೀಗ ಅದಿತಿ ಪ್ರಭುದೇವ ಹೊಸದಾಗಿ ಎಂಟ್ರಿಯಾಗಿದ್ದಾರೆ. ಹೌದು, ಕಳೆದ ಕೆಲ ತಿಂಗಳಿನಿಂದ “ಒಲ್ಡ್‌ ಮಾಂಕ್‌’ ಚಿತ್ರಕ್ಕೆ ನಾಯಕಿಯ ಹುಡುಕಾಟದಲ್ಲಿದ್ದ ಚಿತ್ರತಂಡ, ಇದೀಗ ಚಿತ್ರಕ್ಕೆ ಅದಿತಿ ಪ್ರಭುದೇವ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಶ್ರೀನಿ, “ನಮ್ಮ ಸಿನಿಮಾದ ಹೀರೋಯಿನ್‌ ಕ್ಯಾರೆಕ್ಟರ್‌ಗಾಗಿ ಹುಡುಕಾಟ ನಡೆಸಿದ್ದೆವು.

ಇದೀಗ ಅದಿತಿ ಹೀರೋಯಿನ್‌ ಆಗಿ ನಮ್ಮ ಟೀಮ್‌ ಸೇರಿಕೊಳ್ಳುತ್ತಿದ್ದಾರೆ. ಹೀರೋಯಿನ್‌ ಪಾತ್ರಕ್ಕೆ ತುಂಬ ಲವಲವಿಕೆಯಿಂದಿರುವ ಮತ್ತು ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವವರು ಬೇಕಾಗಿತ್ತು. ನಮ್ಮ ಸಿನಿಮಾದ ಆ ಕ್ಯಾರೆಕ್ಟರ್‌ಗೆ ಅದಿತಿ ಹೊಂದಾಣಿಕೆಯಾಗುತ್ತಿದ್ದರಿಂದ ಅವರನ್ನೇ ಹೀರೋಯಿನ್‌ ಆಗಿ ಸೆಲೆಕ್ಟ್ ಮಾಡಿ ಕೊಂಡಿದ್ದೇವೆ. ಅದಿತಿ ಕೂಡ ತುಂಬಾ ಖುಷಿಯಿಂದ ಈ ಕ್ಯಾರೆಕ್ಟರ್‌ ಒಪ್ಪಿಕೊಂಡಿದ್ದಾರೆ.

ಸಿನಿಮಾದಲ್ಲಿ ಓಲ್ಡ್‌ ಏಜ್‌ ಲವರ್ ಹೋಮ್‌ ನಡೆಸುತ್ತಿರುವ ಹೀರೋಯಿನ್‌, ಅಲ್ಲಿರುವ ವಯಸ್ಸಾದವರಿಗೆ ತಮ್ಮ ಹಳೆಯ ಗರ್ಲ್ಸ್‌ ಫ್ರೆಂಡ್ಸ್‌ ಅಥವಾ ಬಾಯ್‌ ಫ್ರೆಂಡ್ಸ್‌ನ ಹುಡುಕಿ ಅವರನ್ನು ಮೀಟ್‌ ಮಾಡಿಸುವ ಕೆಲಸ ಮಾಡುತ್ತಿರುತ್ತಾಳೆ. ಯಾವಾಗಲೂ ಎಲ್ಲರಿಗೂ ಅಚ್ಚುಮೆಚ್ಚಾಗಿರುವ, ಲೈವ್ಲಿಯಾಗಿರುವಂಥ ಪಾತ್ರವದು. ಇದನ್ನು ಅದಿತಿ ತುಂಬ ಚೆನ್ನಾಗಿ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ ಶ್ರೀನಿ.

ಫೆಬ್ರವರಿಯಿಂದ ಅದಿತಿ “ಓಲ್ಡ್‌ ಮಾಂಕ್‌’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದು, ಬೆಂಗಳೂರು ಮತ್ತು ಮೈಸೂರು ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಚಿತ್ರದಲ್ಲಿ ಹಿರಿಯ ನಟ ಕಂ ನಿರ್ದೇಶಕ ಎಸ್‌. ನಾರಾಯಣ್‌ ನಾಯಕನ ತಂದೆಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.

ಇನ್ನು “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಅಭಿನಯಿಸಲು, ಕಳೆದ ಎರಡು ತಿಂಗಳಿನಿಂದ ಕರ್ನಾಟಕ ರಾಜ್ಯದಾದ್ಯಂತ ಹೊಸ ಪ್ರತಿಭೆಗಳಿಗಾಗಿ ಆಡಿಷನ್‌ ನಡೆಸಿದ್ದ ಚಿತ್ರತಂಡ, ಚಿತ್ರದ ಬಹುತೇಕ ಪಾತ್ರಗಳಿಗೆ ಸರಿ ಹೊಂದುವಂಥ ಅನೇಕ ಹೊಸ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಂಡಿದೆಯಂತೆ. ಅಂದಹಾಗೆ, ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಜುಲೈ ವೇಳೆಗೆ “ಓಲ್ಡ್‌ ಮಾಂಕ್‌’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ

  • ಬೇಸಾಯ ಲಾಭದಾಯಕ ಅಲ್ಲ ಎನ್ನುವ ತೀರ್ಮಾನಕ್ಕೆ ಬಂದಿರುವ ರೈತರು ಪರ್ಯಾಯ ಉದ್ಯೋಗಗಳ ಹುಡುಕಾಟದಲ್ಲಿದ್ದಾರೆ. ಆದರೆ ಕೆಲವರು ಬೇಸಾಯದಲ್ಲೇ ಬದುಕು ರೂಪಿಸಿಕೊಳ್ಳುವ...

  • ಹಿಂದೆಲ್ಲಾ ಈಡೀ ಊರಿಗೆ ಒಂದೇ ಒಂದು ಎಸ್‌.ಟಿ.ಡಿ. ಬೂತ್‌ ಇರುತ್ತಿತ್ತು. ಇದು ದಶಕಗಳ ಹಿಂದಿನ ಮಾತು. ಆಗ, ಯಾರ ಬಳಿಯೂ ಮೊಬೈಲ್‌ ಇರುತ್ತಿರಲಿಲ್ಲವಾದ್ದರಿಂದ ಊರವರು...

  • ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ? - ಮಂಜುನಾಥ ಪಟೇಲ್‌,...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...